ಟ್ರಿನಿಡಾಡ್ (ವೆಸ್ಟ್ ಇಂಡೀಸ್): ಇಲ್ಲಿನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ಇಂದಿನಿಂದ ಆರಂಭವಾದ ಎರಡನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟ್ ಮಾಡಲಿದೆ.
ವೇಗದ ಬೌಲಿಂಗ್ ಆಲ್‌ರೌಂಡರ್ ಶಾರ್ದುಲ್ ಠಾಕೂರ್ ಅವರು ಸಂಪೂರ್ಣ ಫಿಟ್ ಇಲ್ಲದ ಕಾರಣ ಅವರ ಬದಲು ಟ್ರಿನಿಡಾಡ್ ಟೆಸ್ಟ್ ಪಂದ್ಯಕ್ಕೆ ಮುಖೇಶ್ ಕುಮಾರ್‌ಗೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಮೊದಲನೇ ಪಂದ್ಯವಾಡಿದ್ದ ಅದೇ ಆಟಗಾರನನ್ನು ಎರಡನೇ ಪಂದ್ಯಕ್ಕೆ ಉಳಿಸಿಕೊಳ್ಳಲಾಗಿದೆ. ಇನ್ನು ವೆಸ್ಟ್ ಇಂಡೀಸ್ ತಂಡಕ್ಕೆ ಶೆನನ್ ಗ್ಯಾಬ್ರಿಯಲ್ ಮರಳಿದ್ದು, ಕಿರ್ಕ್ ಮೆಕೆಂಜಿ ಅವರಿಗೆ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.
ಇನ್ನು ಮೊದಲನೃ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್‌ಗಳಿಂದ ಗೆಲುವು ಪಡೆದಿತ್ತು. ಇದೀಗ ಅದೇ ಲಯವನ್ನು ಮುಂದುವರಿಸಲು ಟೀಮ್ ಇಂಡಿಯಾ ಎದುರು ನೋಡುತ್ತಿದೆ. ಆದರೆ, ಮೊದಲನೇ ಪಂದ್ಯದ ಹೀನಾಯ ಸೋಲಿನಿಂದ ಎಚ್ಚೆತ್ತುಕೊಂಡಿರುವ ಆತಿಥೇಯ ವೆಸ್ಟ್ ಇಂಡೀಸ್ ತಂಡ, ಎರಡನೇ ಟೆಸ್ಟ್ ಗೆದ್ದು ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಳ್ಳಲು ಎದುರು ನೋಡುತ್ತಿದೆ.
ವಿರಾಟ್ ದಾಖಲೆ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈಗಾಗಲೇ ಹಲವು ದಾಖಲೆಗಳನ್ನು ಬರೆದು ಕಿಂಗ್ ಎನಿಸಿಕೊಂಡಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಮತ್ತೊಂದು ದಾಖಲೆಯ ಸನಿಹದಲ್ಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಯುವ ಮೂಲಕ ರನ್ ಮಷೀನ್ ಖ್ಯಾತಿಯ ವಿರಾಟ್ ಕೊಹ್ಲಿ ಭಾರತದ ಪರ 500 ಅಂತಾರಾಷ್ಟ್ರೀಯ ಪಂದ್ಯಗಳನ್ನು ಪೂರ್ಣಗೊಳಿಸಲಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಯುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500 ಪಂದ್ಯಗಳನ್ನು ಪೂರ್ಣಗೊಳಿಸಲಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ ಹಾಗೂ ರಾಹುಲ್ ದ್ರಾವಿಡ್ ಅವರನ್ನೊಳಗೊಂಡ ಎಲೈಟ್ ಪಟ್ಟಿಗೆ ವಿರಾಟ್ ಕೊಹ್ಲಿ ಸೇರ್ಪಡೆಯಾಗಲಿದ್ದಾರೆ.
ಸಚಿನ್ ತೆಂಡೂಲ್ಕರ್-664
ಎಂಎಸ್ ಧೋನಿ-535
ರಾಹುಲ್ ದ್ರಾವಿಡ್-504
ವಿರಾಟ್ ಕೊಹ್ಲಿ-499
ರೋಹಿತ್ ಶರ್ಮಾ-442
ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್(ವಿ.ಕೀ), ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕಟ್, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಡಿ ಚಾರ್ಜ್‌ಶೀಟ್ ಪರಿಗಣಿಸಲು ಕೋರ್ಟ್…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ ನೀಡಿ ತಾಯಿಯ ದರ್ಶನ…
ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ…
ಮೈಸೂರಿನ ಲಷ್ಕರ್ ಮೊಹಲ್ಲಾದ ವೀರನಗೆರೆ ಮಾರಿಗುಡಿ ಸ್ಥಳದಲ್ಲಿ ಕುಡಿಯುವ ನೀರಿನ ಪೈಪು ಒಡೆದಿದ್ದು, ದುರಸ್ತಿ ಮಾಡಿದರೂ ಕಳಪೆ ಕಾಮಗಾರಿಯಿಂದಾಗಿ ಮತ್ತೆ…
ಕಳೆದ ೧೫ ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ೧೭ ಲಕ್ಷ ದಷ್ಟು(ಶೇ.೩೦) ಕಡಿಮೆಯಾಗಿರುವುದರ ಬಗ್ಗೆ ವಿಧಾನ…