Mysore
24
overcast clouds

Social Media

ಭಾನುವಾರ, 14 ಜೂನ್ 2026
Light
Dark

IPL 2023 | ಮನೀಷ್ ಅರ್ಧಶತಕ ವ್ಯರ್ಥ, ಡೆಲ್ಲಿ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌) 20ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 23 ರನ್‌ ಅಂತರದಿಂದ ಗೆಲುವು ಸಾಧಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 174 ರನ್ ಗಳಿಸಿದೆ.

175 ರನ್‌ ಗುರಿ ಬೆನ್ನತಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 151 ರನ್ ಗಳಿಸಿತು. ಇದರೊಂದಿಗೆ 23 ರನ್‌ಗಳ ಅಂತರದಿಂದ ಸೋಲು ಅನುಭವಿಸಿತು. ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದ ಡೇವಿಡ್ ವಾರ್ನರ್ ಪಡೆಗೆ ಮತ್ತೆ ನಿರಾಸೆಯಾಗಿದೆ.

ಡೆಲ್ಲಿ ಪರ ಪೃಥ್ವಿ ಶಾ 00, ಮಿಚೆಲ್ ಮಾರ್ಚ್ 00, ಯಶ್‌ ದೌಲ್ 01, ಅಭಿಷೇಕ್ ಪೋವೆಲ್ 05, ಲಲಿತ್ ಯಾದವ್ ಕೇವಲ 4 ರನ್ ಗಳಿಸಿ ಬ್ಯಾಟಿಂಗ್ ವೈಫಲ್ಯ ಎದುರಿಸಿದರು. ಇತ್ತ ಕನ್ನಡಿಗ ಮನೀಷ್ ಪಾಂಡೆ 38 ಎಸೆತಗಳಲ್ಲಿ 1 ಸಿಕ್ಸರ್, 5 ಬೌಂಡರಿ ಸಮೇತ 50 ರನ್ ಗಳಿಸಿದರು. ನಾಯಕ ಡೇವಿಡ್ ವಾರ್ನರ್ 19 ರನ್ ಗಳಿಸಿದರು.

ಆರ್‌ಸಿಬಿ ಪರ ವಿಜಯಕುಮಾರ್ ವೈಶಾಕ್ 3, ಮೊಹಮ್ಮದ್ ಸಿರಾಜ್ 2 ವಿಕೆಟ್ ಪಡೆದರೆ, ಪಾರ್ನೆಲ್, ಹರ್ಷಲ್ ಪಟೇಲ್, ವನಿಂದು ಹಸರಂಗ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌, ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲ ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 174 ರನ್ ಗಳಿಸಿದೆ.

ಆರ್‌ಸಿಬಿ ಪರ ಆರಂಭಿಕ ಆಟಗಾರರಾದ ವಿರಾಟ್‌ ಕೊಹ್ಲಿ ಅರ್ಧಶತಕ (50) ಸಿಡಿಸಿ ಸಂಭ್ರಮಿಸಿದರು. ಉಳಿದಂತೆ ಮಹಿಪಾಲ್ ಲೊಮ್ರೋಡ್ 26, ಮ್ಯಾಕ್ಸ್‌ವೆಲ್ 24, ಫಫ್‌ ಡುಪ್ಲೆಸಿ 22 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ಡೆಲ್ಲಿ ಪರ ಕುಲದೀಪ್ ಯಾದವ್, ಮಿಚೆಲ್ ಮಾರ್ಶ್ 2 ವಿಕೆಟ್ ಪಡೆದರೆ, ಲಲಿತ್ ಯಾದವ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ಪಂದ್ಯಶ್ರೇಷ್ಠ: ವಿರಾಟ್‌ ಕೊಹ್ಲಿ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!