ಕ್ರೀಡೆ

IPL 2024: ರಾಜಸ್ಥಾನ್‌ ರಾಯಲ್ಸ್‌ ಮಣಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ನ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು ಸಾಧಿಸುವ ಮೂಲಕ ಪ್ಲೇಆಫ್‌ಗೆ ಮತ್ತಷ್ಟು ಸನಿಹವಾಗಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್‌ ರಿಯಾನ್‌ ಪರಾಗ್‌ ಜವಾಬ್ದಾರಿಯುತ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 141 ರನ್‌ ಕಲೆಹಾಕುವ ಮೂಲಕ ಚೆನ್ನೈ ತಂಡಕ್ಕೆ 142 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಚೆನ್ನೈ ಸೂಪರ್‌ ಕಿಂಗ್ಸ್‌ 18.2 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 145 ರನ್‌ ಕಲೆಹಾಕಿತು.

ರಾಜಸ್ಥಾನ್‌ ರಾಯಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌ 24 (21) ರನ್‌ ಮತ್ತು ಜೋಸ್‌ ಬಟ್ಲರ್‌ 21 (25) ರನ್‌ ಬಾರಿಸಿದರು. ಇನ್ನುಳಿದಂತೆ ನಾಯಕ ಸಂಜು ಸ್ಯಾಮ್ಸನ್‌ 15 (19) ರನ್‌, ಧ್ರುವ್‌ ಜುರೆಲ್‌ 28 (18) ರನ್‌, ಶುಭಮ್‌ ದುಬೆ ಡಕ್‌ಔಟ್‌, ರವಿಚಂದ್ರನ್‌ ಅಶ್ವಿನ್‌ ಅಜೇಯ 1 (1) ರನ್‌ ಮತ್ತು ರಿಯಾನ್‌ ಪರಾಗ್‌ ಅಜೇಯ 47 (35) ರನ್‌ ಗಳಿಸಿದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಸಿಮರ್‌ಜೀತ್‌ ಸಿಂಗ್‌ 3 ಮತ್ತು ತುಷಾರ್‌ ದೇಶಪಾಂಡೆ 2 ವಿಕೆಟ್‌ ಪಡೆದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರಚಿನ್‌ ರವೀಂದ್ರ 27 (18) ರನ್‌ ಮತ್ತು ನಾಯಕ ರುತುರಾಜ್‌ ಗಾಯಕ್ವಾಡ್‌ ಅಜೇಯ 42 (41) ರನ್‌ ಗಳಿಸಿದರು. ಇನ್ನುಳಿದಂತೆ ಡೇರಿಲ್‌ ಮಿಚೆಲ್‌ 22 (13) ರನ್‌, ಮೊಯಿನ್‌ ಅಲಿ 10 (13) ರನ್‌, ಶಿವಮ್‌ ದುಬೆ 18 (11) ರನ್‌, ರವೀಂದ್ರ ಜಡೇಜಾ 5 (7) ರನ್‌ ಮತ್ತು ಸಮೀರ್‌ ರಿಜ್ವಿ ಅಜೇಯ 15 (8) ರನ್‌ ಗಳಿಸಿದರು.

ರಾಜಸ್ಥಾನ್‌ ರಾಯಲ್ಸ್‌ ಪರ ರವಿಚಂದ್ರನ್‌ ಅಶ್ವಿನ್‌ 2 ವಿಕೆಟ್‌, ನಾಂದ್ರೆ ಬರ್ಗರ್‌ ಮತ್ತು ಯುಜ್ವೇಂದ್ರ ಚಹಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

6 mins ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

4 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

4 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

4 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

4 hours ago