ನವದೆಹಲಿ: ಭಾರತೀಯ ಒಲಂಪಿಕ್ ಸಂಸ್ಥೆಯ ಅಧ್ಯಕ್ಷರಾಗಿ ಮಾಜಿ ಓಟಗಾರ್ತಿ, ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಪಿಟಿ ಉಷಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಉಷಾ ಅವರನ್ನು ಹೊರತುಪಡಿಸಿ ಯಾರೊಬ್ಬರೂ ಉಮೇದುವಾರಿಕೆ ಸಲ್ಲಿಸದ ಕಾರಣ ವಿರೋಧ ಆಯ್ಕೆ ನಡೆದಿದೆ.
ಒಲಂಪಿಕ್ ಸಂಸ್ಥೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಿಟಿ ಉಷಾ ಅವರು ಪಾತ್ರರಾದರು. ಇನ್ನುಳಿದಂತೆ ಉಪಾಧ್ಯಕ್ಷ(ಮಹಿಳೆ), ಜಂಟಿ ಕಾರ್ಯದರ್ಶಿ(ಮಹಿಳೆ) ನಾಲ್ಕು ಕಾರ್ಯಕಾರಿ ಮಂಡಳಿ ಸದಸ್ಯ ಸ್ಥಾನಕ್ಕೆ 12 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದು, ಡಿಸೆಂಬರ್ 10 ರಂದು ಚುನಾವಣೆ ನಡೆಯಲಿದೆ. ಉಷಾ ಅವರು ಭಾನುವಾರ 14 ಬೆಂಬಲಿಗರೊಂದಿಗೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…