ಮುಂಬೈ: ರೋಹಿತ್ ಶರ್ಮಾ, ಟಿಮ್ ಡೆವಿಡ್ ಹಾಗೂ ಶೆಫರ್ಡ್ ಅವರ ಭರ್ಜರಿ ಬ್ಯಾಟಿಂಗ್ ಸಹಾಯದಿಂದ ಐಪಿಎಲ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 29 ರನ್‌ಗಳ ಅಂತರದ ಗೆಲುವು ದಾಖಲಿಸಿದೆ.
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಣ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 234 ರನ್ ಪೇರಿಸಿತು. ಈ ಬೃಹತ್ ಮೊತ್ತ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 205 ರನ್ ಗಳಿಸಿ ಸೋಲೊಪ್ಪಿಕೊಂಡಿತು.
ಎಂಐ ಇನ್ನಿಂಗ್ಸ್: ಪರ ಆರಂಭಿಕರಾಗಿ ಬಂದ ರೋಹಿತ್ (49) ಮತ್ತು ಇಶಾನ್ ಕಿಶನ್ (42) ಭರ್ಜರಿ ಆರಂಭ ಒದಗಿಸಿ ಔಟಾದರು. ಬಳಿಕ ಬಂದ ನಾಯಕ ಹಾರ್ದಿಕ್ ಪಾಂಡ್ಯ (39), ಟಿಮ್ ಡೇವಿಡ್ (45) ರನ್ ಹೊಡೆದು ಗಮನ ಸೆಳೆದರು.
ಕೊನೆಯಲ್ಲಿ ಅಬ್ಬರಿಸಿದ ರೊಮಾರಿಯೋ ಶೇಫರ್ಡ್ ಕೇವಲ 10 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ ಸಹಿತ 39 ರನ್ ಬಾರಿಸಿದರು. ಕೊನೆಯ ಓವರ್(20 ಓವರ್) ಬೌಲ್ ಮಾಡಲು ಬಂದ ನೋಕಿಯಾಗೆ 4 ಸಿಕ್ಸರ್ 2 ಬೌಂಡರಿ ಸಹಿತ 32 ರನ್ ಚಚ್ಚಿದರು.
ಡೆಲ್ಲಿ ಪರ ಅಕ್ಷರ್ ಪಟೇಲ್ ಮತ್ತು ನೋಕಿಯಾ 2, ಖಲೀಲ್ ಅಹ್ಮದ್ ಒಂದು ವಿಕೆಟ್ ಕಬಳಿಸಿದರು.
ಡಿಸಿ ಇನ್ನಿಂಗ್ಸ್: ಈ ಬೃಹತ್ ಮೊತ್ತ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ಗೆ ಆರಂಭಿಕ ಆಘಾತ ಉಂಟಾಯಿತು. ವಾರ್ನರ್ 10 ರನ್ ಗಳಿಸಿ ಔಟಾದರು. ಪೃಥ್ವಿ ಶಾ ಹಾಗೂ ಪೋರೆಲ್ ಜೊತೆಗೂಡಿ 88 ರನ್‌ಗಳ ಜೊತೆಯಾಟ ನೀಡಿದರು ಈ ಇಬ್ಬರು ಕ್ರಮವಾಗಿ (66) ಮತ್ತು (41) ಗಳಿಸಿ ನಿರ್ಗಮಸಿದರು. ನಾಯಕ ಪಂಥ್ ಕೇವಲ ಒಂದು ರನ್ ಗಳಿಸಿ ನಿರಾಸೆ ಮೂಡಿಸಿದರು. ಅಕ್ಷರ್ ಪಟೇಲ್ (8) ಲಲಿತ್ ಯಾದವ್ (3), ಕುಶಾಗ್ರ (0), ರಿಚರ್ಡ್‌ಸನ್ (2) ರನ್ ಗಳಿಸಿದರು.
ಒಂದೆಡೆ ವಿಕೆಟ್ ಬೀಳುತ್ತಿದ್ದರು ಮತ್ತೊಂದೆಡೆ ಭರ್ಜರಿಯಾಗಿ ಬ್ಯಾಟ್ ಬೀಸಿದ ಸ್ಟಬ್ಸ್ 25 ಎಸೆತಗಳಲ್ಲಿ 3ಬೌಂಡರಿ, 7 ಸಿಕ್ಸರ್ ಸಹಿತ 71 ರನ್ ಕೆಲಹಾಕಿ ದಿಟ್ಟ ಹೋರಾಟ ನೀಡಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.
ಮುಂಬೈ ಪರ ಕಾಟ್ಜಿ 4, ಬುಮ್ರಾ 2 ಹಾಗೂ ಶೇಫರ್ಡ್ 1 ವಿಕೆಟ್ ಪಡೆದು ಗಮನ ಸೆಳೆದರು.
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…