ಚೆನ್ನೈ: ಆಸ್ಟ್ರೇಲಿಯನ್ ಸ್ಟಾರ್ ಆಲ್‌ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಅವರ ಶತಕದ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡವು 6 ವಿಕೆಟ್‌ಗಳ ಅಂತರದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದೆ.
ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಸಿಎಸ್‌ಕೆ ಮತ್ತು ಎಲ್‌ಎಸ್‌ಜಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಚೆನ್ನೈ, ನಾಯಕ ಋತುರಾಜ್ ಅವರ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 210ರನ್ ಕಲೆಹಾಕಿ, ಎಲ್‌ಎಸ್‌ಜಿಗೆ 211ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿತ್ತು. ಈ ಮೊತ್ತವನ್ನು ಚೇಸ್ ಮಾಡಿದ ಲಖನೌ 19.3 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 213 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಸಿಎಸ್‌ಕೆ ಇನ್ನಿಂಗ್ಸ್: ತವರಿನಂಗಳದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸಿಎಸ್‌ಕೆ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಈ ಸೀಸನ್‌ನಲ್ಲಿ ತೀರಾ ಕಳಪೆ ಫಾರ್ಮ್‌ನಲ್ಲಿರುವ ರಹಾನೆ ಈ ಪಂದ್ಯದಲ್ಲಿಯೂ ನಿರೀಕ್ಷಿತ ಆಟ ಆಡಲಿಲ್ಲ. ಕೇವಲ ಒಂದು ರನ್‌ಗಳಿಸಿ ಹೆನ್ರಿಗೆ ವಿಕೆಟ್ ಒಪ್ಪಿಸಿ ಹೊರ ನಡೆದರು. ಬಳಿಕ ಬಂದ ಮಿಚೆಲ್ 11ಕ್ಕೆ ಸುಸ್ತಾದರು. ಜಡೇಜಾ 16 ರನ್ ಬಾರಿಸಿ ಪೆವಿಲಿಯನ್ ಸೇರಿದರು.
ಒಂದೆಡೆ ವಿಕೆಟ್ ಬೀಳುತ್ತಿದ್ದರು, ಮತ್ತೊಂದು ಕಡೆ ಜವಾಬ್ದಾರಿಯಿಂದ ಬ್ಯಾಟ್ ಬೀಸಿದ ನಾಯಕ ಋತುರಾಜ್ ಗಾಯಕ್ವಾಡ್ ಶತಕ ಬಾರಿಸಿ ತಂಡಕ್ಕೆ ಆಸರೆಯಾದರು. ಇಪ್ಪತ್ತು ಓವರ್‌ಗಳನ್ನು ಆಡಿದ ಅವರು ಔಟಾಗದೇ 60 ಎಸೆತಗಳಲ್ಲಿ 12 ಬೌಂಡರಿ ಹಾಗೂ 3ಸಿಕ್ಸರ್ ಸಹಿತ 108 ರನ್ ಬಾರಿಸಿದರು. ಶಿವಂ ದುಬೆ 66 (27ಎ, 3*4 7*6) ರನ್ ಕೆಲಹಾಕಿ ನಾಯಕನಿಗೆ ಸಾಥ್ ನೀಡಿದರು. ಉಳಿದಂತೆ ಧೋನಿ 4(1) ರನ್ ಬಾರಿಸಿದರು.
ಲಖನೌ ಪರ ಹೆನ್ರಿ, ಯಶ್ ಠಾಕೂರ್ ಹಾಗೂ ಮೌಸಿನ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಎಲ್‌ಎಸ್‌ಜಿ ಇನ್ನಿಂಗ್ಸ್: ಸಿಎಸ್‌ಕೆ ನೀಡಿದ ಬೃಹತ್ ಮೊತ್ತ ಬೆನ್ನತ್ತಿದ ಎಲ್‌ಎಸ್‌ಜಿ ಆರಂಭದಲ್ಲಿ ಉತ್ತಮ ಇನ್ನಿಂಗ್ಸ್ ಕಟ್ಟುವಲ್ಲಿ ವಿಫಲವಾಯಿತು. ಡಿ ಕಾಕ್ ಶೂನ್ಯ ಸಂಪಾದಿಸಿ ಹೊರ ನಡೆದರು. ನಾಯಕ ಕೆ.ಎಲ್ ರಾಹುಲ್ 16 ರನ್ ಬಾರಿಸಿ ಹೊರ ನಡೆದರು. ಉಳಿದಂತೆ ಕನ್ನಡಿಗ ಪಡಿಕ್ಕಲ್ 13, ನಿಕೋಲಸ್ ಪೂರನ್ 34 ರನ್ ಬಾರಿಸಿ ಬೇಗನೇ ನಿರ್ಗಮಿಸಿದರು.
ನಿಧಾನಗತಿಯಿಂದಲೇ ಇನ್ನಿಂಗ್ಸ್ ಕಟ್ಟಿದ ಆಲ್‌ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಚೆನ್ನೈ ಬೌಲರ್ಸ್‌ಗಳ ಬೆವರಿಳಿಸಿದರು. ಚೆಪಾಕ್ ಮೂಲ ಮೂಲೆಗೂ ಸಿಕ್ಸರ್, ಫೊರ್ಸ್ ಚಚ್ಚಿದ ಸ್ಟೋಯ್ನಿಸ್ ಐಪಿಎಲ್‌ನಲ್ಲಿ ತಮ್ಮ ಚೊಚ್ಚಲ ಶತಕ ದಾಖಲಿಸಿದರು. ಅವರು ಔಟಾಗದೇ 63 ಎಸೆತಗಳಲ್ಲಿ 13 ಬೌಂಡರಿ ಮತ್ತು 6 ಸಿಕ್ಸರ್ ಸಹಿತ 124 ರನ್ ಬಾರಿಸಿದರು. ದೀಪಕ್ ಹೂಡಾ 17* ರನ್ ಬಾರಿಸಿ ತಂಡದ ಗೆಲುವಿಗೆ ಸಹಕರಿಸಿದರು.
ಸಿಎಸ್‌ಕೆ ಪರ ಪತಿರಣ 2, ಮುಸ್ತಫಿಜುರ್ ಹಾಗೂ ದೀಪಕ್ ಚಾಹರ್ ತಲಾ ಒಂದೊಂದು ವಿಕೆಟ್ ಪಡೆದರು.
ಪಂದ್ಯ ಶ್ರೇಷ್ಠ: ಮಾರ್ಕಸ್ ಸ್ಟೋಯ್ನಿಸ್
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…