ಕ್ರೀಡೆ

ಸಾರ್ವಕಾಲಿಕ ಏಕದಿನ ಇಂಡಿಯಾ ತಂಡ ಪ್ರಕಟಿಸಿದ ಗೌತಿ: ಧೋನಿ ಇನ್‌, ರೋಹಿತ್‌ ಔಟ್‌

ಟೀಂ ಇಂಡಿಯಾ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಅವರು ಟೀಂ ಇಂಡಿಯಾ ಪರವಾಗಿ ಸಾರ್ವಕಾಲಿಕ ಏಕದಿನ ತಂಡವನ್ನು ಪ್ರಕಟಿಸಿದ್ದಾರೆ.

ಸ್ಪೋರ್ಟ್ಸ್‌ ವೆಬ್‌ಸೈಟ್‌ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ತಂಡವನ್ನು ಪ್ರಕಟಿಸಿದ್ದು, ಅಚ್ಚರಿಯಂಬಂತೆ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರನ್ನು ಉಲ್ಲೇಖಿಸಿದ್ದಾರೆ. ಆದರೆ ಭಾರತೀಯ ಕ್ರಿಕೆಟ್‌ಗಾಗಿ ದುಡಿದ ಹಲವು ಲೆಜೆಂಡ್‌ ಆಟಗಾರರನ್ನೇ ಗೌತಿ ಕೈ ಬಿಟ್ಟಿದ್ದಾರೆ.

ಪ್ರಸಕ್ತ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರಿಗೆ ಕೋಕ್‌ ಕೊಟ್ಟಿರುವ ಗೌತಮ್‌, ತಂಡ ಪರವಾಗಿ ಆರಂಭಿಕರಾಗಿ ತಮ್ಮ ಹೆಸರಿನ ಜೊತೆಗೆ ವಿರೇಂದ್ರ ಸೆಹ್ವಾಗ್‌ ಅವರ ಹೆಸರನ್ನು ತೆಗೆದುಕೊಂಡಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ರಾಹುಲ್‌ ದ್ರಾವಿಡ್‌ ಹೆಸರಿಸಿದರೆ ನಾಲ್ಕು ಮತ್ತು ಐದನೇ ಕ್ರಮಾಂಕದಲ್ಲಿ ದಿಗ್ಗಜ ಸಚಿನ್‌ ತೆಂಡುಲ್ಕರ್‌ ಹಾಗೂ ರನ್‌ ಮಷಿನ್‌ ವಿರಾಟ್‌ ಕೊಹ್ಲಿ ಹೆಸರಿದೆ. ಆರನೇ ಸ್ಥಾನದಲ್ಲಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌, ಏಳನೇ ಸ್ಥಾನದಲ್ಲಿ ಮಹೇಂದ್ರ ಸಿಂಗ್‌ ಧೋನಿ, ಉಳಿದಂತೆ ಬೌಲರ್‌ಗಳಾದ ಅನಿಲ್‌ ಕುಂಬ್ಳೆ, ಆರ್‌. ಅಶ್ವಿನ್‌, ಇರ್ಫಾನ್‌ ಪಠಾಣ್‌ ಹಾಗೂ ಜಹೀರ್‌ ಖಾನ್‌ ಅವರು ಗೌತಿ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ಉಳಿದಂತೆ ಟೀಂ ಇಂಡಿಯಾಗೆ ಮೊದಲು ವಿಶ್ವಕಪ್‌ ಗೆದ್ದುಕೊಟ್ಟ ಕಪಿಲ್‌ ದೇವ್‌, ಮಾಜಿ ನಾಯಕ ಸೌರವ್‌ ಗಂಗೂಲಿ, ಜಸ್‌ಪ್ರಿತ್‌ ಬುಮ್ರಾ, ರವೀಂದ್ರ ಜಡೇಜಾ, ಜವಾಗಲ್‌ ಶ್ರೀನಾಥ್‌‌ ಹಾಗೂ ಹರ್ಭಜನ್‌ ಸಿಂಗ್‌ರಂತಹ ಆಟಗಾರರನ್ನು ಕೈಬಿಟ್ಟಿದ್ದಾರೆ.

ಗಂಭೀರ್‌ ತಂಡ ಇಂತಿದೆ: ಗೌತಮ್‌ ಗಂಭೀರ್‌, ವಿರೇಂದ್ರ ಸೆಹ್ವಾಗ್‌, ರಾಹುಲ್‌ ದ್ರಾವಿಡ್‌, ಸಚಿನ್‌ ತೆಂಡುಲ್ಕರ್‌, ವಿರಾಟ್‌ ಕೊಹ್ಲಿ, ಯುವರಾಜ್‌ ಸಿಂಗ್‌, ಮಹೇಂದ್ರ ಸಿಂಗ್‌ ಧೋನಿ (ವಿಕೆಟ್‌ ಕೀಪರ್‌), ಅನಿಲ್‌ ಕುಂಬ್ಳೆ, ಆರ್‌. ಅಶ್ವಿನ್‌, ಇರ್ಫಾನ್‌ ಪಠಾಣ್‌ ಮತ್ತು ಜಹೀರ್‌ ಖಾನ್‌.

ಇದೇ ಸೆಪ್ಟೆಂಬರ್‌ 19 ರಿಂದ ಬಾಂಗ್ಲಾದೇಶದ ವಿರುದ್ಧ ಭಾರತ ತಂಡ ತನ್ನ ತವರಿನಲ್ಲಿ ಟೆಸ್ಟ್‌ ಸರಣಿ ಆಡಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

24 mins ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

4 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

4 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

4 hours ago