ಕ್ರೀಡೆ

ಇಂಡೋ-ವಿಂಡೀಸ್ ಟೆಸ್ಟ್: ಮೊದಲ ಟೆಸ್ಟ್ ನಲ್ಲಿ ದಾಖಲೆ ಬರೆದ ಆರ್ ಅಶ್ವಿನ್

ಡಾಮ್ನಿಕಾ: ವೆಸ್ಟ್‌ ಇಂಡೀಸ್‌ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಕ್ರಿಕೆಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಭಾರತ ತಂಡದ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ಐತಿಹಾಸಿಕ ದಾಖಲೆ ಬರೆದಿದ್ದು, ಆ್ಯಂಡರ್‌ಸನ್ ದಾಖಲೆಯನ್ನು ಮುರಿದಿದ್ದಾರೆ.

ಹೌದು.. ವಿಂಡೀಸ್ ವಿರುದ್ಧ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 60 ರನ್ ನೀಡಿ ಐದು ವಿಕೆಟ್ ಪಡೆದ ಆರ್ ಅಶ್ವಿನ್ ಆ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನ 33ನೇ ಬಾರಿ ಇನಿಂಗ್ಸ್‌ವೊಂದರಲ್ಲಿ 5 ವಿಕೆಟ್‌ ಗೊಂಚಲು ಪಡೆದರು. ಅಂತೆಯೇ ಆರ್‌.ಅಶ್ವಿನ್‌ ಅವರು ಇಂಗ್ಲೆಂಡ್‌ ವೇಗಿ ಜೇಮ್ಸ್ ಆ್ಯಂಡರ್ಸನ್‌ ಅವರ ದಾಖಲೆ ಮುರಿದಿದ್ದಾರೆ.

Most five-wicket hauls in India-West Indies Tests
6 – Malcolm Marshall
5 – Harbhajan Singh
5 – Ravichandran Ashwin

ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಬೌಲಿಂಗ್ ವಿಭಾಗದಲ್ಲಿ ಅಗ್ರ ಸ್ಥಾನದಲ್ಲಿರುವ ಅಶ್ವಿನ್‌ ಈವರೆಗೆ ಒಟ್ಟು 33 ಬಾರಿ ಇನಿಂಗ್ಸ್‌ವೊಂದರಲ್ಲಿ 5 ವಿಕೆಟ್‌ ಗೊಂಚಲು ಸಾಧನೆ ಮಾಡಿದ್ದಾರೆ. ಆ ಮೂಲಕ ಹೆಚ್ಚು ಸಲ ಒಂದೇ ಇನಿಂಗ್ಸ್‌ನಲ್ಲಿ 5 ವಿಕೆಟ್‌ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.

32 ಸಲ ಈ ಸಾಧನೆ ಮಾಡಿರುವ ಇಂಗ್ಲೆಂಡ್‌ ವೇಗಿ ಜೇಮ್ಸ್‌ ಆ್ಯಂಡರ್‌ಸನ್‌ ಇದೀಗ 7ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಗೊಂಚಲು ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಶ್ರೀಲಂಕಾದ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್ ಇದ್ದು ಅವರು ಒಟ್ಟು 67 ಬಾರಿ 5 ವಿಕೆಟ್ ಗಳ ಗೊಂಚಲು ಪಡೆದಿದ್ದಾರೆ. ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಇದ್ದು ಅವರು ಒಟ್ಟು 37 ಬಾರಿ ಈ ಸಾಧನೆ ಮಾಡಿದ್ದಾರೆ.

ಮೂರನೇ ಸ್ಥಾನದಲ್ಲಿ ನ್ಯೂಜಿಲೆಂಡ್ ನ ರಿಟರ್ಡ್ ಹಡ್ಲೀ ಇದ್ದು ಅವರು 36 ಬಾರಿ ಈ ಸಾಧನೆ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ ಅನಿಲ್ ಕುಂಬ್ಳೆ ಇದ್ದು ಅವರು 35 ಬಾರಿ 5 ವಿಕೆಟ್ ಗೊಂಚಲು ಪಡೆದಿದ್ದಾರೆ. 5ನೇ ಸ್ಥಾನದಲ್ಲಿ ಶ್ರೀಲಂಕಾದ ರಂಗನಾ ಹೆರಾತ್ ಇದ್ದು ಅವರು 34 ಮತ್ತು ನಂತರದ ಸ್ಥಾನದಲ್ಲಿರುವ ಆರ್ ಅಶ್ವಿನ್ 33 ಬಾರಿ ಸಾಧನೆ ಮಾಡಿ 6ನೇ ಸ್ಥಾನಕ್ಕೇರಿದ್ದಾರೆ.

India bowlers with most Test five-fors in the West Indies
3 – Subhash Gupte
3 – Anil Kumble
3 – Harbhajan Singh
3 – Ishant Sharma
3 – Ravichandran Ashwin

ವಿಂಡೀಸ್ ವಿರುದ್ಧವೂ ದಾಖಲೆ
ಇನ್ನು ಭಾರತ-ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಗಳಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಸಾಧನೆ ಮಾಡಿದ ಬೌಲರ್ ಗಳ ಪಟ್ಟಿಯಲ್ಲೂ ಅಶ್ವಿನ್ ಸ್ಥಾನ ಪಡೆದಿದ್ದು, 5 ಬಾರಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ 6 ಬಾರಿ 5 ವಿಕೆಟ್ ಪಡೆದ ಮಾಲ್ಕಮ್ ಮಾರ್ಷಲ್ ಅಗ್ರಸ್ಥಾನದಲ್ಲಿದ್ದು, 5 ಬಾರಿ ಈ ಸಾಧನೆ ಮಾಡಿದ ಹರ್ಭಜನ್ ಸಿಂಗ್ ಮತ್ತು ಅಶ್ವಿನ್ ಜಂಟಿ 2ನೇ ಸ್ಥಾನದಲ್ಲಿದ್ದಾರೆ.

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

45 mins ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

2 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

2 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

2 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

2 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

2 hours ago