ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಲ್ ಟೂರ್ನಿಯ ಏಳನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕೀಂಗ್ಸ್ 63 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 6 ಕಳೆದುಕೊಂಡು 206 ರನ್ ಗಳಿಸಿ 207 ಟಾರ್ಗೆಟ್ ನೀಡಿತು. ಈ ಬೃಹತ್ ಮೊತ್ತ ಬೆನ್ನತ್ತಿದ ಗುಜರಾತ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 143 ರನ್ ಕೆಲಹಾಕಿ ಸೋಲೊಪ್ಪಿಕೊಂಡಿದೆ.
ಚೆನ್ನೈ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಚೆನ್ನೈಗೆ ಉತ್ತಮ ಆರಂಭ ದೊರೆಯಿತು. ನಾಯಕರ ಋತುರಾಜ್ ಗಾಯಕ್ವಾಡ್ ಮತ್ತು ಯುವ ಬ್ಯಾಟರ್ ರಚಿನ್ ರವೀಂದ್ರ ಅದ್ಭುತವಾಗಿ ಇನ್ನಿಂಗ್ಸ್ ಕಟ್ಟಿದರು.
ಈ ಜೋಡಿ ಮೊದಲ ವಿಕೆಟ್‌ಗೆ 62 ರನ್ ಗಳ ಜೊತೆಯಾಟ ಆಡಿದರು. ಆರಂಭದಿಂದಲೇ ಸಿಡಿದ ರಚಿನ್ ಕೇವಲ 20 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 6 ಬೌಂಡರಿ ಸಹಿತ 46 ರನ್ ಚಚ್ಚಿ ನಿರ್ಗಮಿಸಿದರು. ನಂತರ ಬಂದ ಅಜಿಂಕೆ ರಹಾನೆ (12) ಬೇಗನೆ ಪೆವಿಲಿಯನ್ ಸೇರಿಕೊಂಡರು. ನಾಯಕ ಋತುರಾಜ್ (46) ಕಲೆಹಾಕಿ ಔಟಾದರು.
ಬಳಿಕ ಜೊತೆಯಾದ ಡೆರಿಯಲ್ ಮಿಚೆಲ್ ಮತ್ತು ಶಿವಂ ದುಬೆ ಉತ್ತಮವಾಗಿ ಇನ್ನಿಂಗ್ಸ್ ಕಟ್ಟಿದರು. ಮಿಚೆಲ್ (24) ಬಾರಿಸಿದರೇ, ಶಿವಂ ದುಬೆ ತಾವೆದುರಿಸಿದ 23 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 2 ಬೌಂಡರಿ ಸಹಿತ (51) ಅರ್ಧಶತಕ ಪೂರೈಸಿದರು. ಕೊನೆಯಲ್ಲಿ ಅಬ್ಬರಿಸಿ ಸಮೀರ್ ರಿಜ್ವಿ (14) ಮತ್ತು ಜಡೇಜಾ (7) ರನ್ ಬಾರಿಸಿ ತಂಡದ ಮೊತ್ತ ಇನ್ನೂರರ ಗಡಿ ದಾಟುವಲ್ಲಿ ಶ್ರಮ ವಹಿಸಿದರು.
ಗುಜರಾತ್ ಪರ ರಶೀದ್ ಖಾನ್ 2 ವಿಕೆಟ್ ಪಡೆದರೇ, ಸಾಯ್ ಕಿಶೋರ್, ಮೋಹಿತ್ ಶರ್ಮಾ ಮತ್ತು ಸ್ಪೆನ್ಸರ್ ಜಾನ್ಸನ್ ತಲಾ ಒಂದೊಂದು ವಿಕೆಟ್ ಪಡೆದರು.
ಗುಜರಾತ್ ಟೈಟನ್ಸ್ ಇನ್ನಿಂಗ್ಸ್: ಬೃಹತ್ ಮೊತ್ತ ಬೆನ್ನತ್ತಿದ ಗುಜರಾತ್ ತಂಡಕ್ಕೆ ನಿರೀಕ್ಷಿತ ಆರಂಭ ದೊರೆಯಲಿಲ್ಲ. ನಾಯಕ ಶುಭ್‌ಮನ್ ಗಿಲ್ (8) ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿದರು. ವೃದ್ಧಿಮಾನ್ ಶಾ (21) ಸ್ವಲ್ಪ ಅಬ್ಬರಿಸಿದರೂ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಾಗಲಿಲ್ಲ. ವಿಜಯ್ ಶಂಕರ್ (12), ಡೆವಿಡ್ ಮಿಲ್ಲರ್ (21), ಸಾಯ್ ಸುದರ್ಶನ್ (37), ಓಮರ್ಜಾಯ್ (11), ತೆವಾಟಿಯಾ (6) ರಶೀದ್ ಖಾನ್ (1), ಉಮೇಶ್ ಯಾದವ್ ಔಟಾಗದೇ (10) ಮತ್ತು ಸ್ಪೆನ್ಸರ್ ಜಾನ್ಸನ್ ಔಟಾಗದೇ (5) ರನ್ ಗಳಿಸಿದರು.
ಸಿಎಸ್‌ಕೆ ಪರ ದೀಪಕ್ ಚಾಹರ್, ಮುಸ್ತಿಫೀಜುರ್ ರೆಹಮಾನ್ ಮತ್ತು ತುಷಾರ್ ದೇಶ್‌ಪಾಂಡೆ ತಲಾ ಎರಡು ವಿಕೆಟ್ ಪಡೆದರು
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…