ಹೊಸದಿಲ್ಲಿ : 2025ನೇ ಸಾಲಿನ ಐಪಿಎಲ್‌ನ 18ನೇ ಆವೃತ್ತಿಯ 32ನೇ ಪಂದ್ಯ ಸೂಪರ್ ಓವರ್‌ನಲ್ಲಿ ಅಂತ್ಯ ಕಂಡಿದ್ದು, ಈ ಪಂದ್ಯದಲ್ಲಿ ರಾಜಸ್ಥಾನ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಮಣಿಸುವಲ್ಲಿ ಯಶಸ್ವಿಯಾಗಿದೆ.
ಇಲ್ಲಿನ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 188 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ರಾಜಸ್ಥಾನ್ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 188 ರನ್ ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿತು.
ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಆರ್‌ಆರ್ 12 ರನ್ ಗಳಿಸಿದರೇ, ಇದನ್ನು ಬೆನ್ನಟಿದ ಡೆಲ್ಲಿ ಕೇವಲ 4 ಎಸೆತಗಳಲ್ಲಿ 13 ರನ್ ಗಳಿಸಿ ಗೆದ್ದು ಬೀಗಿತು.
ಡೆಲ್ಲಿ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿಗೆ ಆರಂಭಿಕ ಆಘಾತ ಎದುರಾಯಿತು. ಮ್ಯಾಕ್‌ಗಾರ್ಕ್ 9(6) ರನ್ ಗಳಿಸಿ ಔಟಾದರೇ, ಕಳೆದ ಪಂದ್ಯದಲ್ಲಿ ಅರ್ಧಶತಕ ದಾಖಲಿಸಿದ್ದ ಕರುಣ್ ನಾಯರ್ ಡಕ್‌ಔಟ್ ಆಗಿ ಹೊರ ನಡೆದರು.
ಅಭಿಷೇಕ್ 49(37), ಕೆ.ಎಲ್ ರಾಹುಲ್ 38(32), ನಾಯಕ ಅಕ್ಷರ್ ಪಟೇಲ್ 34(14) ರನ್ ಗಳಿಸಿದರು. ಸ್ಟಬ್ಸ್ ಔಟಾಗದೇ 34(18) ರನ್ ಗಳಿಸಿದರೇ, ಅಶುತೋಶ್ ಶರ್ಮಾ ನಾಟ್‌ಔಟ್ ಆಗಿ 15(11) ರನ್ ಗಳಿಸಿದರು.
ರಾಜಸ್ಥಾನ್ ಪರ ಜೋಫ್ರಾ ಆರ್ಚರ್ ಎರಡು ವಿಕೆಟ್, ತೀಕ್ಷಣ ಮತ್ತು ಹಸರಂಗ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ರಾಜಸ್ಥಾನ್ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಆರ್ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಯಶಸ್ವಿ ಜೈಸ್ವಾಲ್ 51(37) ಅರ್ಧಶತಕ ಗಳಿಸಿ ಔಟಾದರೆ, ನಾಯಕ ಸ್ಯಾಮ್ಸನ್ 31(19) ರನ್ ಗಳಿಸಿದರು. ರಿಯಾನ್ ಪರಾಗ್ 8(11), ನಿತೀಶ್ ರಾಣಾ 51(28) ರನ್ ಗಳಿಸಿದರು.
ಕೊನೆಯಲ್ಲಿ ಹೋರಾಟ ಮಾಡಿದ ಹೆಟ್ಮಾಯರ್ ಔಟಾಗದೇ 15(9) ರನ್ ಗಳಿಸಿದರೇ, ಧ್ರುವ್ ಜುರೆಲ್ 26(17) ರನ್‌ಔಟ್ ಆಗಿ ತಂಡವನ್ನು ಗೆಲ್ಲಿಸಿಕೊಡುವಲ್ಲಿ ವಿಫಲರಾದರು. ಪಂದ್ಯ ಟೈ ಆಗುವ ಮೂಲಕ ಈ ಟೂರ್ನಿಯಲ್ಲಿ ಮೊದಲ ಸೂಪರ್ ಓವರ್‌ಗೆ ಸಾಕ್ಷಿಯಾಯಿತು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…