ಕ್ರೀಡೆ

IPL 2023: ಮುಂಬೈ ಮೊದಲ ಎದುರಾಳಿ, ಆರ್‌ಸಿಬಿ ವೇಳಾಪಟ್ಟಿ

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2023) ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಯೋಜನೆಯೊಂದಿಗೆ ರಾಯಲ್‌ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಹದಿನಾರನೇ ಆವೃತ್ತಿಯ ಟೂರ್ನಿಯಲ್ಲಿ ಕಣಕ್ಕೆ ಇಳಿಯಲಿದೆ. ಮಾರ್ಚ್‌ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಸೆಣಸುವ ಮೂಲಕ 2023ರ ಐಪಿಎಲ್‌ ಟೂರ್ನಿ ಅಧಿಕೃತವಾಗಿ ಆರಂಭವಾಗಲಿದೆ. ಏಪ್ರಿಲ್‌ 2 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರಿಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ತನ್ನ ಮೊದಲ ಪಂದ್ಯವಾಡಲಿದೆ

ಕಳೆದ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಆಡಿದ್ದ 14 ಪಂದ್ಯಗಳಿಂದ ಫಾಫ್‌ ಡು ಪ್ಲೆಸಿಸ್‌ ನಾಯಕತ್ವದ ಆರ್‌ಸಿಬಿ, 8ರಲ್ಲಿ ಗೆದ್ದು ಇನ್ನುಳಿದ 6 ಪಂದ್ಯಗಳಲ್ಲಿ ಸೋಲು ಅನುಭವಿಸಿತ್ತು. ಆ ಮೂಲಕ ಪ್ಲೇಆಫ್ಸ್‌ಗೆ ತಲುಪಿದ್ದ ಬೆಂಗಳೂರು ತಂಡ, ಎಲಿಮಿನೇಟರ್‌ ಪಂದ್ಯದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ವಿರುದ್ದ 14 ರನ್‌ಗಳಿಂದ ಗೆಲುವು ಪಡೆದಿತ್ತು. ಆದರೆ, ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 7 ವಿಕೆಟ್‌ಗಳಿಂದ ಸೋತು ಟೂರ್ನಿಯಿಂದ ಹೊರಬಿದ್ದಿತ್ತು.

ಆರ್‌ಸಿಬಿ ತಂಡದ ಪರ ಕಳೆದ ಆವೃತ್ತಿಯಲ್ಲಿ ಫಾಫ್‌ ಡು ಪ್ಲೆಸಿಸ್‌ 16 ಪಂದ್ಯಗಳಿಂದ 468 ರನ್‌ಗಳನ್ನು ಗಳಿಸಿದ್ದರು. ಇದರಲ್ಲಿ ಅವರು ಮೂರು ಅರ್ಧಶತಕಗಳನ್ನು ಸಿಡಿಸಿದ್ದರು. ಮತ್ತೊಂದೆಡೆ ವಾನಿಂದು ಹಸರಂಗ ಐದು ವಿಕೆಟ್‌ ಸಾಧನೆ ಸೇರಿದಂತೆ ಒಟ್ಟು 26 ವಿಕೆಟ್‌ಗಳನ್ನು ಕಬಳಿಸಿದ್ದರು. ಆ ಮೂಲಕ 2022ರ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಎರಡನೇ ಬೌಲರ್‌ ಎನಿಸಿಕೊಂಡಿದ್ದರು.

ಹಳೆಯ ಸಾಂಪ್ರದಾಯದಂತೆ ಈ ಬಾರಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ. ಈ ಹಿನ್ನಲೆಯಲ್ಲಿ 2023ರ ಐಪಿಎಲ್‌ ಟೂರ್ನಿಯು ಸಾಕಷ್ಟು ಕುತೂಹಲ ಕೆರಳಿಸಲಿದೆ. ಮತ್ತೊಂದೆಡೆ ವಿರಾಟ್‌ ಕೊಹ್ಲಿ ಮೂರೂ ಸ್ವರೂಪದಲ್ಲಿ ಶತಕಗಳನ್ನು ಸಿಡಿಸುವ ಮೂಲಕ ಭರ್ಜರಿ ಫಾರ್ಮ್‌ಗೆ ಮರಳಿದ್ದು, ಇದು ಆರ್‌ಸಿಬಿ ಪಾಲಿಗೆ ಪ್ಲಸ್‌ ಪಾಯಿಂಟ್‌ ಆಗಲಿದೆ.

