ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ನ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು ಸಾಧಿಸುವ ಮೂಲಕ ಪ್ಲೇಆಫ್‌ಗೆ ಮತ್ತಷ್ಟು ಸನಿಹವಾಗಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ರಿಯಾನ್ ಪರಾಗ್ ಜವಾಬ್ದಾರಿಯುತ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 141 ರನ್ ಕಲೆಹಾಕುವ ಮೂಲಕ ಚೆನ್ನೈ ತಂಡಕ್ಕೆ 142 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ 18.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 145 ರನ್ ಕಲೆಹಾಕಿತು.
ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 24 (21) ರನ್ ಮತ್ತು ಜೋಸ್ ಬಟ್ಲರ್ 21 (25) ರನ್ ಬಾರಿಸಿದರು. ಇನ್ನುಳಿದಂತೆ ನಾಯಕ ಸಂಜು ಸ್ಯಾಮ್ಸನ್ 15 (19) ರನ್, ಧ್ರುವ್ ಜುರೆಲ್ 28 (18) ರನ್, ಶುಭಮ್ ದುಬೆ ಡಕ್‌ಔಟ್, ರವಿಚಂದ್ರನ್ ಅಶ್ವಿನ್ ಅಜೇಯ 1 (1) ರನ್ ಮತ್ತು ರಿಯಾನ್ ಪರಾಗ್ ಅಜೇಯ 47 (35) ರನ್ ಗಳಿಸಿದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ಸಿಮರ್‌ಜೀತ್ ಸಿಂಗ್ 3 ಮತ್ತು ತುಷಾರ್ ದೇಶಪಾಂಡೆ 2 ವಿಕೆಟ್ ಪಡೆದರು.
ಚೆನ್ನೈ ಸೂಪರ್ ಕಿಂಗ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರಚಿನ್ ರವೀಂದ್ರ 27 (18) ರನ್ ಮತ್ತು ನಾಯಕ ರುತುರಾಜ್ ಗಾಯಕ್ವಾಡ್ ಅಜೇಯ 42 (41) ರನ್ ಗಳಿಸಿದರು. ಇನ್ನುಳಿದಂತೆ ಡೇರಿಲ್ ಮಿಚೆಲ್ 22 (13) ರನ್, ಮೊಯಿನ್ ಅಲಿ 10 (13) ರನ್, ಶಿವಮ್ ದುಬೆ 18 (11) ರನ್, ರವೀಂದ್ರ ಜಡೇಜಾ 5 (7) ರನ್ ಮತ್ತು ಸಮೀರ್ ರಿಜ್ವಿ ಅಜೇಯ 15 (8) ರನ್ ಗಳಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ರವಿಚಂದ್ರನ್ ಅಶ್ವಿನ್ 2 ವಿಕೆಟ್, ನಾಂದ್ರೆ ಬರ್ಗರ್ ಮತ್ತು ಯುಜ್ವೇಂದ್ರ ಚಹಲ್ ತಲಾ ಒಂದೊಂದು ವಿಕೆಟ್ ಪಡೆದರು.