ಕ್ರೀಡೆ

IPL 2024: ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದ ಮುಂಬೈ

ಮುಂಬೈ: ರೋಹಿತ್‌ ಶರ್ಮಾ, ಟಿಮ್‌ ಡೆವಿಡ್‌ ಹಾಗೂ ಶೆಫರ್ಡ್‌ ಅವರ ಭರ್ಜರಿ ಬ್ಯಾಟಿಂಗ್‌ ಸಹಾಯದಿಂದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 29 ರನ್‌ಗಳ ಅಂತರದ ಗೆಲುವು ದಾಖಲಿಸಿದೆ.

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಣ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 234 ರನ್ ಪೇರಿಸಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 205 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

ಎಂಐ ಇನ್ನಿಂಗ್ಸ್‌: ಪರ ಆರಂಭಿಕರಾಗಿ ಬಂದ ರೋಹಿತ್ (49) ಮತ್ತು ಇಶಾನ್‌ ಕಿಶನ್ (42) ಭರ್ಜರಿ ಆರಂಭ ಒದಗಿಸಿ ಔಟಾದರು. ಬಳಿಕ ಬಂದ ನಾಯಕ ಹಾರ್ದಿಕ್‌ ಪಾಂಡ್ಯ (39), ಟಿಮ್‌ ಡೇವಿಡ್ (45) ರನ್‌ ಹೊಡೆದು ಗಮನ ಸೆಳೆದರು.

ಕೊನೆಯಲ್ಲಿ ಅಬ್ಬರಿಸಿದ ರೊಮಾರಿಯೋ ಶೇಫರ್ಡ್‌ ಕೇವಲ 10 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್‌ ಸಹಿತ 39 ರನ್‌ ಬಾರಿಸಿದರು. ಕೊನೆಯ ಓವರ್‌(20 ಓವರ್‌) ಬೌಲ್‌ ಮಾಡಲು ಬಂದ ನೋಕಿಯಾಗೆ 4 ಸಿಕ್ಸರ್‌ 2 ಬೌಂಡರಿ ಸಹಿತ 32 ರನ್‌ ಚಚ್ಚಿದರು.

ಡೆಲ್ಲಿ ಪರ ಅಕ್ಷರ್ ಪಟೇಲ್ ಮತ್ತು ನೋಕಿಯಾ 2, ಖಲೀಲ್‌ ಅಹ್ಮದ್‌ ಒಂದು ವಿಕೆಟ್ ಕಬಳಿಸಿದರು.

ಡಿಸಿ ಇನ್ನಿಂಗ್ಸ್‌: ಈ ಬೃಹತ್‌ ಮೊತ್ತ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ಗೆ ಆರಂಭಿಕ ಆಘಾತ ಉಂಟಾಯಿತು. ವಾರ್ನರ್‌ 10 ರನ್‌ ಗಳಿಸಿ ಔಟಾದರು. ಪೃಥ್ವಿ ಶಾ ಹಾಗೂ ಪೋರೆಲ್‌ ಜೊತೆಗೂಡಿ 88 ರನ್‌ಗಳ ಜೊತೆಯಾಟ ನೀಡಿದರು ಈ ಇಬ್ಬರು ಕ್ರಮವಾಗಿ (66) ಮತ್ತು (41) ಗಳಿಸಿ ನಿರ್ಗಮಸಿದರು. ನಾಯಕ ಪಂಥ್‌ ಕೇವಲ ಒಂದು ರನ್‌ ಗಳಿಸಿ ನಿರಾಸೆ ಮೂಡಿಸಿದರು. ಅಕ್ಷರ್‌ ಪಟೇಲ್‌ (8) ಲಲಿತ್‌ ಯಾದವ್‌ (3), ಕುಶಾಗ್ರ (0), ರಿಚರ್ಡ್‌ಸನ್‌ (2) ರನ್‌ ಗಳಿಸಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ಭರ್ಜರಿಯಾಗಿ ಬ್ಯಾಟ್‌ ಬೀಸಿದ ಸ್ಟಬ್ಸ್‌ 25 ಎಸೆತಗಳಲ್ಲಿ 3ಬೌಂಡರಿ, 7 ಸಿಕ್ಸರ್‌ ಸಹಿತ 71 ರನ್‌ ಕೆಲಹಾಕಿ ದಿಟ್ಟ ಹೋರಾಟ ನೀಡಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಮುಂಬೈ ಪರ ಕಾಟ್ಜಿ 4, ಬುಮ್ರಾ 2 ಹಾಗೂ ಶೇಫರ್ಡ್‌ 1 ವಿಕೆಟ್‌ ಪಡೆದು ಗಮನ ಸೆಳೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

7 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

11 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

11 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

11 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

11 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

11 hours ago