ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 24 ರನ್ ಅಂತರದಿಂದ ಗೆಲುವು ಸಾಧಿಸಿತು.
ನಗರದ ಬಿಂದ್ರಾ ಕ್ರೀಡಾಂಗಣದಲ್ಲಿ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು.
175 ರನ್ ಗುರಿ ಬೆನ್ನತ್ತಿದ ಪಂಜಾಬ್ 18.2 ಓವರ್‌ಗಳಲ್ಲಿ 150 ರನ್ ಗಳಿಸಿ ಆಲೌಟ್ ಆಯಿತು. ಪ್ರಭಾಸಿಮ್ರಾನ್ ಸಿಂಗ್ 46, ಜಿತೇಶ್ ಶರ್ಮಾ 41 ರನ್ ಗಳಿಸಿದರಾದರೂ ಉಳಿದ ಆಟಗಾರರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.
ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್ 4, ವನಿಂದು ಹಸರಂಗ 2, ವೇಯ್ನ್ ಪಾರ್ನೆಲ್ ಹಾಗೂ ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿದೆ.
ಆರ್‌ಸಿಬಿ ತಂಡದ ಆರಂಭಿಕ ಆಟಗಾರರಾದ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಮೇತ 59 ರನ್ ಗಳಿಸಿದರು. ಇತ್ತ ಫಫ್ ಡುಪ್ಲೆಸಿ 56 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಿತ 84 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ದಿನೇಶ್ ಕಾರ್ತಿಕ್ 07, ಮಹಿಪಾಲ್ ಲೋಮ್ರೋರ್ ಔಟಾಗದೆ 06, ಶಹಬಾಜ್ ಅಹ್ಮದ್ ಔಟಾಗದೆ 05 ರನ್ ಗಳಿಸಿದರು. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ರನ್ ಖಾತೆ ತೆರೆಯದೆ ನಿರಾಸೆ ಮೂಡಿಸಿದರು.
ಪಂಜಾಬ್ ಪರ ಹರ್‌ಪ್ರೀತ್ ಬ್ರಾರ್ 2, ನಾಥನ್ ಎಲ್ಲಿಸ್, ಅರ್ಷದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಪಂದ್ಯಶ್ರೇಷ್ಠ: ಮೊಹಮದ್ ಸಿರಾಜ್
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…
ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ…