ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಸಿಎಸ್‌ಕೆ ಮತ್ತು ಎಲ್ಎಸ್‌ಜಿ ನಡುವಿನ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಋತುರಾಜ್ ಗಾಯಕ್ವಾಡ್ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಹೌದು, ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸಿಎಸ್‌ಕೆ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಇದರ ಹೊರತಾಗಿಯೂ ನಾಯಕ ಋತುರಾಜ್ ಗಾಯಕ್ವಾಡ್ ಭರ್ಜರಿಯಾಗಿ ಬ್ಯಾಟ್ ಬೀಸಿ ತಂಡಕ್ಕೆ ಬದ್ರ ಬುನಾದಿ ಹಾಕಿದರು.
ನಾಯಕ ಗಾಯಕ್ವಾಡ್ 56 ಎಸೆತಗಳಲ್ಲಿ ಶತಕ ಪೂರೈಸಿದರು. ಇದರೊಂದಿಗೆ ಅವರು ಸಿಎಸ್‌ಕೆ ಬಳಗದಲ್ಲಿ ಹೊಸ ಮೈಲಿಗಲ್ಲು ಮುಟ್ಟಿದರು. ಅದೇನೆಂದರೇ, ಐಪಿಎಲ್ ಇತಿಹಾಸದಲ್ಲಿಯೇ ಸಿಎಸ್‌ಕೆ ಪರ ಶತಕ ದಾಖಲಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಕ್ಯಾಪ್ಟನ್ ಋತುರಾಜ ಭಾಜನರಾದರು.
ಮಾಜಿ ಕಪ್ತಾನ್ ಎಂ.ಎಸ್ ಧೋನಿ ಅವರು ಐಪಿಎಲ್‌ನಲ್ಲಿ 84ರನ್ ಗಳಿಸಿದ್ದೇ ಸಿಎಸ್‌ಕೆ ನಾಯಕನ ಈವರೆಗಿನ ಗರಿಷ್ಠ ಮೊತ್ತವಾಗಿತ್ತು. ಋತುರಾಜ್ ಶತಕ ಬಾರಿಸುವ ಮೂಲಕ 16 ವರ್ಷಗಳ ಕ್ಯಾಪ್ಟನ್ ಸೆಂಚುರಿ ಬರವನ್ನು ಋತುರಾಜ್ ನೀಗಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಸಿಎಸ್‌ಕೆ ನೀಡಿದ 210ರನ್‌ಗಳ ಗುರಿಯನ್ನು ಸಾರಾಗವಾಗಿ ಬೆನ್ನಟ್ಟಿದ ಎಲ್‌ಎಸ್‌ಜಿ, ಮಾರ್ಕಸ್ ಸ್ಟೋಯ್ನಿಸ್ ಶತಕದ ನೆರವಿನಿಂದ 19.3 ಓವರ್‌ಗಳಲ್ಲಿಯೇ 213 ಬಾರಿಸಿ ಗೆಲುವಿನ ನಗೆ ಬೀರಿತು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…