ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ತನ್ನ ಅಮೊಘ ಪ್ರದರ್ಶನ ತೋರುವ ಮೂಲಕ ಹಲವಾರು ದಾಖಲೆಗಳನ್ನು ನಿರ್ಮಿಸಿದೆ.
ತವರು ನೆಲದಲ್ಲಿ ಟೂರ್ನಿ ಆಯೋಜಿಸಿರುವ ಭಾರತ ಅಂದುಕೊಂಡಂತೆ ಅತ್ಯತ್ತಮ ಪ್ರದರ್ಶನ ತೋರುವಲ್ಲಿ ಸಫಲವಾಗಿದೆ. ದೈತ್ಯ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ವಿಭಾಗ ಹೊಂದಿದ್ದು, ವಿಶ್ವ ಶ್ರೇಷ್ಠ ತಂಡಗಳನ್ನೇ ಮಣ್ಣು ಮುಕ್ಕಿಸುವಲ್ಲಿ ಭಾರತ ಯಶಸ್ವಿಯಾಗಿದೆ.
ಈ ಟೂರ್ನಿಯಲ್ಲಿ ಲೀಗ್‌ನಲ್ಲಿ ತಾನಾಡಿದ ಎಲ್ಲಾ 9 ಪಂದ್ಯಗಳನ್ನು ಗೆಲ್ಲುವ ಮೂಲಕ ನೂತನ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.
ರನ್ ಮೆಷಿನ್ ಕಿಂಗ್ ಕೊಹ್ಲಿ 594 ರನ್ ಕಲೆಹಾಕಿ ಟೂರ್ನಿಯಲ್ಲಿ ಅತ್ಯಧಿಕ ರನ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಇನ್ನು ವರ್ಲ್ಡ್ ಕಪ್ ಒಂದರಲ್ಲಿ ಸತತ ಎರಡು ಬಾರಿ 5 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಖ್ಯಾತಿಗೆ ಶಮಿ ಭಾಜನರಾಗಿದ್ದಾರೆ. ಇದನ್ನೊರತು ಪಡಿಸಿ ಈ ಬಾರಿಯ ವರ್ಲ್ಡ್ ಕಪ್‌ನಲ್ಲಿ ಭಾರತದ ಕೆಲವೊಂದು ದಾಖಲೆಗಳ ಚಿತ್ರನ ಇಲ್ಲಿದೆ.
ವಿಶ್ವಕಪ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಮೊದಲ ಐದು ಬ್ಯಾಟ್ಸ್‌ಮನ್‌ಗಳು 50+ ರನ್ ಬಾರಿಸಿದ್ದಾರೆ
ಬೆಸ್ಟ್ ಬ್ಯಾಟಿಂಗ್ ಲೈನ್ ಅಪ್
ವಿರಾಟ್ ಕೊಹ್ಲಿ – 594 ರನ್‌ಗಳು
ರೋಹಿತ್ ಶರ್ಮಾ – 503 ರನ್‌ಗಳು
ಶ್ರೇಯಸ್ ಐಯ್ಯರ್ – 421 ರನ್‌ಗಳು
ಕೆಎಲ್ ರಾಹುಲ್ – 347 ರನ್‌ಗಳು
ಶುಬ್ಮನ್ ಗಿಲ್ – 270 ರನ್‌ಗಳು
ಕೆಎಲ್ ರಾಹುಲ್ ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ ಭಾರತದ ಎರಡನೇ ವಿಕೆಟ್ ಕೀಪರ್ ಎಂಬ ದಾಖಲೆ ಬರೆದಿದ್ದಾರೆ. ಈ ಹಿಂದೆ ರಾಹುಲ್ ದ್ರಾವಿಡ್ ವಿಶ್ವಕಪ್ ಶತಕ ಬಾರಿಸಿದ್ದರು. ಈ ಮೂಲಕ ಈ ದಾಖಲೆ ಕನ್ನಡಿಗರ ಹೆಸರಿನಲ್ಲಿ ಮಾತ್ರ ಇದೆ.
ಕೆಎಲ್ ರಾಹುಲ್ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿಶ್ವಕಪ್ ಇತಿಹಾಸದಲ್ಲಿ ಅತಿ ವೇಗವಾಗಿ ಶತಕ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆ ಬರೆದಿದ್ದಾರೆ
ರೋಹಿತ್ ಶರ್ಮಾ ಈ ವರ್ಷ 60 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ವರ್ಷವೊಂದರಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟ್ಸ್‌ಮನ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ. ಈ ಹಿಂದೆ ಎಬಿ ಡಿವಿಲಿಯರ್ಸ್ ವರ್ಷವೊಂದರಲ್ಲಿ 58 ಸಿಕ್ಸರ್ ಬಾರಿಸಿದ ದಾಖಲೆ ಬರೆದಿದ್ದರು
ವಿಶ್ವಕಪ್‌ನಲ್ಲಿ ಭಾರತದ ಪರ ಅತಿಹೆಚ್ಚು ರನ್ ಬಾರಿಸಿದ ವಿಕೆಟ್ ಕೀಪರ್ ಎಂಬ ದಾಖಲೆ ಬರೆದ ಕೆಎಲ್ ರಾಹುಲ್.
ನೆದರ್‌ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ಶತಕ ಬಾರಿಸಿರುವ ಹಿಟ್ ಮ್ಯಾನ್ ವರ್ಲ್ಡ್ ಕಪ್ ಟೂರ್ನಿಯೊಂದರಲ್ಲಿ ಸತತ ಎರಡು ಬಾರಿ 500ರನ್ ದಾಖಲಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ದಾಖಲೆಯನ್ನು ರೋಹಿತ್ ಶರ್ಮಾ 2019 ಮತ್ತು 2023 ರಲ್ಲಿ 500+ ರನ್ ಬಾರಿಸಿದ್ದಾರೆ. ಈ ಹಿಂದೆ ಸಚಿನ್ ತೆಂಡುಲ್ಕರ್ ಅವರು 1996 ಮತ್ತು 2003 ರಲ್ಲಿ 500ಕ್ಕೂ ಅಧಿಕ ರನ್ ಬಾರಿಸಿದ್ದು ಈವರೆಗಿನ ದಾಖಲೆಯಾಗಿತ್ತು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…