ಕ್ರೀಡೆ

ಮೈದಾನಕ್ಕೇ ಇಳಿಯದೆ ಹೊರ ನಡೆದ ಕ್ರಿಕೆಟಿಗ

ಮಧ್ಯಪ್ರದೇಶದ ವೇಗದ ಬೌಲರ್ ಈಶ್ವರ್ ಪಾಂಡೆ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ದೇಶೀಯ ಅಂಗಳದಲ್ಲಿ ಮಿಂಚುತ್ತಿದ್ದ ಈಶ್ವರ್​ಗೆ ವರ್ಷಗಳ ಹಿಂದೆಯೇ  ಟೀಮ್ ಇಂಡಿಯಾದ ಬಾಗಿಲು ತೆರೆದಿತ್ತು. ಆದರೆ ಆ ಅದೃಷ್ಟ ಆ ಬಳಿಕ ದುರಾದೃಷ್ಟವಾಗಿದ್ದು ಮಾತ್ರ ವಿಪರ್ಯಾಸ. ಅಂದರೆ ಟೀಮ್ ಇಂಡಿಯಾ ಪರ ಆಯ್ಕೆಯಾಗಿದ್ದರೂ ಒಂದೇ ಒಂದು ಪಂದ್ಯವಾಡುವ ಅವಕಾಶ ಮಾತ್ರ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿನಲ್ಲೇ ನಿವೃತ್ತಿಯ ನಿರ್ಧಾರ ತೆಗೆದುಕೊಂಡಿದ್ದಾರೆ.

ದೇಶೀಯ ಅಂಗಳದಲ್ಲಿ ಅತ್ಯುತ್ತಮ ಬಲಗೈ ವೇಗದ ಬೌಲರ್ ಆಗಿ ಕಾಣಿಸಿಕೊಂಡಿದ್ದ ಈಶ್ವರ್ ಪಾಂಡೆ, 75 ಪ್ರಥಮ ದರ್ಜೆ ಪಂದ್ಯಗಳಲ್ಲಿ 263 ವಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಹಾಗೆಯೇ ಲಿಸ್ಟ್ ಎ ನಲ್ಲಿ 63 ಮತ್ತು ಟಿ20 ಕ್ರಿಕೆಟ್‌ನಲ್ಲಿ 71 ವಿಕೆಟ್ ಪಡೆದು ಮಿಂಚಿದ್ದರು. ಪರಿಣಾಮ 2014 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಈಶ್ವರ್ ಪಾಂಡೆ ಆಯ್ಕೆಯಾಗಿದ್ದರು. ಆದರೆ ಕಿವೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಕಣಕ್ಕಿಳಿಯಲು ಮಾತ್ರ ಅವಕಾಶ ಸಿಕ್ಕಿರಲಿಲ್ಲ.

2013 ರಲ್ಲಿ ಪುಣೆ ವಾರಿಯರ್ಸ್​ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಐಪಿಎಲ್​ಗೆ ಪದಾರ್ಪಣೆ ಮಾಡಿದ್ದ ಈಶ್ವರ್ ಪಾಂಡೆ, 2015 ರಲ್ಲಿ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರ ಆಡಿದ್ದರು. ಅದರಂತೆ ಐಪಿಎಲ್‌ನಲ್ಲಿ 25 ಪಂದ್ಯಗಳನ್ನು ಆಡಿರುವ ಈಶ್ವರ್ ಪಾಂಡೆ ಒಟ್ಟು 18 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಆದರೆ 2016 ರ ಬಳಿಕ ಮಧ್ಯಮ ಪ್ರದೇಶದ ಈ ವೇಗಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದರೊಂದಿಗೆ ಐಪಿಎಲ್​ನಿಂದಲೂ ಪಾಂಡೆ ಹೆಸರು ಮರೆಯಾಯಿತು.

ಇದೀಗ ಮತ್ತೆ ಈಶ್ವರ್ ಪಾಂಡೆ ಹೆಸರು ಕೇಳಿ ಬಂದಿರುವುದು 33 ವಯಸ್ಸಿನಲ್ಲಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವ ಮೂಲಕ ಎಂಬುದು ವಿಶೇಷ. ಅಂದರೆ ಟೀಮ್ ಇಂಡಿಯಾ ಪರ ಅವಕಾಶ ಪಡೆದರೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಭಾಗ್ಯ ಸಿಗದಿರುವ ನೋವು ಕಾಡುತ್ತಿದೆ ಎಂದು ಈಶ್ವರ್ ಪಾಂಡೆ ತಿಳಿಸಿದ್ದಾರೆ.

andolana

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

3 mins ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

9 mins ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

10 mins ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

11 mins ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

12 mins ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

13 mins ago