ಕ್ರೀಡೆ

IPL 2023: ‘ಇಂಪ್ಯಾಕ್ಟ್‌ ಪ್ಲೇಯರ್‌’ ನಿಯಮಕ್ಕೆ ಗಾವಸ್ಕರ್, ಹರ್ಭಜನ್ ಮೆಚ್ಚುಗೆ

ನವದೆಹಲಿ: ಈ ಬಾರಿಯ ಐಪಿಎಲ್‌ನಲ್ಲಿ ಹೊಸದಾಗಿ ಪರಿಚಯಿಸಲಾಗಿರುವ ‘ಇಂಪ್ಯಾಕ್ಟ್‌ ಪ್ಲೇಯರ್‌’ ನಿಯಮವು ಎಲ್ಲರ ಗಮನ ಸೆಳೆದಿದೆ.

ಬಿಸಿಸಿಐ ಈ ನಿಯಮವನ್ನು ಘೋಷಿಸಿದಾಗ, ತಂಡಗಳು ಹೇಗೆ ‘ಇಂಪ್ಯಾಕ್ಟ್‌ ಪ್ಲೇಯರ್‌’ ಬಳಕೆ ಮಾಡಲಿವೆ ಎಂಬ ಬಗ್ಗೆ ಕುತೂಹಲ ಮೂಡಿತ್ತು. ಇದೀಗ ಈ ನಿಯಮದ ಬಗ್ಗೆ ಮಾಜಿ ಕ್ರಿಕೆಟಿಗರಾದ ಸುನಿಲ್‌ ಗಾವಸ್ಕರ್‌ ಮತ್ತು ಹರ್ಭಜನ್‌ ಸಿಂಗ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಇಂಪ್ಯಾಕ್ಟ್‌ ಪ್ಲೇಯರ್‌’ ನಿಯಮದ ಪ್ರಕಾರ ತಂಡಗಳು ಅಂತಿಮ ಇಲೆವೆನ್‌ ಜತೆಗೆ, ಐವರು ಬದಲಿ ಆಟಗಾರರನ್ನು ಕೂಡಾ ಹೆಸರಿಸಬೇಕು. ಅದರಲ್ಲಿ ಒಬ್ಬ ಆಟಗಾರ (ಇಂಪ್ಯಾಕ್ಟ್ ಪ್ಲೇಯರ್‌) ಪಂದ್ಯದ ಯಾವುದೇ ಹಂತದಲ್ಲಿ ಆರಂಭಿಕ ಇಲೆವೆನ್‌ನ ಆಟಗಾರರನ್ನು ಬದಲಾಯಿಸಿ ಕಣಕ್ಕಿಳಿಯಬಹುದು. ಇನಿಂಗ್ಸ್‌ನ 14ನೇ ಓವರ್‌ನ ಮುಕ್ತಾಯಕ್ಕೆ ಮುನ್ನ ಈ ಬದಲಾವಣೆ ಮಾಡಬೇಕು.

ಬ್ಯಾಟ್‌ ಮಾಡುವ ತಂಡವು ಔಟಾದ ಅಥವಾ ನಿವೃತ್ತಿಗೊಂಡು ಪೆವಿಲಿಯನ್‌ ಮರಳಿದ ಬ್ಯಾಟರ್‌ಗೆ ಬದಲಿಯಾಗಿ ಇಂಪ್ಯಾಕ್ಟ್‌ ಪ್ಲೇಯರ್‌ಅನ್ನು ಕಣಕ್ಕಿಳಿಸಿದರೂ 11 ಆಟಗಾರರಿಗಷ್ಟೇ ಬ್ಯಾಟ್‌ ಮಾಡಲು ಅವಕಾಶವಿದೆ.

ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟೂರ್ನಿಯಲ್ಲಿ ಈ ನಿಯಮವನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿತ್ತು.

ಈ ನಿಯಮವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ತಂಡಗಳಿಗೆ ಕೆಲ ಸಮಯ ಬೇಕಾಗಲಿದೆ ಎಂದು ಗಾವಸ್ಕರ್‌ ಹೇಳಿದ್ದಾರೆ.

ಸ್ಟಾರ್‌ಸ್ಪೋರ್ಟ್ಸ್‌ ಜೊತೆ ಮಾತನಾಡಿರುವ ಗಾವಸ್ಕರ್‌, ‘ಹೊಸ ನಿಯಮವನ್ನು ಅರ್ಥಮಾಡಿಕೊಳ್ಳಲು ಮತ್ತು ಹೊಸ ಪರಿಸ್ಥಿತಿಗೆ ಒಗ್ಗಿಕೊಳ್ಳಲು ಸಮಯ ಬೇಕಾಗುತ್ತದೆ. ಟಾಟಾ ಐಪಿಎಲ್‌–2023ರಲ್ಲಿ ಆಡುವ ಎಲ್ಲ ತಂಡಗಳಿಗೂ ಇದು ಅನ್ವಯ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹರ್ಭಜನ್‌ ಅವರು, ‘ಇದೊಂದು ವಿನೂತನ ನಡೆ. ಆಟದ ಪರಿಸ್ಥಿತಿಯಲ್ಲಿ ತಂಡಕ್ಕೆ ಸೂಕ್ತವಲ್ಲ ಎನಿಸುವ ಅಥವಾ ಅಗತ್ಯ ಎನಿಸುವ ಯಾವುದೇ ಆಟಗಾರನನ್ನು ಆಡುವ ಹನ್ನೊಂದರ ಬಳಕ್ಕೆ ಸೇರಿಸಿಕೊಳ್ಳಲು ಇದರಿಂದ ಸಾಧ್ಯವಿದೆ. ಇದೊಂದು ಅತ್ಯುತ್ತಮ ನಿಯಮ. ಬಿಸಿಸಿಐಗೆ ಅಭಿನಂದನೆಗಳು’ ಎಂದಿದ್ದಾರೆ.

ಮೊದಲ ಪಂದ್ಯದಲ್ಲಿ ‘ಇಂಪ್ಯಾಕ್ಟ್‌ ಪ್ಲೇಯರ್‌’ ಬಳಕೆ
16ನೇ ಆವೃತ್ತಿಯ ಐಪಿಎಲ್‌ ಟೂರ್ನಿಯು ಶುಕ್ರವಾರ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಎದುರು ಗೆಲ್ಲುವ ಮೂಲಕ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ಶುಭಾರಂಭ ಮಾಡಿದೆ.

ಈ ಪಂದ್ಯದಲ್ಲಿ ಉಭಯ ತಂಡಗಳು ತಲಾ ಒಬ್ಬರು ‘ಇಂಪ್ಯಾಕ್ಟ್‌ ಪ್ಲೇಯರ್‌’ಗಳನ್ನು ಕಣಕ್ಕಿಳಿಸಿದವು.

ಗುಜರಾತ್‌ ಪಡೆ, ಫೀಲ್ಡಿಂಗ್‌ ವೇಳೆ ಗಾಯಗೊಂಡ ಕೇನ್‌ ವಿಲಿಯಮ್ಸನ್‌ ಬದಲು ಸಾಯ್‌ ಸುದರ್ಶನ್‌ ಅವರನ್ನು ಹಾಗೂ ಚೆನ್ನೈ ತಂಡ ಅಂಬಟಿ ರಾಯುಡು ಬದಲು ಬೌಲರ್‌ ತುಷಾರ್‌ ದೇಶಪಾಂಡೆ ಅವರನ್ನು ಆಡಿಸಿದವು.

andolanait

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

12 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

12 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

19 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

19 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

19 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

19 hours ago