ಕ್ರೀಡೆ

INS vs NZ | ಮಿಚೆಲ್‌ ಅಬ್ಬರಕ್ಕೆ ರಾಹುಲ್‌ ಶತಕ ವ್ಯರ್ಥ : ಭಾರತಕ್ಕೆ ಸೋಲು

ರಾಜ್‌ಕೋಟ್ : ಡೆರಿಲ್ ಮಿಚೆಲ್ ಅಮೋಘ ಶತಕ (131) ಹಾಗೂ ವಿಲ್ ಯಂಗ್ (87) ಅರ್ಧಶತಕದ ನೆರವಿನಿಂದ ಆತಿಥೇಯ ಭಾರತ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಏಳು ವಿಕೆಟ್ ಅಂತರದ ಜಯ ದಾಖಲಿಸಿದೆ. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1ರ ಅಂತರದ ಸಮಬಲ ಸಾಧಿಸಿದೆ. ಇದರೊಂದಿಗೆ ಕನ್ನಡಿಗ ಕೆ.ಎಲ್. ರಾಹುಲ್ (112) ಅವರ ಶಕತವು ವ್ಯರ್ಥವಾಗಿದೆ.

ಭಾರತ ಒಡ್ಡಿದ 285 ರನ್‌ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 47.3 ಓವರ್ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ನ್ಯೂಜಿಲೆಂಡ್ ಆರಂಭಿಕ ಆಘಾತ ಅನುಭವಿಸಿದರೂ ಮೂರನೇ ವಿಕೆಟ್ಗೆ 167 ರನ್‌ಗಳ ಜೊತೆಯಾಟ ಕಟ್ಟಿದ ಡೆರಿಲ್ ಮಿಚೆಲ್ ಹಾಗೂ ವಿಲ್ ಯಂಗ್ ತಂಡವನ್ನು ಗೆಲುವಿನ ದಡ ಸೇರಿಸಿದರು.

ಆಕ್ರಮಣಕಾರಿ ಆಟ ಪ್ರದರ್ಶಿಸಿದ ಮಿಚೆಲ್ ಅಮೋಘ ಶತಕ ಸಾಧನೆ ಮಾಡಿದರು. 117 ಎಸೆತಗಳಲ್ಲಿ 131 ರನ್ ಗಳಿಸಿ (11 ಬೌಂಡರಿ, 2 ಸಿಕ್ಸರ್) ಔಟಾಗದೆ ಉಳಿದರು. ಅವರಿಗೆ ಸಾಥ್ ನೀಡಿದ ವಿಲ್ ಯಂಗ್ 87 ರನ್ ಗಳಿಸಿ ಔಟ್ ಆದರು. 98 ಎಸೆತಗಳನ್ನು ಎದುರಿಸಿದ ಯಂಗ್ ಇನಿಂಗ್ಸ್‌ನಲ್ಲಿ ಏಳು ಬೌಂಡರಿಗಳು ಸೇರಿದ್ದವು. ಕೊನೆಯಲ್ಲಿ ಗ್ಲೆನ್ ಪಿಲಿಫ್ಸ್ ಅಜೇಯ 32 ರನ್‌ಗಳ ಉಪಯುಕ್ತ ಕಾಣಿಕೆ ನೀಡಿದರು. ಭಾರತದ ಪರ ಹರ್ಷೀತ್ ರಾಣಾ, ಪ್ರಸಿದ್ಧ ಕೃಷ್ಣ ಹಾಗೂ ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಗಳಿಸಿದರು. ವಡೋದರದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್ ಅಂತರದ ಗೆಲುವು ದಾಖಲಿಸಿತ್ತು. ಸರಣಿಯ ಕೊನೆಯ ಪಂದ್ಯವು ಜ.18ರಂದು ಇಂದೋರ್‌ನಲ್ಲಿ ನಡೆಯಲಿದೆ.

