ಕ್ರೀಡೆ

ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್‌ಗೆ 21 ತಿಂಗಳ ಕಾಲ ನಿಷೇಧ

ನವದೆಹಲಿ: ಉದ್ಧೀಪನ ಮದ್ದು ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರಿಗೆ 21 ತಿಂಗಳ ಕಾಲ ನಿಷೇಧ ಹೇರಲಾಗಿದೆ.

ಕಳೆದ ವರ್ಷ ಮಾಡಲಾಗಿದ್ದ ಅವರ ಅಮಾನತು, ಉದ್ಧೀಪನ ಮದ್ದು ಅಪರಾಧಕ್ಕೆ ಸಂಬಂಧಿಸಿದ್ದಲ್ಲ ಎಂದು ಭಾರತೀಯ ಅಧಿಕಾರಿಗಳು ನೀಡಿದ್ದ ಹೇಳಿಕೆಗಳಿಗೆ ಈ ಆದೇಶ ವ್ಯತಿರಿಕ್ತವಾಗಿದೆ.

ಅಂತರರಾಷ್ಟ್ರೀಯ ಜಿಮ್ನಾಸ್ಟಿಕ್ಸ್ ಫೆಡರೇಶನ್ (ಎಫ್‌ಐಜಿ)ನ ಡೋಪಿಂಗ್ ವಿರೋಧಿ ಚಟುವಟಿಕೆಗಳನ್ನು ನಿರ್ವಹಿಸುವ ಸ್ವತಂತ್ರ ಸಂಸ್ಥೆ ಅಂತರರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಐಟಿಎ) ಸಂಗ್ರಹಿಸಿದ್ದ, ಕರ್ಮಾಕರ್ ಅವರ ಪ್ರಯೋಗಾಲಯ ಮಾದರಿಯಲ್ಲಿ ಕಂಡುಬಂದಿರುವ ‘ಹೈಜೆನಾಮೈನ್’ ಅಂಶವು ವಿಶ್ವ ಉದ್ದೀಪನ ವಿರೋಧಿ ಸಂಸ್ಥೆಯ ನೀಯಮಗಳ ಅಡಿಯಲ್ಲಿ ನಿಷೇಧಿಸಲ್ಪಟ್ಟಿರುವುದಾಗಿದೆ.

ದೀಪಾ ಅವರ ನಿಷೇಧದ ಅವಧಿಯು ಇದೇ ವರ್ಷ ಜುಲೈ 10ಕ್ಕೆ ಮುಕ್ತಾಯಗೊಳ್ಳಲಿದೆ. ಉದ್ದೀಪನ ಮದ್ದು ಪರೀಕ್ಷೆ ಮಾದರಿ ಸಂಗ್ರಹಿಸಿದ ದಿನದಿಂದ ನಿಷೇಧವನ್ನು ಅನ್ವಯಿಸಲಾಗಿದೆ.

‘ದೀಪಾ ಅವರ ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಹೈಜೆನಾಮೈನ್ ಪತ್ತೆಯಾಗಿರುವ ಕಾರಣ ಅವರನ್ನು 21 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ ಎಂದು ಐಟಿಎ ದೃಢಪಡಿಸುತ್ತದೆ, ಇದು 10 ಜುಲೈ 2023ರವರೆಗೆ ಅನ್ವಯವಾಗುತ್ತದೆ’ಎಂದು ಐಟಿಎ ಶುಕ್ರವಾರ ತಡರಾತ್ರಿ ಹೇಳಿಕೆಯಲ್ಲಿ ತಿಳಿಸಿದೆ.

ಸ್ವಿಟ್ಜರ್‌ಲೆಂಡ್ ಮೂಲದ ಐಟಿಎ, ಆದಾಯ ರಹಿತ ಸಂಘಟನೆಯಾಗಿದ್ದು, ವಾಡಾ ಮತ್ತು ಅಂತರರಾಷ್ಟ್ರೀಯ ಒಲಿಪಿಂಕ್ ಸಮಿತಿಯ ಕಣ್ಗಾವಲಿನಲ್ಲಿ ವಿವಿಧ ಅಂತರರಾಷ್ಟ್ರೀಯ ಕ್ರೀಡಾ ಫೆಡರೇಶನ್‌ಗಳಿಗೆ ಉದ್ಧಿಪನಾ ಮದ್ದು ವಿರೋಧಿ ಕಾರ್ಯಕ್ರಮಗಳ ಜಾರಿಗಾಗಿ ಕೆಲಸ ಮಾಡುತ್ತದೆ.

andolanait

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

8 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

12 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

12 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

13 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

14 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

14 hours ago