ಕ್ರೀಡೆ

IPL 2024: ಚೆನ್ನೈಗೆ ಸವಾಲಿನ ಗುರಿ ನೀಡಿದ ಆರ್‌ಸಿಬಿ

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಪ್‌ ಆರ್ಡರ್‌ನ ಉತ್ತಮ ಬ್ಯಾಟಿಂಗ್‌ ನೆರವಿನಿಂದ  20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 218 ರನ್‌ ಕಲೆಹಾಕಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಗೆಲ್ಲಲು 219 ರನ್‌ಗಳ ಗುರಿ ನೀಡಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪ್ಲೇಆಫ್‌ ಪ್ರವೇಶಿಸಬೇಕೆಂದರೆ ಕನಿಷ್ಠ 18 ರನ್‌ಗಳ ಗೆಲುವನ್ನು ದಾಖಲಿಸಲೇಬೇಕಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದು ಉತ್ತಮ ಇನ್ನಿಂಗ್ಸ್ ಕಟ್ಟಿಕೊಟ್ಟರು. ಕೊಹ್ಲಿ 47 (29) ರನ್ ಗಳಿಸಿದರೆ, ಡುಪ್ಲೆಸಿಸ್ 54 (39) ರನ್ ಗಳಿಸಿದರು‌. ಮಧ್ಯಮ ಕ್ರಮಾಂಕದಲ್ಲಿ ಅಬ್ಬರಿಸಿದ ರಜತ್‌ ಪಟಿದಾರ್‌ 41 (23) ರನ್‌ ಮತ್ತು ಕೆಮರಾನ್‌ ಗ್ರೀನ್‌ ಅಜೇಯ 38 (17) ರನ್‌ ಬಾರಿಸಿದರು. ಇನ್ನುಳಿದಂತೆ ದಿನೇಶ್‌ ಕಾರ್ತಿಕ್‌ 14 (6) ರನ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ 16 (5) ರನ್‌ ಮತ್ತು ಮಹಿಪಾಲ್‌ ಲೊಮ್ರೊರ್‌ ಒಂದು ಎಸೆತ ಎದುರಿಸಿ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಶಾರ್ದೂಲ್‌ ಠಾಕೂರ್‌ 2 ವಿಕೆಟ್ ಮತ್ತು ಮಿಚೆಲ್‌ ಸ್ಯಾಂಟ್ನರ್‌ ಹಾಗೂ ತುಷಾರ್‌ ದೇಶಪಾಂಡೆ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

2 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago