ಮುಲ್ಲಾನ್‌ಪುರ: ಇಲ್ಲಿನ ಮಹಾರಾಜ ಯದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 9 ರನ್‌ಗಳ ಗೆಲುವನ್ನು ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆರಿಸಿಕೊಂಡು ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಮುಂಬೈ ಸೂರ್ಯಕುಮಾರ್ ಯಾದವ್ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿ ಪಂಜಾಬ್ ಕಿಂಗ್ಸ್ ತಂಡಕ್ಕೆ 193 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಪಂಜಾಬ್ ಕಿಂಗ್ಸ್ 19.1 ಓವರ್‌ಗಳಲ್ಲಿ 183 ರನ್‌ಗಳಿಗೆ ಆಲ್‌ಔಟ್ ಆಯಿತು.
ಮುಂಬೈ ಇಂಡಿಯನ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಇಶಾನ್ ಕಿಶನ್ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿದರು. ಇಶಾನ್ ಕಿಶನ್ 8 (8) ರನ್ ಗಳಿಸಿ ಬೇಗನೆ ನಿರ್ಗಮಿಸಿದರೆ, ಎರಡನೇ ವಿಕೆಟ್‌ಗೆ ಸೂರ್ಯಕುಮಾರ್ ಜತೆಗೂಡಿ 81 ರನ್‌ಗಳ ಜತೆಯಾಟವಾಡಿದ ರೋಹಿತ್ ಶರ್ಮಾ 36 (25) ರನ್ ಬಾರಿಸಿದರು. ಸೂರ್ಯಕುಮಾರ್ ಯಾದವ್ 78 (53) ರನ್ ಬಾರಿಸಿ ಉತ್ತಮ ಪ್ರದರ್ಶನ ನೀಡಿದರು. ಇನ್ನುಳಿದಂತೆ ನಾಯಕ ಹಾರ್ದಿಕ್ ಪಾಂಡ್ಯ 10 (6) ರನ್, ಟಿಮ್ ಡೇವಿಡ್ 14 (7) ರನ್, ರೊಮಾರಿಯೊ ಶೆಫರ್ಡ್ 1 (2) ರನ್, ಮೊಹಮ್ಮದ್ ನಬಿ ಡಕ್‌ಔಟ್ ಮತ್ತು ತಿಲಕ್ ವರ್ಮಾ ಅಜೇಯ 34 (18) ರನ್ ಬಾರಿಸಿದರು.
ಪಂಜಾಬ್ ಕಿಂಗ್ಸ್ ಪರ ಹರ್ಷಲ್ ಪಟೇಲ್ 3, ಸಾಮ್ ಕರನ್ 2 ವಿಕೆಟ್ ಹಾಗೂ ಕಗಿಸೊ ರಬಾಡಾ 1 ವಿಕೆಟ್ ಪಡೆದರು.
ಪಂಜಾಬ್ ಕಿಂಗ್ಸ್: ಮುಂಬೈ ನೀಡಿದ ಗುರಿ ಬೆನ್ನಟ್ಟಲು ಯತ್ನಿಸಿದ ಪಂಜಾಬ್‌ಗೆ ಟಾಪ್ ಆರ್ಡರ್ ಕೈಕೊಟ್ಟಿತು. ತಂಡ 2.1 ಓವರ್‌ನಲ್ಲಿಯೇ ಕೇವಲ 14 ರನ್‌ಗಳಿಗೆ ತನ್ನ ಮೊದಲ 4 ವಿಕೆಟ್ ಕಳೆದುಕೊಂಡಿತು. ಹೀಗೆ ಪವರ್‌ಪ್ಲೇನಲ್ಲೇ ಹೀನಾಯ ಆರಂಭ ಪಡೆದ ತಂಡಕ್ಕೆ ಶಶಾಂಕ್ ಸಿಂಗ್ ತುಸು ಚೇತರಿಕೆ ತಂದರು. ಬಳಿಕ ಅಬ್ಬರಿಸಿದ ಅಶುತೋಷ್ ಶರ್ಮಾ ಆಕರ್ಷಕ ಅರ್ಧಶತಕ ಬಾರಿಸಿ ಗೆಲುವಿನ ನಿರೀಕ್ಷೆ ಹುಟ್ಟಿಸಿದರಾದರೂ ಅಂತಿಮ ಹಂತದಲ್ಲಿ ವಿಕೆಟ್ ಒಪ್ಪಿಸಿದರು. ನಾಯಕ ಸಾಮ್ ಕರನ್ 6 (7) ರನ್, ಪ್ರಭ್‌ಸಿಮ್ರಾನ್ ಸಿಂಗ್ ಗೋಲ್ಡನ್ ಡಕ್, ರಿಲೇ ರೊಸ್ಸೊ 1 (3) ರನ್, ಲಿಯಾಮ್ ಲಿವಿಂಗ್‌ಸ್ಟನ್ 1 (2) ರನ್, ಹರ್‌ಪ್ರೀತ್ ಸಿಂಗ್ ಭಾಟಿಯಾ 13 (15) ರನ್, ಜಿತೇಶ್ ಶರ್ಮಾ 9 (9) ರನ್ ಗಳಿಸಿದರು. ಶಶಾಂಕ್ ಸಿಂಗ್ 41 (25) ರನ್ ಗಳಿಸಿ ಅಬ್ಬರಿಸಿದರೆ, ಅಶುತೋಷ್ ಶರ್ಮಾ 28 ಎಸೆತಗಳಲ್ಲಿ 2 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 61 ರನ್ ಬಾರಿಸಿದರು. ಹರ್‌ಪ್ರೀತ್ ಬ್ರಾರ್ 21 (20) ರನ್, ಕಗಿಸೊ ರಬಾಡಾ 8 (3) ರನ್ ಮತ್ತು ಹರ್ಷಲ್ ಪಟೇಲ್ ಅಜೇಯ 1 (4) ರನ್ ಕಲೆಹಾಕಿದರು.
ಮುಂಬೈ ಇಂಡಿಯನ್ಸ್ ಪರ ಜಸ್‌ಪ್ರೀತ್ ಬುಮ್ರಾ 3 ವಿಕೆಟ್, ಗೆರಾಲ್ಡ್ ಸೋಟ್ಜೆ 3 ವಿಕೆಟ್, ಆಕಾಶ್ ಮಧ್ವಲ್, ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಶ್ರೇಯಸ್ ಗೋಪಾಲ್ ತಲಾ ಒಂದೊಂದು ವಿಕೆಟ್ ಪಡೆದರು.
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್‌ಕೌಂಟರ್ ಹೇಳಿಕೆ…
ನ್ಯೂ ಇಯರ್ ಸೆಲಬ್ರೇಷನ್‌ಗೆ ದಿನಗಣನೆ ಬೆಂಗಳೂರು: 2024ನ್ನು ಮುಗಿಸಿ 2025ನ್ನು ಬರಮಾಡಿಕೊಳ್ಳಲು ಸಿಲಿಕಾನ್ ಸಿಟಿಯೇ ತುದಿಗಾಲಲ್ಲಿ ಕಾತರದಿಂದ ಕಾಯುತ್ತಿದೆ. ಸದ್ಯ…