ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.
ಮೊಹಾಲಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿದೆ.
ಆರ್‌ಸಿಬಿ ತಂಡದ ಆರಂಭಿಕ ಆಟಗಾರರಾದ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಮೇತ 59 ರನ್ ಗಳಿಸಿದರು. ಇತ್ತ ಫಫ್ ಡುಪ್ಲೆಸಿ 56 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಿತ 84 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ದಿನೇಶ್ ಕಾರ್ತಿಕ್ 07, ಮಹಿಪಾಲ್ ಲೋಮ್ರೋರ್ ಔಟಾಗದೆ 06, ಶಹಬಾಜ್ ಅಹ್ಮದ್ ಔಟಾಗದೆ 05 ರನ್ ಗಳಿಸಿದರು. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ರನ್ ಖಾತೆ ತೆರೆಯದೆ ನಿರಾಸೆ ಮೂಡಿಸಿದರು.
ಪಂಜಾಬ್ ಪರ ಹರ್‌ಪ್ರೀತ್ ಬ್ರಾರ್ 2, ನಾಥನ್ ಎಲ್ಲಿಸ್, ಅರ್ಷದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಕಬಳಿಸಿದರು
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…