Mysore
26
clear sky

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಆಘಾತ: ಫೈನಲ್‌ನಿಂದ ವಿನೇಶ್‌ ಫೋಗಟ್‌ ಅನರ್ಹ

ಪ್ಯಾರಿಸ್:‌ ಭಾರತಕ್ಕೆ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಸಿಗುತ್ತದೆ ಎಂಬ ಕನಸು ಕಾಣುತ್ತಿದ್ದ ಕೋಟ್ಯಾಂತರ ಜನರ ಆಸೆ ಈಗ ನುಚ್ಚು ನೂರಾಗಿದೆ.

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಫೈನಲ್‌ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್‌ ಫೋಗಟ್‌ ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ ಕುಸ್ತಿಯಿಂದ ಅನರ್ಹಗೊಂಡಿದ್ದಾರೆ.

ಮಹಿಳಾ ಕುಸ್ತಿ 50 ಕೆಜಿ ವಿಭಾಗದಿಂದ ವಿನೇಶ್‌ ಫೋಗಟ್‌ ಅವರನ್ನು ಅನರ್ಹಗೊಳಿಸಿದ ಸುದ್ದಿಯನ್ನು ಭಾರತೀಯ ತಂಡವು ವಿಷಾದದಿಂದ ಹಂಚಿಕೊಂಡಿದೆ.

ರಾತ್ರಿಯಿಡೀ ವಿನೇಶ್‌ ಫೋಗಟ್‌ ಅವರು, 150 ಗ್ರಾಂ ತೂಕ ಇಳಿಸಲು ಶತ ಪ್ರಯತ್ನ ಪಟ್ಟಿದ್ದಾರೆ. ಆದರೂ ವಿನೇಶ್‌ ಫೋಗಟ್‌ ಶ್ರಮ ಫಲಕಾರಿಯಾಗದೇ ಅವರನ್ನು ಕುಸ್ತಿಯಿಂದ ಅನರ್ಹಗೊಳಿಸಲಾಗಿದೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಆಘಾತಕ್ಕೆ ಒಳಗಾದ ವಿನೇಶ್‌ ಫೋಗಟ್‌ ಅವರು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ವಿಷಯ ತಿಳಿದ ಕುಟುಂಬಸ್ಥರು ಕೂಡ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಇದು ರಾಜಕೀಯ ಪ್ರೇರಿತ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿದ್ದು, ವಿನೇಶ್‌ ಫೋಗಟ್‌ಗೆ ಧೈರ್ಯ ತುಂಬಿದ್ದಾರೆ.

Tags:
error: Content is protected !!