ಕೊಲ್ಕತ್ತಾ: ಕೊಲ್ಕತ್ತಾ ನೈಟ್‌ರೈಡರ್ಸ್ ತಂಡದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ಮಂಕಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1ರನ್ ಗಳ ಹೀನಾಯ ಸೋಲು ಕಂಡಿದೆ. ಇದು ಆರ್‌ಸಿಬಿಗೆ ಟೂರ್ನಿಯಲ್ಲಿ 6ನೇ ಸೋಲಾಗಿದ್ದು, ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗದ್ದರೂ ಸಹಾ ಆರ್‌ಸಿಬಿ ಈ ಸೀಸನ್‌ನಿಂದ ಬಹುತೇಕ ಹೊರಬಿದ್ದಂತೆ ಆಗಿದೆ.
ಇಲ್ಲಿನ ಈಡೆನ್ ಗಾರ್ಡನ್ ಮೈದಾನದಲ್ಲಿ ನಡೆದ ಐಪಿಎಲ್ ಸೀಸನ್ 17ರ ಆವೃತ್ತಿಯ ಲೀಗ್ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೆಕೆಆರ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 222ರನ್ ಕಲೆಹಾಕಿ 223 ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ ಆಲ್‌ಔಟ್ ಆಗುವ ಮೂಲಕ 221 ರನ್ ಗಳಿಸಿತು.
ಕೆಕೆಆರ್ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡಕ್ಕೆ ಆರಂಭಿಕ ಆಘಾತ ಉಂಟಾಯಿತು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ನರೈನ್ ಕೇವಲ 10ರನ್ ಗಳಿಗೆ ಸುಸ್ತಾದರು. ಇನ್ನು ಇವರಿಗೆ ಜೊತೆಯಾಗಿ ಇನ್ನಿಂಗ್ಸ್ ಆರಂಭಿಸಿದ್ದ ಪಿಲಿಪ್ ಸಾಲ್ಟ್ 14 ಎಸೆತ ಎದುರಿಸಿ 7 ಬೌಂಡರಿ, 3ಸಿಕ್ಸರ್ ಸಹಿತ 48 ರನ್ ಬಾರಿಸಿ ನಿರ್ಗಮಿಸಿದರು. ನಂತರ ಬಂದ ರಘುವಂಶಿ 3, ವೆಂಕಟೇಶ್ ಅಯ್ಯರ್ 16ರನ್ ಗಳಿಸಿ ಔಟಾದರು.
ಒಂದೆಡೆ ಭದ್ರವಾಗಿ ನಿಂತು ಇನ್ನಿಂಗ್ಸ್ ಕಟ್ಟಿದ ನಾಯಕ ಶ್ರೇಯಸ್ ಅಯ್ಯರ್ 36 ಎಸೆತಗಳಲ್ಲಿ 7ಬೌಂಡರಿ ಹಾಗೂ 1ಸಿಕ್ಸರ್ ಸಹಿತ 50ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಉಳಿದಂತೆ ರಿಂಕು ಸಿಂಗ್ 24, ರಸೆಲ್ 27 ಹಾಗೂ ರಮಣ್‌ದೀಪ್ ಸಿಂಗ್ 24 ರನ್ ಗಳಿಸಿ ತಂಡದ ಮೊತ್ತ 200 ಗಡಿ ದಾಟಲು ಸಹಕರಿಸಿದರು.
ಆರ್‌ಸಿಬಿ ಪರ ಕ್ಯಾಮರೋನ್ ಗ್ರೀನ್, ಯಶ್ ದಯಾಳ್ ತಲಾ ಎರಡೆರೆಡು ವಿಕೆಟ್ ಪಡೆದರು. ಸಿರಾಜ್ ಹಾಗೂ ಫರ್ಗೂಸನ್ ಒಂದೊಂದು ವಿಕೆಟ್ ಪಡೆದರು.
ಆರ್‌ಸಿಬಿ ಇನ್ನಿಂಗ್ಸ್: ಇನ್ನು ಈ ಬೃಹತ್ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ನಾಯಕ ಫಾಫ್ ಕೇವಲ 7 ಹಾಗೂ ವಿರಾಟ್ 18 ರನ್ ಕಲೆಹಾಕಿ ಬೇಗನೇ ವಿಕೆಟ್ ಒಪ್ಪಿಸಿ ಹೊರ ನಡೆದರು. ನಂತರ ಜತೆಯಾದ ವಿಲ್ ಜಾಕ್ ಹಾಗೂ ರಜತ್ ಪಟಿದರ್ ಕೆಕೆಆರ್ ಬೌಲರ್‌ಗಳನ್ನು ಕಾಡಿದರು. ವಿಲ್ ಜಾಕ್ 55(32) ಪಟಿದರ್ 52(23) ರನ್ ಬಾರಿಸಿ ನಿರ್ಗಮಿಸಿದರು.
ಈ ಇಬ್ಬರ ನಂತರ ಬಂದ ಬೇರಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ. ಕ್ಯಾಮರೋನ್ ಗ್ರೀನ್ 6, ಪ್ರಭುದೇಸಾಯ್ 24, ಲೋಮರೋರ್ 4, ದಿನೇಶ್ ಕಾರ್ತಿಕ್ 25, ಕೊನೆಯ ಓವರ್‌ನಲ್ಲಿ 21 ಬೇಕಿದ್ದಾಗ ಮಿಚೆಲ್ ಸ್ಟಾರ್ಕ್‌ಗೆ ಮೂರು ಸಿಕ್ಸರ್ ಬಾರಿಸಿದ ಕರಣ್ ಶರ್ಮಾ 20 ರನ್ ಗಳಿಸಿ ಹೋರಾಟ ತೋರಿದರು ಗೆಲ್ಲಲು ಆಗಲಿಲ್ಲ. ಅಂತಿಮವಾಗಿ ಕೆಕೆಆರ್ ಕೇವಲ 1 ರನ್ ಗಳಿಂದ ಆರ್‌ಸಿಬಿ ವಿರುದ್ಧ ಗೆದ್ದು ಬೀಗಿತು.
ಕೆಕೆಆರ್ ಪರ ರಸೆಲ್ 3 ವಿಕೆಟ್, ನರೈನ್ ಹಾಗೂ ಹರ್ಷಿತ್ ರಾಣಾ ತಲಾ 2 ವಿಕೆಟ್, ಸ್ಟಾರ್ಕ್ ಮತ್ತು ವರುಣ್ ಚಕ್ರವರ್ತಿ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…