ಕ್ರೀಡೆ

IPL 2024: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಕೆಕೆಆರ್‌ಗೆ ಭರ್ಜರಿ ಜಯ

ವಿಶಾಖಪಟ್ಟಣಂ: ಇಲ್ಲಿನ ವೈಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ 16ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 106 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಕೊಲ್ಕತ್ತಾ ನೈಟ್‌ ರೈಡರ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 272 ರನ್‌ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲ್ಲಲು 273 ರನ್‌ಗಳ ಗುರಿಯನ್ನು ನೀಡಿತ್ತು. ಈ ಮೂಲಕ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಅತಿಹೆಚ್ಚು ರನ್‌ ದಾಖಲಿಸಿದ ತಂಡಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು. ಕೆಕೆಆರ್‌ ನೀಡಿದ ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 17.2 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಕೊಲ್ಕತ್ತಾ ನೈಟ್‌ ರೈಡರ್ಸ್‌: ತಂಡದ ಪರ ಆರಂಭಿಕರಾಗಿ ಫಿಲಿಪ್‌ ಸಾಲ್ಟ್‌ ಹಾಗೂ ಸುನಿಲ್‌ ನರೈನ್‌ ಕಣಕ್ಕಿಳಿದರು. ಸಾಲ್ಟ್‌ 18 (12) ರನ್‌ ಗಳಿಸಿ ಔಟ್‌ ಆದರೆ, ಸಿಡಿಲಬ್ಬರದ ಇನ್ನಿಂಗ್ಸ್‌ ಕಟ್ಟಿದ ಸುನಿಲ್‌ ನರೈನ್‌ 39 ಎಸೆತಗಳಲ್ಲಿ 7 ಬೌಂಡರಿ ಹಾಗೂ 7 ಸಿಕ್ಸರ್‌ ಸಹಿತ 89 ರನ್‌ ಚಚ್ಚಿದರು. ಸುನಿಲ್‌ ನರೈನ್‌ ಜತೆ ಕೈಜೋಡಿಸಿ ತಂಡ ಬೃಹತ್‌ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಅಂಗ್‌ಕ್ರಿಷ್‌ ರಘುವಂಶಿ 53 (27) ರನ್‌ ಬಾರಿಸಿದರು. ಇನ್ನುಳಿದಂತೆ ಆಂಡ್ರೆ ರಸೆಲ್‌ ಅಬ್ಬರದ 41 (19) ರನ್‌, ನಾಯಕ ಶ್ರೇಯಸ್‌ ಐಯ್ಯರ್‌ 18 (11) ರನ್‌, ರಿಂಕು ಸಿಂಗ್‌ 26 (8) ರನ್‌, ರಮಣ್‌ದೀಪ್‌ ಸಿಂಗ್‌ 2(2) ರನ್‌, ವೆಂಕಟೇಶ್‌ ಐಯ್ಯರ್‌ ಅಜೇಯ 5(2) ರನ್‌ ಹಾಗೂ ಮಿಚೆಲ್‌ ಸ್ಟಾರ್ಕ್‌ ಅಜೇಯ 1 (1) ರನ್‌ ಕಲೆಹಾಕಿದರು.

ಡೆಲ್ಲಿ ಕ್ಯಾಪಿಟಲ್ಸ್‌ ಪರ ಅನ್ರಿಚ್‌ ನಾರ್ಕಿಯಾ 3 ವಿಕೆಟ್‌, ಇಶಾಂತ್‌ ಶರ್ಮಾ 2 ವಿಕೆಟ್‌, ಖಲೀಲ್‌ ಅಹ್ಮದ್‌ ಹಾಗೂ ಮಿಚೆಲ್‌ ಮಾರ್ಚ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್‌ ಇನ್ನಿಂಗ್ಸ್: ತಂಡದ ಪರ ಡೇವಿಡ್‌ ವಾರ್ನರ್‌ ಹಾಗೂ ಪೃಥ್ವಿ ಶಾ ಆರಂಭಿಕರಾಗಿ ಕಣಕ್ಕಿಳಿದರು. ವಾರ್ನರ್‌ 18 (13) ರನ್‌ ಗಳಿಸಿದರೆ, ಪೃಥ್ವಿ ಶಾ 10 (7) ರನ್‌ ಗಳಿಸಿದರು. ಇನ್ನುಳಿದಂತೆ ಮಿಚೆಲ್‌ ಮಾರ್ಷ್‌ ಹಾಗೂ ಅಭಿಷೇಕ್‌ ಪೊರೆಲ್‌ ಡಕ್‌ಔಟ್‌ ಆದರು. ಹೀಗೆ ಕೇವಲ 33 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡ ತಂಡಕ್ಕೆ ರಿಷಭ್ ಪಂತ್ ಹಾಗೂ ಟ್ರಿಸ್ಟನ್ ಸ್ಟಬ್ಸ್ 93 ರನ್ ಜತೆಯಾಟವಾಡುವ ಮೂಲಕ ಆಸರೆಯಾದರು‌. ಪಂತ್ 55 (25) ರನ್ ಮತ್ತು ಟ್ರಿಸ್ಟನ್ ಸ್ಟಬ್ಸ್ 54 (32) ರನ್ ಬಾರಿಸಿದರು. ಅಕ್ಷರ್ ಪಟೇಲ್ ಡಕ್ ಔಟ್ ಆದರೆ, ಸುಮಿತ್ ಕುಮಾರ್ 7 (6) ರನ್, ರಸಿಕ್‌ ಡರ್‌ ಸಲಾಮ್‌ 1 (5) ರನ್‌, ಅನ್ರಿಚ್‌ ನಾರ್ಕಿಯಾ 4 (6) ರನ್‌ ಹಾಗೂ ಇಶಾಂತ್‌ ಶರ್ಮಾ ಅಜೇಯ 1 ರನ್‌ ಕಲೆಹಾಕಿದರು.

ಕೊಲ್ಕತ್ತಾ ನೈಟ್‌ ರೈಡರ್ಸ್‌ ಪರ ವರುಣ್‌ ಚಕ್ರವರ್ತಿ ಹಾಗೂ ವೈಭವ್‌ ಅರೋರಾ ತಲಾ 3 ವಿಕೆಟ್‌ ಪಡೆದರೆ, ಮಿಚೆಲ್‌ ಸ್ಟಾರ್ಕ್‌ 2 ವಿಕೆಟ್‌, ಆಂಡ್ರೆ ರಸೆಲ್‌ ಹಾಗೂ ಸುನಿಲ್‌ ನರೈನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

1 hour ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

1 hour ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

1 hour ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

1 hour ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

2 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

2 hours ago