Mysore
25
overcast clouds

Social Media

ಶನಿವಾರ, 04 ಏಪ್ರಿಲ 2026
Light
Dark

IPL 2025 | ಡೆಲ್ಲಿ ಗೆಲುವಿನ ಓಟಕ್ಕೆ ಬ್ರೇಕ್‌ ; ಮುಂಬೈಗೆ 12 ರನ್‌ಗಳ ಜಯ

ಹೊಸದಿಲ್ಲಿ : 2025ರ ಐಪಿಎಲ್‌ನಲ್ಲಿ ಆಡಿದ ನಾಲ್ಕು ಪಂದ್ಯದಲ್ಲೂ ಗೆದ್ದು ಅಜೇಯವಾಗಿ ಮುನ್ನುಗ್ಗುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ನ ಗೆಲುವಿನ ಓಟಕ್ಕೆ ಮುಂಬೈ ಇಂಡಿಯನ್ಸ್‌ ಬ್ರೇಕ್‌ ಹಾಕಿದೆ. ಇಂದು ನಡೆದ ರೋಚಕ ಪಂದ್ಯದಲ್ಲಿ ಡೆಲ್ಲಿ ವಿರುದ್ದ ಪಾಂಡ್ಯ ಪಡೆ ಗೆದ್ದು ಬೀಗಿದೆ.

ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಗೆ ಇಳಿದ ಮುಂಬೈ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 205 ರನ್‌ ಕಲೆ ಹಾಕಿತು.

ಈ ಮೊತ್ತ ಬೆನ್ನತ್ತುವಲ್ಲಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್ 19 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ ಕಳೆದುಕೊಂಡು 193 ರನ್‌ ಗಳಿಸಿ ಮುಂಬೈಗೆ ಶರಣಾಯಿತು.

Tags:
error: Content is protected !!