ಜೈಪುರ: ಇಲ್ಲಿನ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 9ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 12 ರನ್‌ಗಳ ಗೆಲುವು ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ರಿಯಾನ್ ಪರಾಗ್ ಅಬ್ಬರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಕಲೆಹಾಕಿ ಡೆಲ್ಲಿ ಕ್ಯಾಪಿಟಲ್ಸ್‌ಗೆ 186 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 173 ರನ್ ದಾಖಲಿಸಿತು.
ಕೊ
ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್: ತಂಡ 36 ರನ್‌ಗಳಿಗೆ ತನ್ನ ಮೊದಲ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಆರಂಭಿಕರಾದ ಯಶಸ್ವಿ ಜೈಸ್ವಾಲ್ 5 (7) ರನ್ ಮತ್ತು ಜೋಸ್ ಬಟ್ಲರ್ 11 (16) ರನ್ ಗಳಿಸಿ ಔಟ್ ಆದರೆ, ನಾಯಕ ಸಂಜು ಸ್ಯಾಮ್ಸನ್ 15 (14) ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಯಾನ್ ಪರಾಗ್ ರವಿಚಂದ್ರನ್ ಅಶ್ವಿನ್ ಜತೆಗೂಡಿ ತಂಡ ಸುಧಾರಿಸಿಕೊಳ್ಳುವಂತೆ ಮಾಡಿದರು. ಅಶ್ವಿನ್ 29 (19) ರನ್ ಗಳಿಸಿ ಹಾಗೂ ಧ್ರುವ್ ಜುರೆಲ್ 20 (12) ರನ್ ಗಳಿಸಿ ಔಟ್ ಆದರು. ಅಂತ್ಯದವರೆಗೂ ಹೋರಾಡಿದ ರಿಯಾನ್ ಪರಾಗ್ 45 ಎಸೆತಗಳಲ್ಲಿ 7 ಬೌಂಡರಿ ಮತ್ತು 6 ಸಿಕ್ಸರ್ ಸಹಿತ ಅಜೇಯ 84 ರನ್ ಬಾರಿಸಿದರು. ಶಿಮ್ರಾನ್ ಹೆಟ್ಮೈರ್ ಅಜೇಯ 14 (7) ರನ್ ಗಳಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ಎನ್ರಿಚ್ ನಾರ್ಕಿಯಾ, ಅಕ್ಷರ್ ಪಟೇಲ್ ಹಾಗೂ ಕುಲ್‌ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.
ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ ಕಣಕ್ಕಿಳಿದರು. ಮಿಚೆಲ್ ಮಾರ್ಷ್ 23 (12) ರನ್ ಗಳಿಸಿದರೆ, ಡೇವಿಡ್ ವಾರ್ನರ್ 49 (35) ರನ್ ಗಳಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಕಿ ಭುಯಿ ಡಕ್‌ಔಟ್, ನಾಯಕ ರಿಷಭ್ ಪಂತ್ 28 (26) ರನ್, ಅಭಿಷೇಕ್ ಪೊರೆಲ್ 9 (10) ರನ್, ಅಕ್ಷರ್ ಪಟೇಲ್ ಅಜೇಯ 15 (13) ರನ್ ಮತ್ತು ಕೊನೆಯಲ್ಲಿ ಗೆಲುವಿನ ನಿರೀಕ್ಷೆ ಹುಟ್ಟಿಸಿದ್ದ ಟ್ರಿಸ್ಟನ್ ಸ್ಟಬ್ಸ್ ಅಜೇಯ 44 (23) ರನ್ ಬಾರಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ನಾಂಡ್ರೆ ಬರ್ಗರ್ 2 ವಿಕೆಟ್, ಯುಜ್ವೇಂದ್ರ ಚಹಲ್ 2 ವಿಕೆಟ್ ಹಾಗೂ ಅವೇಶ್ ಖಾನ್ ಒಂದು ವಿಕೆಟ್ ಪಡೆದರು.
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…