ವಿಶಾಖಪಟ್ಟಣಂ: ಇಲ್ಲಿನ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ 16ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 106 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 272 ರನ್ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲ್ಲಲು 273 ರನ್‌ಗಳ ಗುರಿಯನ್ನು ನೀಡಿತ್ತು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತಿಹೆಚ್ಚು ರನ್ ದಾಖಲಿಸಿದ ತಂಡಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು. ಕೆಕೆಆರ್ ನೀಡಿದ ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್ ತಂಡ 17.2 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲ್‌ಔಟ್ ಆಯಿತು.
ಕೊಲ್ಕತ್ತಾ ನೈಟ್ ರೈಡರ್ಸ್: ತಂಡದ ಪರ ಆರಂಭಿಕರಾಗಿ ಫಿಲಿಪ್ ಸಾಲ್ಟ್ ಹಾಗೂ ಸುನಿಲ್ ನರೈನ್ ಕಣಕ್ಕಿಳಿದರು. ಸಾಲ್ಟ್ 18 (12) ರನ್ ಗಳಿಸಿ ಔಟ್ ಆದರೆ, ಸಿಡಿಲಬ್ಬರದ ಇನ್ನಿಂಗ್ಸ್ ಕಟ್ಟಿದ ಸುನಿಲ್ ನರೈನ್ 39 ಎಸೆತಗಳಲ್ಲಿ 7 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 89 ರನ್ ಚಚ್ಚಿದರು. ಸುನಿಲ್ ನರೈನ್ ಜತೆ ಕೈಜೋಡಿಸಿ ತಂಡ ಬೃಹತ್ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಅಂಗ್‌ಕ್ರಿಷ್ ರಘುವಂಶಿ 53 (27) ರನ್ ಬಾರಿಸಿದರು. ಇನ್ನುಳಿದಂತೆ ಆಂಡ್ರೆ ರಸೆಲ್ ಅಬ್ಬರದ 41 (19) ರನ್, ನಾಯಕ ಶ್ರೇಯಸ್ ಐಯ್ಯರ್ 18 (11) ರನ್, ರಿಂಕು ಸಿಂಗ್ 26 (8) ರನ್, ರಮಣ್‌ದೀಪ್ ಸಿಂಗ್ 2(2) ರನ್, ವೆಂಕಟೇಶ್ ಐಯ್ಯರ್ ಅಜೇಯ 5(2) ರನ್ ಹಾಗೂ ಮಿಚೆಲ್ ಸ್ಟಾರ್ಕ್ ಅಜೇಯ 1 (1) ರನ್ ಕಲೆಹಾಕಿದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಅನ್ರಿಚ್ ನಾರ್ಕಿಯಾ 3 ವಿಕೆಟ್, ಇಶಾಂತ್ ಶರ್ಮಾ 2 ವಿಕೆಟ್, ಖಲೀಲ್ ಅಹ್ಮದ್ ಹಾಗೂ ಮಿಚೆಲ್ ಮಾರ್ಚ್ ತಲಾ ಒಂದೊಂದು ವಿಕೆಟ್ ಪಡೆದರು.
ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್: ತಂಡದ ಪರ ಡೇವಿಡ್ ವಾರ್ನರ್ ಹಾಗೂ ಪೃಥ್ವಿ ಶಾ ಆರಂಭಿಕರಾಗಿ ಕಣಕ್ಕಿಳಿದರು. ವಾರ್ನರ್ 18 (13) ರನ್ ಗಳಿಸಿದರೆ, ಪೃಥ್ವಿ ಶಾ 10 (7) ರನ್ ಗಳಿಸಿದರು. ಇನ್ನುಳಿದಂತೆ ಮಿಚೆಲ್ ಮಾರ್ಷ್ ಹಾಗೂ ಅಭಿಷೇಕ್ ಪೊರೆಲ್ ಡಕ್‌ಔಟ್ ಆದರು. ಹೀಗೆ ಕೇವಲ 33 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡ ತಂಡಕ್ಕೆ ರಿಷಭ್ ಪಂತ್ ಹಾಗೂ ಟ್ರಿಸ್ಟನ್ ಸ್ಟಬ್ಸ್ 93 ರನ್ ಜತೆಯಾಟವಾಡುವ ಮೂಲಕ ಆಸರೆಯಾದರು. ಪಂತ್ 55 (25) ರನ್ ಮತ್ತು ಟ್ರಿಸ್ಟನ್ ಸ್ಟಬ್ಸ್ 54 (32) ರನ್ ಬಾರಿಸಿದರು. ಅಕ್ಷರ್ ಪಟೇಲ್ ಡಕ್ ಔಟ್ ಆದರೆ, ಸುಮಿತ್ ಕುಮಾರ್ 7 (6) ರನ್, ರಸಿಕ್ ಡರ್ ಸಲಾಮ್ 1 (5) ರನ್, ಅನ್ರಿಚ್ ನಾರ್ಕಿಯಾ 4 (6) ರನ್ ಹಾಗೂ ಇಶಾಂತ್ ಶರ್ಮಾ ಅಜೇಯ 1 ರನ್ ಕಲೆಹಾಕಿದರು.
ಕೊಲ್ಕತ್ತಾ ನೈಟ್ ರೈಡರ್ಸ್ ಪರ ವರುಣ್ ಚಕ್ರವರ್ತಿ ಹಾಗೂ ವೈಭವ್ ಅರೋರಾ ತಲಾ 3 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ 2 ವಿಕೆಟ್, ಆಂಡ್ರೆ ರಸೆಲ್ ಹಾಗೂ ಸುನಿಲ್ ನರೈನ್ ತಲಾ ಒಂದೊಂದು ವಿಕೆಟ್ ಪಡೆದರು.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…