ಕ್ರೀಡೆ

IPL 2025 | ಅಶುತೋಷ್‌ ಅಮೋಘ ಬ್ಯಾಟಿಂಗ್‌ ; ಡೆಲ್ಲಿಗೆ ರೋಚಕ ಜಯ

ವಿಶಾಖಪಟ್ಟಣಂ: ಇಂಪ್ಯಾಕ್ಟ್‌ ಪ್ಲೇಯರ್‌ ಅಶುತೋಷ್‌ ಶರ್ಮಾ ಅವರ ಅಮೋಘ ಬ್ಯಾಟಿಂಗ್‌ ನೆರವಿನಿಂದ ಡೆಲ್ಲಿ ತಂಡ ರೋಚಕ ಹಣಾಹಣಿಯಲ್ಲಿ ಒಂದು ವಿಕೆಟ್‌ಗಳ ಅಂತರದಿಂದ ಲಖನೌ ತಂಡವನ್ನು ಮಣಿಸುವ ಮೂಲಕ ಮೊದಲ ಗೆಲುವು ದಾಖಲಿಸಿ ಶುಭಾರಂಭ ಮಾಡಿತು.

ಇಲ್ಲಿನ ವೈ.ಎಸ್‌ ರಾಜಶೇಖರ ರೆಡ್ಡಿ ಕ್ರೀಡಾಂಗಣದ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಲಖನೌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 209 ರನ್‌ ಕೆಲಹಾಕಿತು. ಈ ಮೊತ್ತ ಬೆನ್ನತ್ತಿದ ಡೆಲ್ಲಿ 19.3 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 211 ರನ್‌ ಗಳಸಿ 1 ವಿಕೆಟ್‌ಗಳ ಅಂತರದಿಂದ ರೋಚಕ ಗೆಲುವು ದಾಖಲಿಸಿತು.

ಲಖನೌ ಪರ ಮಿಚೆಲ್‌ ಮಾರ್ಷ್‌ 72(36), ನಿಕೋಲಸ್‌ ಪೂರನ್‌ 75(30) ರನ್‌ ಗಳ ನೆರವಿನಿಂದ ತಂಡ ಇನ್ನೂರರ ಗಡಿ ದಾಟಲು ಸಹಕರಿಸಿದರು. ಮಾರ್ಕ್ರಂ 15, , ಮಿಲ್ಲರ್‌ 27, ಆಯುಷ್‌ ಬದೋನಿ 4, ಶಹಬಾಜ್‌ ಅಹ್ಮದ್‌ 9, ನಾಯಕ ಪಂತ್‌, ರವಿ ಬಿಷ್ಣೋಯ್‌ ಹಾಗೂ ಶಾರ್ದುಲ್‌ ಠಾಕೂರ್‌ ಸೇರಿದಂತೆ ಮೂವರು ಬ್ಯಾಟ್ಸ್‌ಮನ್‌ಗಳು ಡಕ್‌ಔಟ್‌ ಆದರು.

ಡೆಲ್ಲಿ ಪರ ಮಿಚೆಲ್‌ ಸ್ಟಾರ್ಕ್‌ ಮೂರು, ಕುಲ್ದೀಪ್‌ ಯಾದವ್‌ ಎರಡು, ಮುಖೇಶ್‌ ಕುಮಾರ್‌ ಹಾಗೂ ವಿಪ್ರಾವ್‌ ನಿಗಮ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಡೆಲ್ಲಿಗೆ ಆರಂಭಿಕ ಆಘಾತ ಎದುರಾಯಿತು. ಜೇಕ್‌ ಫ್ರೆಸರ್‌ ಕೇವಲ ಒಂದು ರನ್‌ಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ನಂತರ ಬಂದ ಅಭಿಷೇಕ್‌ ಪೂರೆಲ್‌ ಡಕ್‌ಔಟ್‌ ಹೊರನಡೆದರು. ಸಮೀರ್‌ ರಿಜ್ವಿ ನಾಲ್ಕು ರನ್‌ಗಳಿಗೆ ಸುಸ್ತಾಗುವ ಮೂಲಕ ತಂಡವನ್ನು ಸಂಕಷ್ಟಕ್ಕೆ ದೂಡಿದರು. ಡೆಲ್ಲಿ ಕೇವಲ 8 ರನ್‌ಗಳಿಗೆ ಪ್ರಮುಖ 3 ವಿಕೆಟ್‌ ಕಳೆದುಕೊಂಡಿತು.

ಬಳಿಕ ಜೊತೆಯಾದ ಫಾಫ್‌ ಡು ಪ್ಲೆಸಿ ಹಾಗೂ ನಾಯಕ ಅಕ್ಷರ್‌ ಪಟೇಲ್‌ ತಂಡಕ್ಕೆ ಚೇತರಿಕೆ ಆಟವಾಡಿದರು. ಈ ಇಬ್ಬರು ಕ್ರಮವಾಗಿ 29(18) ಮತ್ತು 22(11) ರನ್‌ ಗಳಿಸಿ ಔಟಾದರು. ನಂತರ ಸ್ಟಬ್ಸ್‌ 34(22), ವಿಪ್ರಾಜ್‌ ನಿಗಮ್‌ 39(15), ಮಿಚೆಲ್‌ ಸ್ಟಾರ್ಕ್‌ 2, ಕಲ್ದೀಪ್‌ ಯಾದವ್‌ 5 ರನ್‌ ಗಳಿಸಿ ಔಟಾದರು.

ಆದರೆ ಮತ್ತೊಂದೆಡೆ ಛಲ ಬಿಡದೇ ಬ್ಯಾಟ್‌ ಬೀಸಿದ ಇಂಪ್ಯಾಕ್ಟ್‌ ಪ್ಲೇಯರ್‌ ಅಶುತೋಶ್‌ ಶರ್ಮಾ ಔಟಾಗದೇ 31 ಎಸತಗಳಲ್ಲಿ 5 ಬೌಂಡರಿ 5 ಸಿಕ್ಸರ್‌ ಸಹಿತ 66 ರನ್‌ ಬಾರಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ಮೋಹಿತ್‌ ಶರ್ಮಾ ಒಂದು ರನ್‌ ಗಳಿಸಿ ಔಟಾಗದೇ ಉಳಿದರು.

ಲಖನೌ ಪರ ಶಾರ್ದುಲ್‌ ಠಾಕೂರ್‌, ಸಿದ್ಧಾರ್ಥ್‌, ದಿಗ್ವೇಶ್‌ ಹಾಗೂ ರವಿ ಬಿಷ್ಣೋಯ್‌ ತಲಾ ಎರಡೆರೆಡು ವಿಕೆಟ್‌ ಕಬಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

5 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

6 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

7 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

7 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

7 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

7 hours ago