ಕ್ರೀಡೆ

IPL 2024: ರೋಚಕ ಹಣಾಹಣಿಯಲ್ಲಿ ಗೆದ್ದುಬೀಗಿದ ಡೆಲ್ಲಿ ಕ್ಯಾಪಿಟಲ್ಸ್‌

ನವದೆಹಲಿ: ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಸೀಸನ್‌ನ 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ, ಲಖನೌ ಸೂಪರ್‌ ಜೈಂಟ್ಸ್‌ ತಂಡದ ವಿರುದ್ಧ 19 ರನ್‌ಗಳ ಅಂತರದಿಂದ ಗೆದ್ದು ಬೀಗಿದೆ. ಈ ಪಂದ್ಯ ಸೋಲುವ ಮೂಲಕ ಲಖನೌ ಸೂಪರ್‌ ಜೈಂಟ್ಸ್‌ ತಂಡ ಭಾಗಶಃ ಟೂರ್ನಿಯಿಂದ ಹೊರ ಬಿದ್ದಂತೆಯೇ ಆಗಿದೆ.

ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 208 ರನ್‌ಗಳಿಸಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಲಖನೌ ಸೂಪರ್‌ ಜೈಂಟ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 189 ರನ್‌ ಗಳಿಸಿ, 19 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಡೆಲ್ಲಿ ಇನ್ನಿಂಗ್ಸ್‌: ಟೂರ್ನಿಯ ಕೊನೆಯ ಪಂದ್ಯ ಆಡುತ್ತಿರುವ ಡೆಲ್ಲಿ ತವರಿನಂಗಳದಲ್ಲಿ ಉತ್ತಮ ಪ್ರದರ್ಶನ ತೋರಿತು. ಆರಂಭಿಕ ಜೇಕ್ ಪ್ರೇಸರ್ ಮೆಕ್ ಗಾರ್ಕ್ ಶೂನ್ಯಕ್ಕೆ ಔಟಾದರು. ಬಳಿಕ ಜತೆಯಾದ ಅಭಿಷೇಕ್‌ ಪೋರೆಲ್‌ ಹಾಗೂ ಶಾಯ್‌ ಹೋಪ್‌ ತಂಡಕ್ಕೆ ಚೇತರಿಕೆ ನೀಡಿದರು. ಈ ಜೋಡಿ ತಂಡಕ್ಕೆ 90 ರನ್‌ಗಳ ಕೊಡುಗೆ ನೀಡಿತು. ಅಭಿಷೇಕ್‌ ಪೋರೆಲ್‌ 58(33), ಶಾಯ್‌ ಹೋಪ್‌ 38(27), ನಾಯಕ ಪಂತ್‌ 33(23) ರನ್‌ ಗಳಿಸಿದರು.

ಕೊನೆಯಲ್ಲಿ ಔಟಾಗದೇ ಅಬ್ಬರಿಸಿದ ಟ್ರಿಸ್ಟನ್‌ ಸ್ಟಬ್ಸ್‌ 25 ಎಸೆತ ಎದುರಿಸಿ 3ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 57ರನ್‌ ಬಾರಿಸಿದರು. ಇವರಿಗೆ ಅಕ್ಷರ್‌ ಪಟೇಲ್‌ 14(10) ರನ್‌ ಗಳಿಸಿ ಸಾಥ್‌ ನೀಡಿದರು.

ಲಖನೌ ಪರ ನವೀನ್‌ ಉಲ್‌-ಹಕ್‌ 2, ಹರ್ಷದ್‌ ಖಾನ್‌ ಹಾಗೂ ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್‌ ಪಡೆದರು.

ಲಖನೌ ಇನ್ನಿಂಗ್ಸ್‌: ಈ ಬೃಹತ್‌ ಮೊತ್ತ ಬೆನ್ನತ್ತಿದ ಲಖನೌ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಆರಂಭಿಕರಿಬ್ಬರು ಕೈಕೊಟ್ಟರು. ನಾಯಕ ಕೆ.ಎಲ್‌ ರಾಹುಲ್‌ 5(3), ಡಿಕಾಕ್‌ 12(8)ರನ್‌ ಗಳಿಸಿ ಬೇಗನೇ ನಿರ್ಗಮಿಸಿದರು. ನಿಕೋಲಸ್‌ ಪೂರನ್‌ ಆಟ ತಂಡಕ್ಕೆ ಚೇತರಿಕೆ ನೀಡಿತು. ನಿಕೊಲಸ್‌ ಪೂರನ್‌ 27ಎಸೆತಗಳಲ್ಲಿ 6ಬೌಂಡರಿ ಹಾಗೂ 4ಸಿಕ್ಸರ್‌ ಸಹಿತ 61ರನ್‌ ಗಳಿಸಿದರು.

ಉಳಿದಂತೆ ಸ್ಟೋಯ್ನಿಸ್‌ 5(7), ದೀಪಕ್‌ ಹೂಡಾ ಶೂನ್ಯ, ಆಯೂಷ್‌ ಬದೋನಿ 6(9), ಕೃನಾಲ್‌ ಪಾಂಡ್ಯ 18(18), ಯದುವೀರ್‌ ಸಿಂಗ್‌ 14(7), ರವಿ ಬಿಷ್ಣೋಯಿ 2(2) ರನ್‌ಗಳಿಸಿ ಮಧ್ಯಮ ಕ್ರಮಾಂಕದಲ್ಲಿ ತಂಡ ರನ್‌ ಗಳಿಸುವಲ್ಲಿ ಪರದಾಡಿತು.

ಔಟಾಗದೇ ಕೊನೆಯಲ್ಲಿ ಅಬ್ಬರಿಸಿದ ಅರ್ಷದ್‌ ಸಿಂಗ್‌ ಕೇವಲ 33ಎಸೆತಗಳನ್ನು ಎದುರಿಸಿ 3 ಬೌಂಡರಿ ಮತ್ತು 5 ಸಿಕ್ಸರ್‌ ಸಹಿತ 58 ರನ್‌ ಗಳಿಸಿ ಐಪಿಎಲ್‌ ಚೊಚ್ಚಲ ಅರ್ಧಶತಕ ದಾಖಲಿಸಿದರು. ಆಗಿದ್ದರೂ ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ಇವರಿಗೆ ಜತೆಯಾಗಿ ನವೀನ್‌ ಉಲ್‌-ಹಕ್‌ 2(4) ರನ್‌ ಗಳಿಸಿದರು.

ಡೆಲ್ಲಿ ಪರ ಇಶಾಂತ್‌ ಶರ್ಮಾ 3, ಖಲೀಲ್‌ ಅಹ್ಮದ್‌, ಅಕ್ಷರ್‌ ಪಟೇಲ್‌, ಮುಖೇಶ್‌ ಕುಮಾರ್‌, ಕುಲ್ದೀಪ್‌ ಯಾದವ್‌ ಹಾಗೂ ಸ್ಟಬ್ಸ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

11 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

12 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

12 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

13 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

13 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

17 hours ago