ಬೆಂಗಳೂರು: ನಿನ್ನೆ ನಡೆದ ಐಪಿಎಲ್ ಸೀನಸ್ 17ರ ನಿರ್ಣಯಕ ಹಂತದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈಸೂಪರ್ ಕಿಂಗ್ಸ್ ತಂಡದ ವಿರುದ್ಧ 27ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಅಂತಿಮ ನಾಲ್ಕರ ಘಟಕ್ಕೆ ಅರ್ಹತೆ ಪಡೆಯಿತು.
ಟೂರ್ನಿಯಲ್ಲಿ ಸತತ 6 ಪಂದ್ಯಗಳನ್ನು ಸೋತು, ಬಳಿಕ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್‌ಗೆ ಲಗ್ಗೆಯಿಟ್ಟ ಆರ್‌ಸಿಬಿಯ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆರ್‌ಸಿಬಿ ಪ್ರದರ್ಶನದ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮೆಚ್ಚುಗೆಯ ಮಾತುಗಳನ್ನಾಡಿರುವ ಸಿಎಂ ಸಿದ್ದರಾಮಯ್ಯ, ಸತತ 6ನೇ ಗೆಲುವಿನೊಂದಿಗೆ ನಮ್ಮ ಆರ್‌ಸಿಬಿ ಪ್ಲೇಆಫ್‌ಗೆ ಲಗ್ಗೆಯಿಟ್ಟಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದ್ದು, ಪ್ರತಿ ಕ್ಷಣವನ್ನು ಆಸ್ವಾದಿಸಿದೆ. ನಮ್ಮ ಆರ್‌ಸಿಬಿ ತಂಡದ ಐತಿಹಾಸಿಕ ಗೆಲುವಿನ ಕ್ಷಣಕ್ಕೆ ಸಾಕ್ಷಿಯಾಗಿದ್ದು ಖುಷಿಕೊಟ್ಟಿದೆ. ಇದು ಆರ್‌ಸಿಬಿಯ ಹೊಸ ಅಧ್ಯಯ ಎಂದು ಬರೆದುಕೊಂಡಿದ್ದಾರೆ.
https://x.com/siddaramaiah/status/1791904691929927867
ಇವರಿಗೆ ಜತೆಯಾಗಿ ಸಭಾಪತಿ ಬಸವರಾಜ ಹೊರಟ್ಟಿ, ಗೃಹ ಸಚಿವ ಜಿ. ಪರಮೇಶ್ವರ್, ಎಚ್.ಸಿ ಮಹದೇವಪ್ಪ ಸೇರಿದಂತೆ ಹಲವರು ಸಾಥ್ ನೀಡಿದರು.
ಫ್ಯಾನ್ಸ್‌ಗೆ ಕೃತಜ್ಞತೆ ಸಲ್ಲಿಸಿದ ಆರ್‌ಸಿಬಿ: ಪಾಯಿಂಟ್ಸ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಿಂದ ಹಿಡಿದು ಪ್ಲೇಆಫ್‌ಗೆ ಕ್ವಾಲಿಫೈ ಆದ ಆರ್‌ಸಿಬಿ ತನ್ನ ಅಪಾರ ಅಭಿಮಾನಿಗಳಿಗೆ ಸ್ಟೇಡಿಯಂನಲ್ಲಿ ಧನ್ಯವಾದ ಅರ್ಪಿಸಿದ್ದಾರೆ. ಪಂದ್ಯದ ಬಳಿಕ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ತಂಡ ಧನ್ಯವಾದ ಅರ್ಪಿಸಿತು.
ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ತಂಡಕ್ಕೆ ತೋರಿದ ಅಭೂತಪೂರ್ವ ಬೆಂಬಲದ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಮಧ್ಯರಾತ್ರಿ 1.30 ಗಂಟೆ ಸಮಯದಲ್ಲಿ ತಂಡದ ಆಟಗಾರರು ಬಸ್ ನಲ್ಲಿ ಪ್ರಯಾಣಿಸುವ ವೇಳೆ ರಸ್ತೆಯುದ್ದಕ್ಕೂ ನೆರೆದಿದ್ದ ಅಭಿಮಾನಿಗಳು ಆರ್‌ಸಿಬಿ ಆರ್‌ಸಿಬಿ ಎಂದು ಕೂಗುತ್ತಾ ತಂಡದ ಗೆಲುವನ್ನು ಸಂಭ್ರಮಿಸಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.
https://www.instagram.com/reel/C7H-89sBuXF/?igsh=eTR3NnE2eXZldXNt
ಇನ್ನು ರಾಜ್ಯಾದ್ಯಂತ ಅಭಿಮಾನಿಗಳು ಪಂದ್ಯ ಗೆದ್ದು, ಕ್ವಾಲಿಫೈ ಆದ ಖುಷಿಗೆ ರಾಜ್ಯಾದ್ಯಂತ ಅಭಿಮಾನಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ.
ಇನ್ನು ಆರ್‌ಸಬಿ ತನ್ನ ಮೊದಲ ಕ್ವಾಲಿಫೈ ಪಂದ್ಯವನ್ನು ಬುಧವಾರ ರಾಜಸ್ಥಾನ್ ರಾಯಲ್ಸ್ ಇಲ್ಲ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…