ಗುವಾಹಟಿ: ಇಲ್ಲಿನ ಬಾರ್ಸಪರ ಕ್ರಿಡಾಂಗಣದಲ್ಲಿಂದು ನಡೆಯಬೇಕಿದ್ದ ಕೊಲ್ಕತ್ತಾ ನೈಟ್‌ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.
ಈ ಸೀಸನ್‌ನ ಎಲ್ಲಾ 70 ಪಂದ್ಯಗಳು ಇದರೊಂದಿಗೆ ಮುಕ್ತಾಯಗೊಂಡಿದೆ. ಇನ್ನು ಪಾಯಿಂಟ್ಸ್ ಟೇಬಲ್‌ನಲ್ಲಿ ಮೊದಲ ಸ್ಥಾನದಲ್ಲಿ ಕೆಕೆಆರ್ ಇದ್ದರೇ, ಎರಡರಲ್ಲಿ ಎಸ್‌ಆರ್‌ಎಚ್, ಮೂರು ಮತ್ತು ನಾಲ್ಕನೇ ಸ್ಥಾನಗಳಲ್ಲಿ ಕ್ರಮವಾಗಿ ಆರ್‌ಆರ್ ಹಾಗೂ ಅರ್‌ಸಿಬಿ ತಂಡಗಳು ಸ್ಥಾನ ಪಡೆದಿವೆ.
ಮೇ.21ರಂದು ಮೊದಲ ಕ್ವಾಲಿಫೈಯರ್ ಪಂದ್ಯ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಅಹ್ಮದಾಬಾದ್‌ನಲ್ಲಿ ನಡೆಲಿದೆ. ಮೇ.22 ರಂದು ಎಲಿಮಿನೇಟರ್ ಪಂದ್ಯದಲ್ಲಿ ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಸವಾಲೊಡ್ಡಲಿದೆ.
ಈ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡದೊಂದಿಗೆ ಮೇ.24 ರಂದು ಎರಡನೇ ಕ್ವಾಲಿಫೈಯರ್ ಪಂದ್ಯ ಆಡಲಿದೆ.
ಮೊದಲ ಕ್ವಾಲಿಫೈ ಮತ್ತು ಎರಡನೇ ಕ್ವಾಲಿಫೈನಲ್ಲಿ ಗೆದ್ದ ತಂಡಗಳು ಮೇ.26 ರಂದು ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ಆಡಲಿದೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…