ಈ ಮೊದಲು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್ಗಳ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 284 ರನ್ ಗಳಿಸಿತು. ರಾಜ್ಕೋಟ್ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡವು, ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಭಾರತದ ಪರ ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ 24 ರನ್ (38 ಎಸೆತ) ಮತ್ತೆ ನಿರಾಸೆ ಅನುಭವಿಸಿದರು. ಅತ್ಯುತ್ತಮ ಲಯದಲ್ಲಿದ್ದ ವಿರಾಟ್ ಕೊಹ್ಲಿ (23 ರನ್; 29 ಎಸೆತ) ಕೂಡ ಬೇಗನೇ ವಿಕೆಟ್ ಒಪ್ಪಿಸಿದರು. ನಾಯಕ ಶುಭಮನ್ ಗಿಲ್ (56 ರನ್; 53 ಎಸೆತ) ಅರ್ಧಶಕತ ಸಿಡಿಸಿ, ಕೈಲ್ ಜೇಮಿಸನ್ಗೆ ವಿಕೆಟ್ ಒಪ್ಪಿಸಿದರು. ಶ್ರೇಯಸ್ ಐಯ್ಯರ್ ಕೇವಲ 8 ರನ್ ಗಳಿಸುವ ಮೂಲಕ ನಿರಾಸೆ ಮೂಡಿಸಿದರು.

ಭಾರತದ ಬ್ಯಾಟರ್ಗಳು ಆರಂಭದಲ್ಲಿ ರನ್ ಗಳಿಸಲು ಪರದಾಡಿದರು. 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್. ರಾಹುಲ್ ಅವರು ಶತಕ ಸಿಡಿಸುವ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಿದರು. ಅಜೇಯ 112 ರನ್ (92 ಎಸೆತ) ಬಾರಿಸಿದರು. ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಂದ ರವೀಂದ್ರ ಜಡೇಜಾ (27 ರನ್) ಹಾಗೂ ನಿತೀಶ್ ಕುಮಾರ್ ರೆಡ್ಡಿ (20 ರನ್) ಕೆಲಕಾಲ ರಾಹುಲ್ಗೆ ಸಾಥ್ ನೀಡಿದರು. ನ್ಯೂಜಿಲೆಂಡ್ ಪರ ವೇಗದ ಬೌಲರ್ ಕ್ರಿಸ್ಟಿಯನ್ ಕ್ಲಾರ್ಕ್ 3 ವಿಕೆಟ್ ಪಡೆದು ಮಿಂಚಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಾಹನ ಸವಾರರು ಹೆಲ್ಮೆಟ್‌ ಬಳಸುತ್ತಿದ್ದಾರೆಯೇ? : ಜಾಗೃತಿ ಮೂಡಿಸಲು ಬಂದ ಯಮಧರ್ಮ

ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ…

4 hours ago

ಬಳ್ಳಾರಿ ಗಲಭೆ | ಪಾದಯಾತ್ರೆಗೆ ಬಿಜೆಪಿಯಲ್ಲಿ ಭಿನ್ನಮತ

ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…

4 hours ago

ವರ್ಕ್ ಫ್ರಮ್ ಹೋಮ್ ಕೆಲಸ | ಮಹಿಳೆಗೆ 9.7 ಲಕ್ಷ ರೂ. ವಂಚನೆ

ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…

4 hours ago

ಎರಡು ಪ್ರತ್ಯೇಕ ಅಪಘಾತ : ಇಬ್ಬರು ಸಾವು

ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…

5 hours ago

ಸಂಕ್ರಾಂತಿಗೆ ಸಾಂಸ್ಕೃತಿಕ ನಗರಿ ಸಜ್ಜು : ಎಲ್ಲೆಲ್ಲೂ ಶಾಪಿಂಗ್ ಸಡಗರ

ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ…

5 hours ago

ಬೆಳೆಗೆ ನೀರು ಹಾಯಿಸುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ : ರೈತ ಗಂಭೀರ

ಹನೂರು : ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನೋರ್ವ ಗಂಭೀರವಾಗಿ ಕೈಗೊಂಡಿರುವ…

7 hours ago