ಕ್ರೀಡೆ

IPL 2024: ಗೆಲುವಿನ ಲಯಕ್ಕೆ ಮರಳಿದ ಸಿಎಸ್‌ಕೆ; ಕೆಕೆಆರ್‌ ಹೀನಾಯ ಸೋಲು!

ಚೆನ್ನೈ: ನಾಯಕ ಋತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕ, ಜಡೇಜಾ ಮತ್ತು ದೇಶ್‌ಪಾಂಡೆ ಬೌಲಿಂಗ್‌ ದಾಳಿಗೆ ತಬ್ಬಿಬ್ಬಾದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸಿಎಸ್‌ಕೆ ವಿರುದ್ಧ ಹೀನಾಯ ಸೋಲು ಕಂಡಿದೆ.

ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಕೋಲ್ಕತ್ತ ನೈಟ್ ರೈಡರ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 137 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಸಿಎಸ್‌ಕೆ 17.4 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 141 ರನ್‌ಗಳಿಸಿ 7 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿತು.

ಕೆಕೆಆರ್‌ ಇನ್ನಿಂಗ್ಸ್‌: ಇತ್ತ ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ಗೆ ಇನ್ನಿಂಗ್ಸ್‌ ಆರಂಭದ ಮೊದಲ ಬಾಲ್‌ನಲ್ಲೇ ಆಘಾತ ಎದುರಾಯಿತು. ಫಿಲ್ ಸಾಲ್ಟ್ 0(1) ನಿರ್ಗಮಿಸಿದರು. ನಂತರ ಸುನಿಲ್ ನರೈನ್ 27(20), ಅಂಗ್ರ್ಕಿಶ್ ರಘುವಂಶಿ 24(18) ತಂಡಕ್ಕೆ ಚೇತರಿಕೆ ಆಟವಾಡಿದರು. ನಾಯಕ ಶ್ರೇಯಸ್ ಅಯ್ಯರ್ 34(32) ರನ್‌ ಗಳಿಸಿದ್ದೇ ತಂಡದ ಪರ ಗರಿಷ್ಠ. ಉಳಿದಂತೆ ವೆಂಕಟೇಶ್ ಅಯ್ಯರ್ 3(8), ರಮಣದೀಪ್ ಸಿಂಗ್ 13(12) , ರಿಂಕು ಸಿಂಗ್ 9(14), ಆಂಡ್ರೆ ರಸೆಲ್ 10(10) , ಅನುಕೂಲ್ ರಾಯ್ 3(3), ಮಿಚೆಲ್ ಸ್ಟಾರ್ಕ್ 0(3), ವೈಭವ್ ಅರೋರಾ 1(1) ರನ್ ಗಳಿಸಿದರು. ಕೆಕೆಆರ್‌ಗೆ ಮಧ್ಯಮ ಕ್ರಮಾಂಕ ಕೈ ಹಿಡಿಯುವಲ್ಲಿ ವಿಫಲವಾಗಿ ತಂಡ ಸಾಧಾರಣ ಮೊತ್ತಕ್ಕೆ ಕುಸಿಯಿತು.

ಸಿಎಸ್‌ಕೆ ಪರ ತುಷಾರ್ ದೇಶಪಾಂಡೆ ಹಾಗೂ ರವೀಂದ್ರ ಜಡೇಜಾ 3, ಮುಸ್ತಫಿಜುರ್ ರೆಹಮಾನ್ 2 ಮತ್ತು ತೀಕ್ಷಣ 1 ವಿಕೆಟ್‌ ಪಡೆದು ಮಿಂಚಿದರು.

