ಇಂದು ( ಡಿಸೆಂಬರ್ 19 ) ದುಬೈನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ಸ್ ಕಮಿನ್ಸ್ ಬರೋಬ್ಬರಿ 20.50 ಕೋಟಿ ರೂಪಾಯಿಗಳಿಗೆ ಸನ್‌ರೈಸರ್ಸ್ ಹೈದರಾಬಾದ್ ಪಾಲಾಗಿದ್ದಾರೆ.
2 ಕೋಟಿ ರೂಪಾಯಿಗಳ ಮುಖಬೆಲೆಯೊಂದಿಗೆ ಹರಾಜಿಗೆ ಇಳಿದಿದ್ದ ವಿಶ್ವಕಪ್ ವಿನ್ನಿಂಗ್ ನಾಯಕನ ಖರೀದಿಗಾಗಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. 20.25 ಕೋಟಿ ರೂಪಾಯಿಗಳವರೆಗೂ ಬಿಡ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ 20.50 ಕೋಟಿ ಬಿಡ್ ಮಾಡಿದ ನಂತರ ರೇಸ್‌ನಿಂದ ಹಿಂದೆ ಸರಿಯಿತು.
ಈ ಮೂಲಕ ಈ ಹಿಂದೆ ಸ್ಯಾಮ್ ಕರನ್ ಹೆಸರಿನಲ್ಲಿದ್ದ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆದ ಆಟಗಾರ ಎಂಬ ದಾಖಲೆಯನ್ನು ಪ್ಯಾಟ್ ಕಮಿನ್ಸ್ ಮುರಿದುಹಾಕಿದ್ದಾರೆ. ಕಳೆದ ಬಾರಿಯ ಹರಾಜಿನಲ್ಲಿ ಸ್ಯಾಮ್ ಕರನ್ ಅವರನ್ನು ಪಂಜಾಬ್ ಕಿಂಗ್ಸ್ ತಂಡ 18.5 ಕೋಟಿಗೆ ಖರೀದಿಸಿತ್ತು. ಇನ್ನು 2020ರ ಐಪಿಎಲ್ ಹರಾಜಿನಲ್ಲಿ ಪ್ಯಾಟ್ ಕಮಿನ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 15.5 ಕೋಟಿಗೆ ಬಿಕರಿಯಾಗಿದ್ದರು.
ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…