ನಿನ್ನೆ ( ನವೆಂಬರ್ 27 ) ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮತ್ತೆ ತಮ್ಮ ತಂಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ. ಗುಜರಾತ್ ಟೈಟನ್ಸ್ ತಂಡದ ನಾಯಕನಾಗಿದ್ದ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಟ್ರೇಡಿಂಗ್ ಮೂಲಕ ಖರೀದಿಸಿದೆ.
ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದಲ್ಲಿಯೇ ಇದ್ದ ಹಾರ್ದಿಕ್ ಪಾಂಡ್ಯ 2022ರ ಐಪಿಎಲ್ ಹರಾಜಿಗೂ ಮುನ್ನ ತಂಡವನ್ನು ತ್ಯಜಿಸಿ ಆಗಷ್ಟೇ ಐಪಿಎಲ್‌ಗೆ ಕಾಲಿಟ್ಟಿದ್ದ ಗುಜರಾತ್ ಟೈಟನ್ಸ್ ತಂಡವನ್ನು ಸೇರಿಕೊಂಡಿದ್ದರು. ನಾಯಕನಾಗಿ ಆ ಸೀಸನ್‌ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಪ್ರತಿನಿಧಿಸಿದ್ದ ಪಾಂಡ್ಯ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೇ ಈ ಬಾರಿಯ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಫೈನಲ್ ಹಂತದವರೆಗೂ ಪಾಂಡ್ಯ ತಂದಿದ್ದರು.
ಹೀಗೆ ಎರಡು ಸೀಸನ್‌ನಲ್ಲಿ ಅದ್ಭುತವಾಗಿ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಇದೀಗ ಮುಂಬೈ ಇಂಡಿಯನ್ಸ್‌ಗೆ ಮರಳಿದ್ದು, ಹಾರ್ದಿಕ್ ತಂಡಕ್ಕೆ ವಾಪಸ್ಸಾದ ಬೆನ್ನಲ್ಲೇ ತಂಡದ ಮತ್ತೋರ್ವ ಆಟಗಾರ ಜಸ್‌ಪ್ರೀತ್ ಬುಮ್ರಾ ಸಾಮಾಜಿಕ ಜಾಲತಾಣದಲ್ಲಿ ವಿಚಿತ್ರ ಸ್ಟೋರಿ ಹಂಚಿಕೊಳ್ಳುವ ಮೂಲಕ ಮುಂಬೈ ಇಂಡಿಯನ್ಸ್ ತಂಡದಲ್ಲಿ ಭಿನ್ನಮತವಿದೆ ಎಂಬ ಅನುಮಾನ ಮೂಡುವಂತೆ ಮಾಡಿದ್ದಾರೆ.
ಹೌದು, ಜಸ್‌ಪ್ರೀತ್ ಬುಮ್ರಾ ʼಕೆಲವೊಮ್ಮೆ ನಿಶಬ್ದವೇ ಅತ್ಯುತ್ತಮ ಉತ್ತರʼ ಎಂಬ ಸ್ಟೋರಿಯನ್ನು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಲವು ವರ್ಷಗಳಿಂದ ಮುಂಬೈ ಇಂಡಿಯನ್ಸ್ ಆಟಗಾರನಾಗಿದ್ದ ಬುಮ್ರಾ ತಂಡದ ಮುಂದಿನ ನಾಯಕನಾಗುವ ಸಾಧ್ಯತೆಗಳಿತ್ತು, ಆದರೆ ಪಾಂಡ್ಯ ಆಗಮನದಿಂದ ರೋಹಿತ್ ಬಳಿಕ ನಾಯಕತ್ವ ಕೈತಪ್ಪಲಿದೆ, ಹೀಗಾಗಿ ಬುಮ್ರಾ ಇಂತಹ ಸ್ಟೋರಿ ಹಂಚಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಲ್ಲದೇ ಬುಮ್ರಾ ಮುಂಬೈ ಇಂಡಿಯನ್ಸ್ ಇನ್ಸ್ಟಾಗ್ರಾಮ್ ಖಾತೆಯನ್ನು ಅನ್‌ಫಾಲೋ ಮಾಡಿರುವುದು ಈ ವದಂತಿಗೆ ರೆಕ್ಕೆ ಪುಕ್ಕ ಬರುವಂತೆ ಮಾಡಿವೆ. ಇಷ್ಟು ದಿನಗಳವರೆಗೆ ಮುಂಬೈ ಇಂಡಿಯನ್ಸ್ ಫಾಲೋ ಮಾಡಿ ಇದೀಗ ಅನ್‌ಫಾಲೋ ಮಾಡಿರುವ ಬುಮ್ರಾ ತಂಡ ಬಿಟ್ಟು ಬೇರೆ ಫ್ರಾಂಚೈಸಿಯನ್ನೇನಾದರೂ ಸೇರಲಿದ್ದಾರಾ ಎಂಬ ಅನುಮಾನ ಮೂಡಿಸಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…