ಚೆನ್ನೈ: ಮುಂಬೈ ಇಂಡಿಯನ್ಸ್ ವಿರುದ್ಧ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಗೆಲುವಿನೊಂದಿಗೆ ಶುಭಾರಂಭ ಮಾಡಿಕೊಂಡಿದೆ.
ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮುಂಬೈ ಇಂಡಿಯನ್ಸ್ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 155 ರನ್ ಗಳಿಸಿತು.
ಈ ಗುರಿ ಬೆನ್ನಟ್ಟಿದ ಚೆನ್ನೈ, ನಾಯಕ ಋತುರಾಜ್ ಗಾಯಕ್‌ವಾಡ್ (53) ಹಾಗೂ ರಚಿನ್ ರವೀಂದ್ರ (65*) ಆಕರ್ಷಕ ಅರ್ಧಶತಕಗಳ ನೆರವಿನಿಂದ ಇನ್ನು ಐದು ಎಸೆತಗಳು ಬಾಕಿ ಇರುವಂತೆಯೇ 19.1 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ತಲುಪಿತು. ಆ ಮೂಲಕ ಮಗದೊಂದು ಸಲ ಐಪಿಎಲ್ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ತಂಡದ ಸೋಲಿನ ಸರಪಣಿ ಮುಂದುವರಿದಿದೆ.