ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ಗೆ ಗೆಲುವು

ಜೈಪುರ: ಇಲ್ಲಿನ ಸವಾಯಿ ಮಾನ್‌ಸಿಂಗ್‌ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ 9ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಜಸ್ಥಾನ್‌ ರಾಯಲ್ಸ್‌ 12 ರನ್‌ಗಳ ಗೆಲುವು ಸಾಧಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್‌ ಎದುರಾಳಿ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ರಾಯಲ್ಸ್‌ ರಿಯಾನ್‌ ಪರಾಗ್‌ ಅಬ್ಬರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 185 ರನ್‌ ಕಲೆಹಾಕಿ ಡೆಲ್ಲಿ ಕ್ಯಾಪಿಟಲ್ಸ್‌ಗೆ 186 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 173 ರನ್‌ ದಾಖಲಿಸಿತು.
ಕೊ
ರಾಜಸ್ಥಾನ್‌ ರಾಯಲ್ಸ್‌ ಇನ್ನಿಂಗ್ಸ್:‌ ತಂಡ 36 ರನ್‌ಗಳಿಗೆ ತನ್ನ ಮೊದಲ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಆರಂಭಿಕರಾದ ಯಶಸ್ವಿ ಜೈಸ್ವಾಲ್‌ 5 (7) ರನ್ ಮತ್ತು ಜೋಸ್‌ ಬಟ್ಲರ್‌ 11 (16) ರನ್‌ ಗಳಿಸಿ ಔಟ್‌ ಆದರೆ, ನಾಯಕ ಸಂಜು ಸ್ಯಾಮ್ಸನ್‌ 15 (14) ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಯಾನ್‌ ಪರಾಗ್‌ ರವಿಚಂದ್ರನ್‌ ಅಶ್ವಿನ್‌ ಜತೆಗೂಡಿ ತಂಡ ಸುಧಾರಿಸಿಕೊಳ್ಳುವಂತೆ ಮಾಡಿದರು. ಅಶ್ವಿನ್‌ 29 (19) ರನ್‌ ಗಳಿಸಿ ಹಾಗೂ ಧ್ರುವ್‌ ಜುರೆಲ್‌ 20 (12) ರನ್‌ ಗಳಿಸಿ ಔಟ್‌ ಆದರು. ಅಂತ್ಯದವರೆಗೂ ಹೋರಾಡಿದ ರಿಯಾನ್‌ ಪರಾಗ್‌ 45 ಎಸೆತಗಳಲ್ಲಿ 7 ಬೌಂಡರಿ ಮತ್ತು 6 ಸಿಕ್ಸರ್‌ ಸಹಿತ ಅಜೇಯ 84 ರನ್‌ ಬಾರಿಸಿದರು. ಶಿಮ್ರಾನ್‌ ಹೆಟ್ಮೈರ್‌ ಅಜೇಯ 14 (7) ರನ್‌ ಗಳಿಸಿದರು.

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪರ ಖಲೀಲ್‌ ಅಹ್ಮದ್‌, ಮುಖೇಶ್‌ ಕುಮಾರ್‌, ಎನ್ರಿಚ್‌ ನಾರ್ಕಿಯಾ, ಅಕ್ಷರ್‌ ಪಟೇಲ್‌ ಹಾಗೂ ಕುಲ್‌ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಡೇವಿಡ್‌ ವಾರ್ನರ್‌ ಹಾಗೂ ಮಿಚೆಲ್‌ ಮಾರ್ಷ್‌ ಕಣಕ್ಕಿಳಿದರು. ಮಿಚೆಲ್‌ ಮಾರ್ಷ್‌ 23 (12) ರನ್‌ ಗಳಿಸಿದರೆ, ಡೇವಿಡ್‌ ವಾರ್ನರ್‌ 49 (35) ರನ್‌ ಗಳಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಕಿ ಭುಯಿ ಡಕ್‌ಔಟ್‌, ನಾಯಕ ರಿಷಭ್‌ ಪಂತ್‌ 28 (26) ರನ್, ಅಭಿಷೇಕ್‌ ಪೊರೆಲ್‌ 9 (10) ರನ್‌, ಅಕ್ಷರ್‌ ಪಟೇಲ್ ಅಜೇಯ 15 (13) ರನ್‌ ಮತ್ತು ಕೊನೆಯಲ್ಲಿ ಗೆಲುವಿನ ನಿರೀಕ್ಷೆ ಹುಟ್ಟಿಸಿದ್ದ ಟ್ರಿಸ್ಟನ್‌ ಸ್ಟಬ್ಸ್‌ ಅಜೇಯ 44 (23) ರನ್‌ ಬಾರಿಸಿದರು.

ರಾಜಸ್ಥಾನ್‌ ರಾಯಲ್ಸ್‌ ಪರ ನಾಂಡ್ರೆ ಬರ್ಗರ್‌ 2 ವಿಕೆಟ್‌, ಯುಜ್ವೇಂದ್ರ ಚಹಲ್‌ 2 ವಿಕೆಟ್‌ ಹಾಗೂ ಅವೇಶ್‌ ಖಾನ್‌ ಒಂದು ವಿಕೆಟ್‌ ಪಡೆದರು.

andolana

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

50 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

51 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

54 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

56 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago