ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 4 ವಿಕೆಟ್‌ಗಳ ಗೆಲುವನ್ನು ದಾಖಲಿಸುವುದರ ಮೂಲಕ ಕ್ಲಾಲಿಫೈಯರ್ 2 ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದೆ. ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಗೆಲುವಿನ ನಾಗಾಲೋಟವನ್ನು ಕೊನೆಗೊಳಿಸಿ ಟೂರ್ನಿಯಿಂದ ಹೊರಬಿದ್ದಿದೆ. ರಾಜಸ್ಥಾನ್ ರಾಯಲ್ಸ್ 24ರಂದು ನಡೆಯಲಿರುವ ಕ್ವಾಲಿಫೈಯರ್ 2 ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಾಡಲಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿ ರಾಜಸ್ಥಾನ್‌ಗೆ 173 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ 19 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 174 ರನ್ ಕಲೆಹಾಕಿತು.
ಆರ್‌ಸಿಬಿ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಕಣಕ್ಕಿಳಿದರು. ಕೊಹ್ಲಿ 33 (24) ರನ್ ಗಳಿಸಿದರೆ, ಡುಪ್ಲೆಸಿಸ್ 17 (14) ರನ್ ಗಳಿಸಿದರು. ಇನ್ನುಳಿದಂತೆ ಕೆಮರಾನ್ ಗ್ರೀನ್ 27 (21) ರನ್, ರಜತ್ ಪಟಿದಾರ್ 34 (22) ರನ್ ಬಾರಿಸಿದರೆ, ಗ್ಲೆನ್ ಮ್ಯಾಕ್ಸ್‌ವೆಲ್ ಡಕ್‌ಔಟ್ ಆಗಿ ನಿರಾಸೆ ಮೂಡಿಸಿದರು. ದಿನೇಶ್ ಕಾರ್ತಿಕ್ 11 (13) ರನ್, ಮಹಿಪಾಲ್ ಲೊಮ್ರೊರ್ 32 (17) ರನ್, ಕರ್ಣ್ ಶರ್ಮಾ 5 (4) ರನ್ ಮತ್ತು ಸ್ವಪ್ನಿಲ್ ಸಿಂಗ್ ಅಜೇಯ 9 (4) ರನ್ ಕಲೆಹಾಕಿದರು.
ರಾಜಸ್ಥಾನ್ ರಾಯಲ್ಸ್ ಪರ ಅವೇಶ್ ಖಾನ್ 3 ವಿಕೆಟ್, ರವಿಚಂದ್ರನ್ ಅಶ್ವಿನ್ 2 ವಿಕೆಟ್, ಯುಜ್ವೇಂದ್ರ ಚಹಲ್, ಟ್ರೆಂಟ್ ಬೌಲ್ಟ್ ಹಾಗೂ ಸಂದೀಪ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.
ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಟಾಮ್ ಕೊಹ್ಲರ್-ಕ್ಯಾಡ್‌ಮೋರ್ ಕಣಕ್ಕಿಳಿದರು. ಕ್ಯಾಡ್‌ಮೋರ್ 20 (15) ರನ್ ಗಳಿಸಿದರೆ, ಜೈಸ್ವಾಲ್ 45 (30) ರನ್ ಗಳಿಸಿದರು. ಇನ್ನುಳಿದಂತೆ ನಾಯಕ ಸಂಜು ಸಾಮ್ಸನ್ 17 (13) ರನ್, ಮಧ್ಯಮ ಕ್ರಮಾಂಕದಲ್ಲಿ ಕೈಹಿಡಿದ ರಿಯಾನ್ ಪರಾಗ್ 36 (26) ರನ್, ಧ್ರುವ್ ಜುರೆಲ್ 8 (8) ರನ್, ಉತ್ತಮ ಪ್ರದರ್ಶನ ನೀಡಿದ ಶೆಮ್ರಾನ್ ಹೆಟ್ಮೇಯರ್ 26 (14) ರನ್, ಅಂತಿಮ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ರೊವ್‌ಮನ್ ಪೊವೆಲ್ 16 ಅಜೇಯ (8) ರನ್ ಮತ್ತು ರವಿಚಂದ್ರನ್ ಅಶ್ವಿನ್ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೊಹಮ್ಮದ್ ಸಿರಾಜ್ 2 ವಿಕೆಟ್, ಲಾಕಿ ಫರ್ಗ್ಯುಸನ್, ಕರ್ಣ್ ಶರ್ಮಾ ಮತ್ತು ಕೆಮರಾನ್ ಗ್ರೀನ್ ತಲಾ ಒಂದೊಂದು ವಿಕೆಟ್ ಪಡೆದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…