ಕ್ರೀಡೆ

ಐಪಿಎಲ್‌ 2023: ಚೆನ್ನೈ-ಲಖನೌ ಪಂದ್ಯಕ್ಕೆ ಮಳೆ ಅಡ್ಡಿ

ಲಖನೌ: ಲಖನೌ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಣ ಪಂದ್ಯವು ಮಳೆಯಿಂದಾಗಿ ಸ್ಥಗಿತಗೊಂಡಿತು. ಉಭಯ ತಂಡಗಳಿಗೂ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು.

ಆದರೆ, ಲಖನೌ ತಂಡದ ಆಯುಷ್‌ ಬಡೋಣಿಯ ಅರ್ಧಶತಕ ಕ್ರಿಕೆಟ್ ಅಭಿಮಾನಿಗಳಿಗೆ ಮುದ ನೀಡಿತು. ಬುಧವಾರ ಬೆಳಿಗ್ಗೆ ಸುರಿದಿದ್ದ ಮಳೆಯಿಂದಾಗಿ ಮೈದಾನ ಹಸಿಯಾಗಿತ್ತು. ಅದರಿಂದಾಗಿ 15 ನಿಮಿಷ ತಡವಾಗಿ ಪಂದ್ಯ ಆರಂಭವಾಯಿತು.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೋಯಿನ್ ಅಲಿ, ಮಹೀಷ ತೀಕ್ಷಣ ಮತ್ತು ಮಹೀಷ ಪತಿರಾಣಾ ಅವರು ಉತ್ತಮ ಬೌಲಿಂಗ್ ಮಾಡಿದರು. ಇದರಿಂದಾಗಿ ತಂಡವು ಕೇವಲ 44 ರನ್‌ಗಳಿಗೆ ಐದು ವಿಕೆಟ್ ಕಳೆದುಕೊಂಡಿತು. ಆದರೆ ಏಳನೇ ಕ್ರಮಾಂಕದಲ್ಲಿ ಕೀಸ್‌ಗೆ ಬಂದ ಯುವ ಬ್ಯಾಟರ್ ಆಯುಷ್‌ ಬಡೋಣಿ ಔಟಾಗದೆ 59(33) ಲಖನೌ ತಂಡಕ್ಕೆ ಆಸರೆಯಾದರು. ನಿಕೊಲಸ್ ಪೂರನ್ 31 ಎಸೆತಗಳಲ್ಲಿ 20 ರನ್ ಗಳಿಸಿದರು.

ತಂಡವು 19.2 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 125 ರನ್ ಗಳಿಸಿದ ಸಂದರ್ಭದಲ್ಲಿ ಮಳೆ ಆರಂಭವಾಯಿತು. ಅದರೆ ಮಳೆ ನಿಲ್ಲದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ಸಂಕ್ಷಿಪ್ತ ಸ್ಕೋ‌ರ್‌:

ಲಖನ್ ಸೂಪರ್ ಜೈಂಟ್ಸ್: 19.2 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 125 (ಮನನ್ ವೊಹ್ರಾ 10, ಕೈಲ್ ಮೇಯರ್ಸ್ 14, ನಿಕೊಲಸ್ ಪೂರನ್ 20, ಆಯುಷ್‌ ಬಡೋಣಿ ಅಜೇಯ 59, ಮೋಯಿನ್ ಅಲಿ 13ಕ್ಕೆ2, ಮಹೀಷ ತೀಕ್ಷಣ 37ಕ್ಕೆ2, ಮಹೀಷ ಪಥಿರಾಣ 22ಕ್ಕೆ2)

ಮಳೆಯಿಂದಾಗಿ ಪಂದ್ಯ ಸ್ಥಗಿತ.

andolanait

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

14 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

15 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

16 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

16 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

16 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

20 hours ago