ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 20ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 23 ರನ್ ಅಂತರದಿಂದ ಗೆಲುವು ಸಾಧಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿದೆ.
175 ರನ್ ಗುರಿ ಬೆನ್ನತಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿತು. ಇದರೊಂದಿಗೆ 23 ರನ್‌ಗಳ ಅಂತರದಿಂದ ಸೋಲು ಅನುಭವಿಸಿತು. ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದ ಡೇವಿಡ್ ವಾರ್ನರ್ ಪಡೆಗೆ ಮತ್ತೆ ನಿರಾಸೆಯಾಗಿದೆ.
ಡೆಲ್ಲಿ ಪರ ಪೃಥ್ವಿ ಶಾ 00, ಮಿಚೆಲ್ ಮಾರ್ಚ್ 00, ಯಶ್ ದೌಲ್ 01, ಅಭಿಷೇಕ್ ಪೋವೆಲ್ 05, ಲಲಿತ್ ಯಾದವ್ ಕೇವಲ 4 ರನ್ ಗಳಿಸಿ ಬ್ಯಾಟಿಂಗ್ ವೈಫಲ್ಯ ಎದುರಿಸಿದರು. ಇತ್ತ ಕನ್ನಡಿಗ ಮನೀಷ್ ಪಾಂಡೆ 38 ಎಸೆತಗಳಲ್ಲಿ 1 ಸಿಕ್ಸರ್, 5 ಬೌಂಡರಿ ಸಮೇತ 50 ರನ್ ಗಳಿಸಿದರು. ನಾಯಕ ಡೇವಿಡ್ ವಾರ್ನರ್ 19 ರನ್ ಗಳಿಸಿದರು.
ಆರ್‌ಸಿಬಿ ಪರ ವಿಜಯಕುಮಾರ್ ವೈಶಾಕ್ 3, ಮೊಹಮ್ಮದ್ ಸಿರಾಜ್ 2 ವಿಕೆಟ್ ಪಡೆದರೆ, ಪಾರ್ನೆಲ್, ಹರ್ಷಲ್ ಪಟೇಲ್, ವನಿಂದು ಹಸರಂಗ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲ ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿದೆ.
ಆರ್‌ಸಿಬಿ ಪರ ಆರಂಭಿಕ ಆಟಗಾರರಾದ ವಿರಾಟ್ ಕೊಹ್ಲಿ ಅರ್ಧಶತಕ (50) ಸಿಡಿಸಿ ಸಂಭ್ರಮಿಸಿದರು. ಉಳಿದಂತೆ ಮಹಿಪಾಲ್ ಲೊಮ್ರೋಡ್ 26, ಮ್ಯಾಕ್ಸ್‌ವೆಲ್ 24, ಫಫ್ ಡುಪ್ಲೆಸಿ 22 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ಡೆಲ್ಲಿ ಪರ ಕುಲದೀಪ್ ಯಾದವ್, ಮಿಚೆಲ್ ಮಾರ್ಶ್ 2 ವಿಕೆಟ್ ಪಡೆದರೆ, ಲಲಿತ್ ಯಾದವ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.
ಪಂದ್ಯಶ್ರೇಷ್ಠ: ವಿರಾಟ್ ಕೊಹ್ಲಿ
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…
ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…
ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬಳ್ಳಾರಿ : ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…