ಸಿಎಸ್‌ಕೆ ಇನ್ನಿಂಗ್ಸ್‌: ಸಿಎಸ್‌ಕೆ ಪರ ನಾಯಕ ಋತುರಾಜ್‌ ಜವಾಬ್ದಾರಿಯುತ ಇನ್ನಿಂಗ್ಸ್‌ ಆಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಋತುರಾಜ್‌ ಔಟಾಗದೇ 58 ಎಸೆತಗಳಲ್ಲಿ 9 ಬೌಂಡರಿ ಸಹಿತ 67 ರನ್‌ ಕಲೆಹಾಕಿ ಕೊನೆವರೆಗು ನಿಂತು ಪಂದ್ಯ ಮುಗಿಸಿದರು. ಉಳಿದಂತೆ ರಚಿನ್‌ ರವೀಂದ್ರ 15(8), ಡೇರಿಯಲ್‌ ಮಿಚೆಲ್‌ 25(19), ಶಿವಂ ದುಬೆ 28(18) ಮತ್ತು ಎಂ.ಎಸ್‌ ಧೋನಿ 1(3) ರನ್‌ ಗಳಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು.

ಕೆಕೆಆರ್‌ ಪರ ಅರೋರ 2, ಸುನೀಲ್‌ ನರೈನ್‌ ಒಂದು ವಿಕೆಟ್‌ ಕಿತ್ತರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹವಾಮಾನ ವೈಪರೀತ್ಯಕ್ಕೆ ದಸರಾ ಏರ್ ಶೋ ಮೊಟಕು: ಪ್ರೇಕ್ಷಕರಿಗೆ ನಿರಾಸೆ

ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…

10 mins ago

ಓದುಗರ ಪತ್ರ: ಹೆಚ್‌ಡಿಕೆಯವರೇ, ಟೀಕೆ ಮಾಡುವಾಗ ಎಚ್ಚರಿಕೆ ಇರಬೇಕಲ್ಲವೇ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…

1 hour ago

ಓದುಗರ ಪತ್ರ: ಶಾಸಕ ಜಿ.ಟಿ.ದೇವೇಗೌಡರ ನಡೆ ಶ್ಲಾಘನಿಯ

ಮೈಸೂರಿನ ಕಳಸ್ಥವಾಡಿ ಸಮೀಪದ ವಿರಿಜ ನಾಲೆ ಸಮೀಪ ಇತ್ತೀಚೆಗೆ ನಡೆದ ಅವಘಡದಲ್ಲಿ ತೊಂದರೆಗೊಳಗಾದ ಕಬ್ಬು ಸಾಗಿಸುತ್ತಿದ್ದ ಚಂದ್ರು ಎಂಬ ರೈತನ…

1 hour ago

ಓದುಗರ ಪತ್ರ: ದನಗಳ ಪ್ರದರ್ಶನಕ್ಕೆ ಬಂದ ರೈತರೂ ಪ್ರತಿಭಟಿಸಬೇಕಾಯಿತಲ್ಲ…

ರೈತ ದಸರಾ ಅಂಗವಾಗಿ ಮೈಸೂರಿನ ಕುಕ್ಕರಹಳ್ಳಿಯ ಬೋಽಸತ್ವ ಹಾಸ್ಟೆಲ್ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದ ಹಳ್ಳಿಕಾರ್ ತಳಿಯ ಜೋಡಿ ದನಗಳ ಪ್ರದರ್ಶನವನ್ನು ಗಮನಿಸಿದರೆ…

1 hour ago

ಜನತಂತ್ರ ಉಳಿಸುವ ಯುವಜನರ ನಾಳೆಗಳನ್ನು ಗೌರವಿಸೋಣ

ದೆಹಲಿ ಕಣ್ನೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಪ್ರಶ್ನಿಸುವುದು ಮತ್ತು ಪ್ರತಿಭಟಿಸುವುದು ಜನತಂತ್ರದ ಜೀವಾಳ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ…

2 hours ago

ಪ್ರೇಮದಲ್ಲಿ ರಾಕ್ಷಸನೂ ಮಗುವೇ ತಾನೇ…

ಕೃಪಾ ದೇವರಾಜ್, ಮಡಿಕೇರಿ ಒಮ್ಮೆ ಮನೆಗೆ ತಮ್ಮ ಬಂದಿದ್ದ, ‘ಒಂದು ನಾಯಿ ತಂದಿದ್ದೀನಿ ಕಣೇ... ಒಂದು ಲಕ್ಷದ ಹತ್ತು ಸಾವಿರ’…

2 hours ago