ಆರ್‌ಸಿಬಿ ತಂಡ ಸಂಪೂರ್ಣ ವೇಳಾಪಟ್ಟಿ

ಪಂದ್ಯ 1: ಏಪ್ರಿಲ್ 2, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್, ಬೆಂಗಳೂರು (7:30PM IST)

ಪಂದ್ಯ 2: ಏಪ್ರಿಲ್ 6, 2023 – ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೋಲ್ಕತ್ತಾ (ಸಂಜೆ 7:30 IST)

ಪಂದ್ಯ 3: ಏಪ್ರಿಲ್ 10, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಖನೌ ಸೂಪರ್ ಜಯಂಟ್ಸ್‌, ಬೆಂಗಳೂರು (3:30PM IST)

ಪಂದ್ಯ 4: ಏಪ್ರಿಲ್ 15, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್, ಬೆಂಗಳೂರು (3:30PM IST)

ಪಂದ್ಯ 5: ಏಪ್ರಿಲ್ 17, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್, ಬೆಂಗಳೂರು (ಸಂಜೆ 7:30 IST)

ಪಂದ್ಯ 6: ಏಪ್ರಿಲ್ 20, 2023 – ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮೊಹಾಲಿ (3:30PM IST)

ಪಂದ್ಯ 7: ಏಪ್ರಿಲ್ 23, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ್‌ ರಾಯಲ್ಸ್, ಬೆಂಗಳೂರು (3:30PM IST)

ಪಂದ್ಯ 8: ಏಪ್ರಿಲ್ 26, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್, ಬೆಂಗಳೂರು (7:30 PM IST)

ಪಂದ್ಯ 9: ಮೇ 1, 2023 – ಲಖನೌ ಸೂಪರ್ ಜಯಂಟ್ಸ್‌ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಲಖನೌ (7:30PM IST)

ಪಂದ್ಯ 10: ಮೇ 6, 2023 – ದಿಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ದಿಲ್ಲಿ (7:30PM IST)

ಪಂದ್ಯ 11: ಮೇ 9, 2023 – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ (7:30PM IST)

ಪಂದ್ಯ 12: ಮೇ 14, 2023 – ರಾಜಸ್ಥಾನ್ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಜೈಪುರ (ಮಧ್ಯಾಹ್ನ 3:30 IST)

ಪಂದ್ಯ 13: ಮೇ 18, 2023 – ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಹೈದರಾಬಾದ್ (ಸಂಜೆ 7:30 IST)

ಪಂದ್ಯ 14: ಮೇ 21, 2023 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟನ್ಸ್, ಬೆಂಗಳೂರು (ಸಂಜೆ 7:30 IST)

ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ


ಫಾಫ್ ಡು ಪ್ಲೆಸಿಸ್ (ನಾಯಕ), ಫಿನ್ ಅಲೆನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ವಿಲ್ ಜ್ಯಾಕ್ಸ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ವಾನಿಂದು ಹಸರಂಗ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಝ್‌ ಅಹ್ಮದ್, ಸೋನು ಯಾದವ್, ಮನೋಜ್ ಭಾಂಡಗಿ, ಆಕಾಶ್ ದೀಪ್‌, ಜೋ ಹೇಝಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರಣ್‌ ಶರ್ಮಾ, ಡೇವಿಡ್ ವಿಲ್ಲಿ, ಅವಿನಾಶ್ ಸಿಂಗ್, ರಾಜನ್ ಕುಮಾರ್, ರೀಸ್ ಟಾಪ್ಲಿ, ಹಿಮಾಂಶು ಶರ್ಮಾ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago