ಪ್ಯಾರಿಸ್: ಭಾರತಕ್ಕೆ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಸಿಗುತ್ತದೆ ಎಂಬ ಕನಸು ಕಾಣುತ್ತಿದ್ದ ಕೋಟ್ಯಾಂತರ ಜನರ ಆಸೆ ಈಗ ನುಚ್ಚು ನೂರಾಗಿದೆ.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ ಕುಸ್ತಿಯಿಂದ ಅನರ್ಹಗೊಂಡಿದ್ದಾರೆ.
ಮಹಿಳಾ ಕುಸ್ತಿ 50 ಕೆಜಿ ವಿಭಾಗದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಸುದ್ದಿಯನ್ನು ಭಾರತೀಯ ತಂಡವು ವಿಷಾದದಿಂದ ಹಂಚಿಕೊಂಡಿದೆ.
ರಾತ್ರಿಯಿಡೀ ವಿನೇಶ್ ಫೋಗಟ್ ಅವರು, 150 ಗ್ರಾಂ ತೂಕ ಇಳಿಸಲು ಶತ ಪ್ರಯತ್ನ ಪಟ್ಟಿದ್ದಾರೆ. ಆದರೂ ವಿನೇಶ್ ಫೋಗಟ್ ಶ್ರಮ ಫಲಕಾರಿಯಾಗದೇ ಅವರನ್ನು ಕುಸ್ತಿಯಿಂದ ಅನರ್ಹಗೊಳಿಸಲಾಗಿದೆ.
ಈ ಸುದ್ದಿ ತಿಳಿಯುತ್ತಿದ್ದಂತೆ ಆಘಾತಕ್ಕೆ ಒಳಗಾದ ವಿನೇಶ್ ಫೋಗಟ್ ಅವರು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ವಿಷಯ ತಿಳಿದ ಕುಟುಂಬಸ್ಥರು ಕೂಡ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಇದು ರಾಜಕೀಯ ಪ್ರೇರಿತ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ವಿನೇಶ್ ಫೋಗಟ್‌ಗೆ ಧೈರ್ಯ ತುಂಬಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…