ಚೆನ್ನೈ: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದೆ. ಹೈದರಾಬಾದ್ ನೀಡಿದ 135 ರನ್ ಗಳ ಸುಲಭ ಗುರಿ ಬೆನ್ನತ್ತಿದ ಚೆನ್ನೈ ತಂಡವು 18.4 ಓವರ್ ಗಳಲ್ಲಿ ಗೆಲುವು ಕಂಡಿತು.
ಪಂದ್ಯದ ಬಳಿಕ ಸಿಎಸ್ ಕೆ ನಾಯಕ ಎಂ.ಎಸ್. ಧೋನಿ ನಿವೃತ್ತಿ ಸುಳಿವು ನೀಡಿದ್ದಾರೆ.
“ನನ್ನ ವೃತ್ತಿಜೀವನದ ಕೊನೆಯ ಹಂತದಲ್ಲಿದ್ದೇನೆ. ಆದರೆ ಹೆಚ್ಚು ಸಮಯ ನಾನು ಆಡಿದಂತೆ ಅದನ್ನು ಆನಂದಿಸುವುದು ಮುಖ್ಯ” ಎಂದಿದ್ದಾರೆ.
“ಎರಡು ವರ್ಷದ ನಂತರದ ಇಲ್ಲಿ ಅಭಿಮಾನಿಗಳು ಬಂದು ಪಂದ್ಯ ನೋಡುತ್ತಿದ್ದಾರೆ. ಕ್ರೀಡಾಂಗಣ ತುಂಬಿದೆ. ಇಲ್ಲಿ ಆಡಲು ಖುಷಿಯಾಗುತ್ತದೆ. ನಾವು ಚೆನ್ನೈನಲ್ಲಿ ಹೆಚ್ಚು ಪಂದ್ಯಗಳನ್ನಾಡಿಲ್ಲ. ಈ ಜನರು ಸಾಕಷ್ಟು ಪ್ರೀತಿ ಕೊಟ್ಟಿದ್ದಾರೆ. ಅವರು ಯಾವತ್ತೂ ನನ್ನ ಮಾತುಗಳನ್ನು ಕೇಳಲು ಇರುತ್ತಾರೆ. ( ಪ್ರೆಸೆಂಟೇಶನ್ ಮಾತುಗಳು) ಹೆಚ್ಚು ಬ್ಯಾಟಿಂಗ್ ಮಾಡಲು ಅವಕಾಶ ಸಿಗುತ್ತಿಲ್ಲ, ಪರವಾಗಿಲ್ಲ, ಹುಡುಗರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ” ಎಂದು ಧೋನಿ ಹೇಳಿದರು.
41 ವರ್ಷದ ಧೋನಿ 2020ರ ಆಗಸ್ಟ್ ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಆದರೆ ಬಳಿಕವೂ ಐಪಿಎಲ್ ಆಡುತ್ತಿದ್ದಾರೆ. 2022ರ ಸೀಸನ್ ನ ಆರಂಭದಲ್ಲಿ ಚೆನ್ನೈ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾಗೆ ನೀಡಲಾಗಿತ್ತು. ಆದರೆ ಅವರು ವಿಫಲರಾದ ಹಿನ್ನೆಲೆಯಲ್ಲಿ ಧೋನಿ ಮತ್ತೆ ನಾಯಕತ್ವ ನಿಭಾಯಿಸುತ್ತಿದ್ದಾರೆ.
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…
ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…
ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…