ಕ್ರೀಡೆ

IPL 2024: ಗುಜರಾತ್‌ಗೆ ಹೀನಾಯ ಸೋಲು: ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸಿಎಸ್‌ಕೆ !

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಲ್‌ ಟೂರ್ನಿಯ ಏಳನೇ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ ವಿರುದ್ಧ ಚೆನ್ನೈ ಸೂಪರ್‌ ಕೀಂಗ್ಸ್‌ 63 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 6 ಕಳೆದುಕೊಂಡು 206 ರನ್‌ ಗಳಿಸಿ 207 ಟಾರ್ಗೆಟ್‌ ನೀಡಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಗುಜರಾತ್‌ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 143 ರನ್‌ ಕೆಲಹಾಕಿ ಸೋಲೊಪ್ಪಿಕೊಂಡಿದೆ.

ಚೆನ್ನೈ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈಗೆ ಉತ್ತಮ ಆರಂಭ ದೊರೆಯಿತು. ನಾಯಕರ ಋತುರಾಜ್‌ ಗಾಯಕ್ವಾಡ್‌ ಮತ್ತು ಯುವ ಬ್ಯಾಟರ್‌ ರಚಿನ್‌ ರವೀಂದ್ರ ಅದ್ಭುತವಾಗಿ ಇನ್ನಿಂಗ್ಸ್‌ ಕಟ್ಟಿದರು.
ಈ ಜೋಡಿ ಮೊದಲ ವಿಕೆಟ್‌ಗೆ 62 ರನ್‌ ಗಳ ಜೊತೆಯಾಟ ಆಡಿದರು. ಆರಂಭದಿಂದಲೇ ಸಿಡಿದ ರಚಿನ್‌ ಕೇವಲ 20 ಎಸೆತಗಳಲ್ಲಿ 3 ಸಿಕ್ಸರ್‌ ಮತ್ತು 6 ಬೌಂಡರಿ ಸಹಿತ 46 ರನ್‌ ಚಚ್ಚಿ ನಿರ್ಗಮಿಸಿದರು. ನಂತರ ಬಂದ ಅಜಿಂಕೆ ರಹಾನೆ (12) ಬೇಗನೆ ಪೆವಿಲಿಯನ್‌ ಸೇರಿಕೊಂಡರು. ನಾಯಕ ಋತುರಾಜ್‌ (46) ಕಲೆಹಾಕಿ ಔಟಾದರು.

ಬಳಿಕ ಜೊತೆಯಾದ ಡೆರಿಯಲ್‌ ಮಿಚೆಲ್‌ ಮತ್ತು ಶಿವಂ ದುಬೆ ಉತ್ತಮವಾಗಿ ಇನ್ನಿಂಗ್ಸ್‌ ಕಟ್ಟಿದರು. ಮಿಚೆಲ್‌ (24) ಬಾರಿಸಿದರೇ, ಶಿವಂ ದುಬೆ ತಾವೆದುರಿಸಿದ 23 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್‌ ಹಾಗೂ 2 ಬೌಂಡರಿ ಸಹಿತ (51) ಅರ್ಧಶತಕ ಪೂರೈಸಿದರು. ಕೊನೆಯಲ್ಲಿ ಅಬ್ಬರಿಸಿ ಸಮೀರ್‌ ರಿಜ್ವಿ (14) ಮತ್ತು ಜಡೇಜಾ (7) ರನ್‌ ಬಾರಿಸಿ ತಂಡದ ಮೊತ್ತ ಇನ್ನೂರರ ಗಡಿ ದಾಟುವಲ್ಲಿ ಶ್ರಮ ವಹಿಸಿದರು.

ಗುಜರಾತ್‌ ಪರ ರಶೀದ್‌ ಖಾನ್‌ 2 ವಿಕೆಟ್‌ ಪಡೆದರೇ, ಸಾಯ್‌ ಕಿಶೋರ್‌, ಮೋಹಿತ್‌ ಶರ್ಮಾ ಮತ್ತು ಸ್ಪೆನ್ಸರ್‌ ಜಾನ್ಸನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್‌: ಬೃಹತ್‌ ಮೊತ್ತ ಬೆನ್ನತ್ತಿದ ಗುಜರಾತ್‌ ತಂಡಕ್ಕೆ ನಿರೀಕ್ಷಿತ ಆರಂಭ ದೊರೆಯಲಿಲ್ಲ. ನಾಯಕ ಶುಭ್‌ಮನ್‌ ಗಿಲ್‌ (8) ಬಂದಷ್ಟೇ ವೇಗವಾಗಿ ಪೆವಿಲಿಯನ್‌ ಸೇರಿದರು. ವೃದ್ಧಿಮಾನ್‌ ಶಾ (21) ಸ್ವಲ್ಪ ಅಬ್ಬರಿಸಿದರೂ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಾಗಲಿಲ್ಲ. ವಿಜಯ್‌ ಶಂಕರ್‌ (12), ಡೆವಿಡ್‌ ಮಿಲ್ಲರ್‌ (21), ಸಾಯ್‌ ಸುದರ್ಶನ್‌ (37), ಓಮರ್ಜಾಯ್‌ (11), ತೆವಾಟಿಯಾ (6) ರಶೀದ್‌ ಖಾನ್‌ (1), ಉಮೇಶ್‌ ಯಾದವ್‌ ಔಟಾಗದೇ (10) ಮತ್ತು ಸ್ಪೆನ್ಸರ್‌ ಜಾನ್ಸನ್‌ ಔಟಾಗದೇ (5) ರನ್‌ ಗಳಿಸಿದರು.

ಸಿಎಸ್‌ಕೆ ಪರ ದೀಪಕ್‌ ಚಾಹರ್‌, ಮುಸ್ತಿಫೀಜುರ್‌ ರೆಹಮಾನ್‌ ಮತ್ತು ತುಷಾರ್‌ ದೇಶ್‌ಪಾಂಡೆ ತಲಾ ಎರಡು ವಿಕೆಟ್‌ ಪಡೆದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago