ಕ್ರೀಡೆ

ಐಪಿಎಲ್‌ 2023|ಫೈನಲ್ ಪಂದ್ಯಕ್ಕೂ ಮುನ್ನ ವರ್ಣರಂಜಿತ ಕಾರ್ಯಕ್ರಮ: ಖ್ಯಾತ ರಾಪರ್‌ಗಳು ಭಾಗಿ

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ 2023 (ಐಪಿಎಲ್ ) ಫೈನಲ್‌ ನ ರಾತ್ರಿ ಅಹಮದಾಬಾದ್‌ನಲ್ಲಿ ಬಿಸಿಸಿಐ ವರ್ಣರಂಜಿತ ಕಾರ್ಯಕ್ರಮ ನಡೆಸಲು ಯೋಜಿಸಿದೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್‌ಗೆ ಮುಂಚಿತವಾಗಿ, ಸಮಾರೋಪ ಸಮಾರಂಭ ನಡೆಯಲಿದೆ. ರಾಪರ್ ಮತ್ತು ಗಾಯಕ ಡಿವೈನ್ ಮತ್ತು ನ್ಯೂಕ್ಲಿಯಾ ಅವರು ಕಾರ್ಯಕ್ರಮ ನೀಡಲಿದ್ದಾರೆ.

ಈ ಭಾನುವಾರ (ಮೇ.28ರಂದು) ಐಪಿಎಲ್ ಫೈನಲ್ ಪಂದ್ಯ ನಡೆಯಲಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಸಮಾರೋಪ ಸಮಾರಂಭದಲ್ಲಿ ಟಾಸ್‌ ಗೆ ಮೊದಲು ಕೆಲವು ಪ್ರದರ್ಶನಗಳು ನಡೆಯುತ್ತವೆ, ಇನ್ನು ಕೆಲವು ಇನ್ನಿಂಗ್ಸ್ ವಿರಾಮದ ಸಮಯದಲ್ಲಿ ನಡೆಯಬಹುದು ಎಂದು ವರದಿಯಾಗಿದೆ.

ಕೆಲವು ವರದಿಗಳ ಪ್ರಕಾರ, ನಟ ರಣವೀರ್ ಸಿಂಗ್, ಸಂಗೀತ ನಿರ್ದೇಶಕ ಎ.ಆರ್ .ರೆಹಮಾನ್ ಸಮಾರೋಪ ಸಮಾರಂಭದಲ್ಲಿ ಪ್ರದರ್ಶನ ನೀಡುವ ನಿರೀಕ್ಷೆಯಿದೆ.
ಐಪಿಎಲ್ ಟ್ವೀಟ್ ಮಾಡಿದಂತೆ ಭಾರತೀಯ ರಾಪರ್ ನ್ಯೂಕ್ಲಿಯಾ ಮತ್ತು ಗಾಯಕ ಕಿಂಗ್ ಸಂಜೆ 6 ರಿಂದ ಪ್ರದರ್ಶನ ನೀಡಲಿದ್ದಾರೆ. ನಂತರ, ಐಪಿಎಲ್‌ ನ ಮಧ್ಯ ಇನಿಂಗ್ಸ್ ವಿರಾಮದ ಸಮಯದಲ್ಲಿ ಗಾಯಕಿ ಜೋನಿತಾ ಗಾಂಧಿ ಮತ್ತು ರಾಪರ್ ಡಿವೈನ್ ಭಾಗವಹಿಸುವಿಕೆಯನ್ನು ಸಂಘಟಕರು ಖಚಿತಪಡಿಸಿದರು.
andolanait

Recent Posts

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

2 mins ago

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಆರು ನಿರ್ಣಯಗಳನ್ನು ಮಂಡಿಸಿದ ಕಸಾಪ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…

56 mins ago

ಮಂಡ್ಯದಲ್ಲಿ ಬರ್ಬರ ಕೊಲೆ ಪ್ರಕರಣ: ಸಾಲ ತೀರಿಸಲು ದರೋಡೆಗೆ ಇಳಿದಿದ್ದ ಪಾತಕಿ

ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್‌ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್‌ ವಿಚಾರ ಬಾಯ್ಬಿಟ್ಟಿದ್ದಾನೆ.…

2 hours ago

ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…

2 hours ago

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

3 hours ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

3 hours ago