ಡಾಮ್ನಿಕಾ: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಭಾರತ ತಂಡದ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ಐತಿಹಾಸಿಕ ದಾಖಲೆ ಬರೆದಿದ್ದು, ಆ್ಯಂಡರ್‌ಸನ್ ದಾಖಲೆಯನ್ನು ಮುರಿದಿದ್ದಾರೆ.
Most five-wicket hauls in India-West Indies Tests
6 – Malcolm Marshall
5 – Harbhajan Singh
5 – Ravichandran Ashwin
ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಬೌಲಿಂಗ್ ವಿಭಾಗದಲ್ಲಿ ಅಗ್ರ ಸ್ಥಾನದಲ್ಲಿರುವ ಅಶ್ವಿನ್ ಈವರೆಗೆ ಒಟ್ಟು 33 ಬಾರಿ ಇನಿಂಗ್ಸ್‌ವೊಂದರಲ್ಲಿ 5 ವಿಕೆಟ್ ಗೊಂಚಲು ಸಾಧನೆ ಮಾಡಿದ್ದಾರೆ. ಆ ಮೂಲಕ ಹೆಚ್ಚು ಸಲ ಒಂದೇ ಇನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.
32 ಸಲ ಈ ಸಾಧನೆ ಮಾಡಿರುವ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್‌ಸನ್ ಇದೀಗ 7ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಗೊಂಚಲು ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಶ್ರೀಲಂಕಾದ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್ ಇದ್ದು ಅವರು ಒಟ್ಟು 67 ಬಾರಿ 5 ವಿಕೆಟ್ ಗಳ ಗೊಂಚಲು ಪಡೆದಿದ್ದಾರೆ. ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಇದ್ದು ಅವರು ಒಟ್ಟು 37 ಬಾರಿ ಈ ಸಾಧನೆ ಮಾಡಿದ್ದಾರೆ.
ಮೂರನೇ ಸ್ಥಾನದಲ್ಲಿ ನ್ಯೂಜಿಲೆಂಡ್ ನ ರಿಟರ್ಡ್ ಹಡ್ಲೀ ಇದ್ದು ಅವರು 36 ಬಾರಿ ಈ ಸಾಧನೆ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ ಅನಿಲ್ ಕುಂಬ್ಳೆ ಇದ್ದು ಅವರು 35 ಬಾರಿ 5 ವಿಕೆಟ್ ಗೊಂಚಲು ಪಡೆದಿದ್ದಾರೆ. 5ನೇ ಸ್ಥಾನದಲ್ಲಿ ಶ್ರೀಲಂಕಾದ ರಂಗನಾ ಹೆರಾತ್ ಇದ್ದು ಅವರು 34 ಮತ್ತು ನಂತರದ ಸ್ಥಾನದಲ್ಲಿರುವ ಆರ್ ಅಶ್ವಿನ್ 33 ಬಾರಿ ಸಾಧನೆ ಮಾಡಿ 6ನೇ ಸ್ಥಾನಕ್ಕೇರಿದ್ದಾರೆ.
India bowlers with most Test five-fors in the West Indies
3 – Subhash Gupte
3 – Anil Kumble
3 – Harbhajan Singh
3 – Ishant Sharma
3 – Ravichandran Ashwin
ವಿಂಡೀಸ್ ವಿರುದ್ಧವೂ ದಾಖಲೆ
ಇನ್ನು ಭಾರತ-ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಗಳಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಸಾಧನೆ ಮಾಡಿದ ಬೌಲರ್ ಗಳ ಪಟ್ಟಿಯಲ್ಲೂ ಅಶ್ವಿನ್ ಸ್ಥಾನ ಪಡೆದಿದ್ದು, 5 ಬಾರಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ 6 ಬಾರಿ 5 ವಿಕೆಟ್ ಪಡೆದ ಮಾಲ್ಕಮ್ ಮಾರ್ಷಲ್ ಅಗ್ರಸ್ಥಾನದಲ್ಲಿದ್ದು, 5 ಬಾರಿ ಈ ಸಾಧನೆ ಮಾಡಿದ ಹರ್ಭಜನ್ ಸಿಂಗ್ ಮತ್ತು ಅಶ್ವಿನ್ ಜಂಟಿ 2ನೇ ಸ್ಥಾನದಲ್ಲಿದ್ದಾರೆ.