ಕ್ರೀಡೆ

IPL 2024: ಕೆಕೆಆರ್‌ಗೆ ಆರ್‌ಸಿಬಿ ವಿರುದ್ಧ 1ರನ್‌ಗಳ ರೋಚಕ ಜಯ: ಆರ್‌ಸಿಬಿಗೆ ಸತತ 6ನೇ ಸೋಲು!

ಕೊಲ್ಕತ್ತಾ: ಕೊಲ್ಕತ್ತಾ ನೈಟ್‌ರೈಡರ್ಸ್‌ ತಂಡದ ಶಿಸ್ತುಬದ್ಧ ಬೌಲಿಂಗ್‌ ದಾಳಿಗೆ ಮಂಕಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 1ರನ್‌ ಗಳ ಹೀನಾಯ ಸೋಲು ಕಂಡಿದೆ. ಇದು ಆರ್‌ಸಿಬಿಗೆ ಟೂರ್ನಿಯಲ್ಲಿ 6ನೇ ಸೋಲಾಗಿದ್ದು, ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗದ್ದರೂ ಸಹಾ ಆರ್‌ಸಿಬಿ ಈ ಸೀಸನ್‌ನಿಂದ ಬಹುತೇಕ ಹೊರಬಿದ್ದಂತೆ ಆಗಿದೆ.

ಇಲ್ಲಿನ ಈಡೆನ್‌ ಗಾರ್ಡನ್‌ ಮೈದಾನದಲ್ಲಿ ನಡೆದ ಐಪಿಎಲ್‌ ಸೀಸನ್‌ 17ರ ಆವೃತ್ತಿಯ ಲೀಗ್‌ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್‌ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 222ರನ್‌ ಕಲೆಹಾಕಿ 223 ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 221 ರನ್‌ ಗಳಿಸಿತು.

ಕೆಕೆಆರ್‌ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ ತಂಡಕ್ಕೆ ಆರಂಭಿಕ ಆಘಾತ ಉಂಟಾಯಿತು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ನರೈನ್‌ ಕೇವಲ 10ರನ್‌ ಗಳಿಗೆ ಸುಸ್ತಾದರು. ಇನ್ನು ಇವರಿಗೆ ಜೊತೆಯಾಗಿ ಇನ್ನಿಂಗ್ಸ್‌ ಆರಂಭಿಸಿದ್ದ ಪಿಲಿಪ್‌ ಸಾಲ್ಟ್‌ 14 ಎಸೆತ ಎದುರಿಸಿ 7 ಬೌಂಡರಿ, 3ಸಿಕ್ಸರ್‌ ಸಹಿತ 48 ರನ್‌ ಬಾರಿಸಿ ನಿರ್ಗಮಿಸಿದರು. ನಂತರ ಬಂದ ರಘುವಂಶಿ 3, ವೆಂಕಟೇಶ್‌ ಅಯ್ಯರ್‌ 16ರನ್‌ ಗಳಿಸಿ ಔಟಾದರು.

ಒಂದೆಡೆ ಭದ್ರವಾಗಿ ನಿಂತು ಇನ್ನಿಂಗ್ಸ್‌ ಕಟ್ಟಿದ ನಾಯಕ ಶ್ರೇಯಸ್‌ ಅಯ್ಯರ್‌ 36 ಎಸೆತಗಳಲ್ಲಿ 7ಬೌಂಡರಿ ಹಾಗೂ 1ಸಿಕ್ಸರ್‌ ಸಹಿತ 50ರನ್‌ ಗಳಿಸಿ ತಂಡಕ್ಕೆ ಆಸರೆಯಾದರು. ಉಳಿದಂತೆ ರಿಂಕು ಸಿಂಗ್‌ 24, ರಸೆಲ್‌ 27 ಹಾಗೂ ರಮಣ್‌ದೀಪ್‌ ಸಿಂಗ್‌ 24 ರನ್‌ ಗಳಿಸಿ ತಂಡದ ಮೊತ್ತ 200 ಗಡಿ ದಾಟಲು ಸಹಕರಿಸಿದರು.

ಆರ್‌ಸಿಬಿ ಪರ ಕ್ಯಾಮರೋನ್‌ ಗ್ರೀನ್‌, ಯಶ್‌ ದಯಾಳ್‌ ತಲಾ ಎರಡೆರೆಡು ವಿಕೆಟ್‌ ಪಡೆದರು. ಸಿರಾಜ್‌ ಹಾಗೂ ಫರ್ಗೂಸನ್‌ ಒಂದೊಂದು ವಿಕೆಟ್‌ ಪಡೆದರು.

ಆರ್‌ಸಿಬಿ ಇನ್ನಿಂಗ್ಸ್‌: ಇನ್ನು ಈ ಬೃಹತ್‌ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ನಾಯಕ ಫಾಫ್‌ ಕೇವಲ 7 ಹಾಗೂ ವಿರಾಟ್‌ 18 ರನ್‌ ಕಲೆಹಾಕಿ ಬೇಗನೇ ವಿಕೆಟ್‌ ಒಪ್ಪಿಸಿ ಹೊರ ನಡೆದರು. ನಂತರ ಜತೆಯಾದ ವಿಲ್‌ ಜಾಕ್‌ ಹಾಗೂ ರಜತ್‌ ಪಟಿದರ್‌ ಕೆಕೆಆರ್‌ ಬೌಲರ್‌ಗಳನ್ನು ಕಾಡಿದರು. ವಿಲ್‌ ಜಾಕ್‌ 55(32) ಪಟಿದರ್‌ 52(23) ರನ್‌ ಬಾರಿಸಿ ನಿರ್ಗಮಿಸಿದರು.

ಈ ಇಬ್ಬರ ನಂತರ ಬಂದ ಬೇರಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ. ಕ್ಯಾಮರೋನ್‌ ಗ್ರೀನ್‌ 6, ಪ್ರಭುದೇಸಾಯ್‌ 24, ಲೋಮರೋರ್‌ 4, ದಿನೇಶ್‌ ಕಾರ್ತಿಕ್‌ 25, ಕೊನೆಯ ಓವರ್‌ನಲ್ಲಿ 21 ಬೇಕಿದ್ದಾಗ ಮಿಚೆಲ್‌ ಸ್ಟಾರ್ಕ್‌ಗೆ ಮೂರು ಸಿಕ್ಸರ್‌ ಬಾರಿಸಿದ ಕರಣ್‌ ಶರ್ಮಾ 20 ರನ್‌ ಗಳಿಸಿ ಹೋರಾಟ ತೋರಿದರು ಗೆಲ್ಲಲು ಆಗಲಿಲ್ಲ. ಅಂತಿಮವಾಗಿ ಕೆಕೆಆರ್‌ ಕೇವಲ 1 ರನ್‌ ಗಳಿಂದ ಆರ್‌ಸಿಬಿ ವಿರುದ್ಧ ಗೆದ್ದು ಬೀಗಿತು.

ಕೆಕೆಆರ್‌ ಪರ ರಸೆಲ್‌ 3 ವಿಕೆಟ್‌, ನರೈನ್‌ ಹಾಗೂ ಹರ್ಷಿತ್‌ ರಾಣಾ ತಲಾ 2 ವಿಕೆಟ್‌, ಸ್ಟಾರ್ಕ್‌ ಮತ್ತು ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

49 mins ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

1 hour ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

1 hour ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

2 hours ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

2 hours ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

2 hours ago