ಕ್ರೀಡೆ

ಇಂಡೋ-ವಿಂಡೀಸ್‌ ದ್ವಿತೀಯ ಟೆಸ್ಟ್‌: ಟಾಸ್‌ ಸೋತ ಭಾರತ ಮೊದಲು ಬ್ಯಾಟಿಂಗ್‌!

ಟ್ರಿನಿಡಾಡ್‌ (ವೆಸ್ಟ್ ಇಂಡೀಸ್‌): ಇಲ್ಲಿನ ಕ್ವೀನ್ಸ್‌ ಪಾರ್ಕ್‌ ಓವಲ್ ಮೈದಾನದಲ್ಲಿ ಇಂದಿನಿಂದ ಆರಂಭವಾದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟ್‌ ಮಾಡಲಿದೆ.

ವೇಗದ ಬೌಲಿಂಗ್‌ ಆಲ್‌ರೌಂಡರ್ ಶಾರ್ದುಲ್‌ ಠಾಕೂರ್‌ ಅವರು ಸಂಪೂರ್ಣ ಫಿಟ್‌ ಇಲ್ಲದ ಕಾರಣ ಅವರ ಬದಲು ಟ್ರಿನಿಡಾಡ್‌ ಟೆಸ್ಟ್‌ ಪಂದ್ಯಕ್ಕೆ ಮುಖೇಶ್‌ ಕುಮಾರ್‌ಗೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಮೊದಲನೇ ಪಂದ್ಯವಾಡಿದ್ದ ಅದೇ ಆಟಗಾರನನ್ನು ಎರಡನೇ ಪಂದ್ಯಕ್ಕೆ ಉಳಿಸಿಕೊಳ್ಳಲಾಗಿದೆ. ಇನ್ನು ವೆಸ್ಟ್ ಇಂಡೀಸ್‌ ತಂಡಕ್ಕೆ ಶೆನನ್‌ ಗ್ಯಾಬ್ರಿಯಲ್‌ ಮರಳಿದ್ದು, ಕಿರ್ಕ್‌ ಮೆಕೆಂಜಿ ಅವರಿಗೆ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.

ಇನ್ನು ಮೊದಲನೃ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್‌ಗಳಿಂದ ಗೆಲುವು ಪಡೆದಿತ್ತು. ಇದೀಗ ಅದೇ ಲಯವನ್ನು ಮುಂದುವರಿಸಲು ಟೀಮ್‌ ಇಂಡಿಯಾ ಎದುರು ನೋಡುತ್ತಿದೆ. ಆದರೆ, ಮೊದಲನೇ ಪಂದ್ಯದ ಹೀನಾಯ ಸೋಲಿನಿಂದ ಎಚ್ಚೆತ್ತುಕೊಂಡಿರುವ ಆತಿಥೇಯ ವೆಸ್ಟ್ ಇಂಡೀಸ್‌ ತಂಡ, ಎರಡನೇ ಟೆಸ್ಟ್‌ ಗೆದ್ದು ಟೆಸ್ಟ್‌ ಸರಣಿಯನ್ನು ಡ್ರಾ ಮಾಡಿಕೊಳ್ಳಲು ಎದುರು ನೋಡುತ್ತಿದೆ.

ವಿರಾಟ್‌ ದಾಖಲೆ:  ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈಗಾಗಲೇ ಹಲವು ದಾಖಲೆಗಳನ್ನು ಬರೆದು ಕಿಂಗ್‌ ಎನಿಸಿಕೊಂಡಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಇದೀಗ ಮತ್ತೊಂದು ದಾಖಲೆಯ ಸನಿಹದಲ್ಲಿದ್ದಾರೆ. ವೆಸ್ಟ್ ಇಂಡೀಸ್‌ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಯುವ ಮೂಲಕ ರನ್ ಮಷೀನ್‌ ಖ್ಯಾತಿಯ ವಿರಾಟ್‌ ಕೊಹ್ಲಿ ಭಾರತದ ಪರ 500 ಅಂತಾರಾಷ್ಟ್ರೀಯ ಪಂದ್ಯಗಳನ್ನು ಪೂರ್ಣಗೊಳಿಸಲಿದ್ದಾರೆ.

ಎಲೈಟ್‌ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ ಕೊಹ್ಲಿ

ವೆಸ್ಟ್ ಇಂಡೀಸ್‌ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಯುವ ಮೂಲಕ ವಿರಾಟ್‌ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500 ಪಂದ್ಯಗಳನ್ನು ಪೂರ್ಣಗೊಳಿಸಲಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ಕ್ರಿಕೆಟ್‌ ದಿಗ್ಗಜರಾದ ಸಚಿನ್‌ ತೆಂಡೂಲ್ಕರ್‌, ಎಂಎಸ್‌ ಧೋನಿ ಹಾಗೂ ರಾಹುಲ್‌ ದ್ರಾವಿಡ್‌ ಅವರನ್ನೊಳಗೊಂಡ ಎಲೈಟ್‌ ಪಟ್ಟಿಗೆ ವಿರಾಟ್‌ ಕೊಹ್ಲಿ ಸೇರ್ಪಡೆಯಾಗಲಿದ್ದಾರೆ.

ಭಾರತದ ಪರ ಅತಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳಾಡಿದ ಆಟಗಾರರು

ಸಚಿನ್‌ ತೆಂಡೂಲ್ಕರ್‌-664
ಎಂಎಸ್‌ ಧೋನಿ-535
ರಾಹುಲ್‌ ದ್ರಾವಿಡ್‌-504
ವಿರಾಟ್‌ ಕೊಹ್ಲಿ-499
ರೋಹಿತ್‌ ಶರ್ಮಾ-442

ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್(ವಿ.ಕೀ), ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕಟ್‌, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago