ಕ್ರೀಡೆ

IPL 2025 | ಲಖನೌ ವಿರುದ್ಧ ಚೆನ್ನೈಗೆ ಜಯ

ಲಖನೌ: ಸತತ ಐದು ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಏಳನೇ ಪಂದ್ಯದಲ್ಲಿ ಗೆಲುವು ಸಿಕ್ಕಿದೆ. ನಾಯಕ ಎಂ.ಎಸ್‌ ಧೋನಿ ಹಾಗೂ ಶಿವಂ ದುಬೆ ಅವರ ಜುಗಲ್‌ ಬಂದಿ ಹೋರಾಟಕ್ಕೆ ಗೆಲುವು ಸಿಕ್ಕಿದ್ದು, ಸಿಎಸ್‌ಕೆ 5 ವಿಕೆಟ್‌ಗಳಿಂದ ಲಖನೌ ಸೂಪೃ ಜೈಂಟ್ಸ್‌ ತಂಡವನ್ನು ಮಣಿಸಿದೆ.

ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದ ಲಖನೌ ಸೂಪರ್‌ ಜೈಂಟ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಣ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಲಖನೌ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 166 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ಚೆನ್ನೈ 19.3 ಓವರ್‌ಗಳಲ್ಲಿ 5 ವಿಕೆಟ್‌ ಬಾಕಿ ಇರುವಂತೆ ಗೆಲುವಿನ ದಡ ಸೇರಿತು.

ಲಖನೌ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಲಖನೌಗೆ ನಿರೀಕ್ಷಿತ ಆರಂಭ ಕಂಡುಬರಲಿಲ್ಲ. ಮಾರ್ಕ್ರಂ 6(6) ರನ್‌ಗಳಿಸಿ ಔಟಾದರೇ, ಭರವಸೆ ಆಟಗಾರ ಪೂರನ್‌ ಕೇವಲ 8(9) ರನ್‌ ಗಳಿಸಿ ಪೆವಿಲಿಯನ್‌ ಸೇರಿದರು.

ನಂತರ ಜೊತೆಯಾದ ಮಿಚೆಲ್‌ ಮಾರ್ಷ್‌ ಮತ್ತು ನಾಯಕ ರಿಷಭ್‌ ಪಂತ್‌ ತಂಡಕ್ಕೆ ಚೇತರಿಕೆ ಆಟವಾಡಿದರು. ಮಾರ್ಷ್‌ 30(25), ನಾಯಕ ಪಂತ್‌ 49 ಎಸೆತ, 4 ಬೌಂಡರಿ, 4 ಸಿಕ್ಸರ್‌ ಸಹಿತ 63 ರನ್‌ ಬಾರಿಸಿ ಔಟಾದರು.

ಉಳಿದಂತೆ ಬದೋನಿ 22(17), ಅಬ್ದುಲ್‌ ಸಮದ್‌ 20(11), ಶಾರ್ದುಲ್‌ ಠಾಕೂರ್‌ 6(4) ರನ್‌ ಗಳಿಸಿದರು.

ಚೆನ್ನೈ ಪರ ರವೀಂದ್ರ ಜಡೇಜಾ ಹಾಗೂ ಪತಿರಣ ತಲಾ ಎರಡು ವಿಕೆಟ್‌, ಖಲೀಲ್‌ ಅಹ್ಮದ್‌ ಮತ್ತು ಅನ್ಸುಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಚೆನ್ನೈ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಚೆನ್ನೈಗೆ ಉತ್ತಮ ಆರಂಭ ದೊರೆಯಿತು. ರಶೀದ್‌ 27(19), ರಚಿನ್‌ ರವೀಂದ್ರ 37(22) ರನ್‌ ಗಳಿಸಿ ಔಟಾದರು. ರಾಹುಲ್‌ ತ್ರಿಪಾಟಿ 9(10), ಜಡೇಜಾ 7(11), ವಿಜಯ್‌ ಶಂಕರ್‌ 9(8) ರನ್‌ ಗಳಿಸಿ ಔಟಾದರು.

ಕೊನೆಯಲ್ಲಿ ಒಂದಾದ ನಾಯಕ ಎಂ.ಎಸ್‌ ಧೋನಿ ಹಾಗೂ ಶುವಂ ದುಬೆ ಚೆನ್ನೈ ಗೆಲುವಿಗೆ ಸಹಕರಿಸಿದರು. ಈ ಜೋಡಿ ಐವತ್ತು ರನ್‌ಗಳ ಜೊತೆಯಾಟ ನೀಡಿದರು. ಶಿವಂ ದುಬೆ ನಾಟ್‌ಔಟ್‌ ಆಗಿ 37 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್‌ ಸಹಿತ 43 ರನ್‌ ಗಳಿಸಿದರೇ, ಧೋನಿ ಔಟಾಗದೇ 11 ಎಸೆತಗಳಲ್ಲಿ 4 ಫೊರ್‌ ಹಾಗೂ 1 ಸಿಕ್ಸರ್‌ ಸಹಿತ 26 ರನ್‌ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಲಖನೌ ಪರ ರವಿ ಬಿಷ್ಣೋಯಿ ಎರಡು ವಿಕೆಟ್‌, ದಿಗ್ವೇಶ್‌, ಆವೇಶ್‌ ಖಾನ್‌ ಮತ್ತು ಮಾರ್ಕ್ರಂ ತಲಾ ಒಂದೊಂದು ವಿಕೆಟ್‌ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

4 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

6 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

6 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

7 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

7 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

8 hours ago