ಕ್ರೀಡೆ

IPL 2025 FINAL | ಪಂಜಾಬ್‌ ಗೆಲುವಿಗೆ 191 ಗುರಿ ನೀಡಿದ ಆರ್‌ಸಿಬಿ

ಅಹಮದಾಬಾದ್‌ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಯಲ್ಲಿ ಪಂಜಾಬ್‌ ವಿರುದ್ಧ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ ತಂಡವು ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ ನಷ್ಟಕ್ಕೆ 190 ರನ್‌ ಪೇರಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಗೆ ಫಿಲ್‌ಸಾಲ್ಟ್‌ (16)ಆರಂಭಿಕವಾಗಿ ಬಿರುಸನ್ನು ಕಟ್ಟಿಕೊಟ್ಟರು. ಆದರೆ ಸಾಲ್ಟ್‌ ಹೆಚ್ಚು ಹೊತ್ತು ನಿಲ್ಲದೆ ಶ್ರೇಯಸ್‌ ಅಯ್ಯರ್‌ಗೆ ಕ್ಯಾಚ್‌ ಇತ್ತರು.

ಭರವಸೆ ಆಟಗಾರ ವಿರಾಟ್‌ ಕೊಹ್ಲಿ ಎಚ್ಚರಿಕೆಯ ಇನ್ನಿಂಗ್ಸ್‌ ಕಟ್ಟಿದರು ಆದರೆ ಕೊಹ್ಲಿ(43) ಅರ್ಧಶತಕದ ಅಂಚಿನಲ್ಲಿ ಎಡವಿದರು. ಮಯಂಕ್‌ ಅಗರವಾಲ್‌(24)  ಕೊಹ್ಲಿಗೆ ಉತ್ತಮ ಬೆಂಬಲ ನೀಡಿದರು ಜೊತೆಯಾಡುದಲ್ಲಿ ವಿಫಲರಾದರು.

ನಾಯಕ ರಜತ್‌ ಪಾಟೀದರ್‌ 16 ಎಸೆತಗಳಲ್ಲಿ 26 ರನ್‌ ಗಳಿಸಿ ಔಟ್‌ ಆದರು. ಮತ್ತೊಂದೆಡೆ ಜಿತೇಶ್‌ ಶರ್ಮಾ ಹಾಗೂ ಲಿಯಾಮ್‌ ಲಿವಿಂಗ್‌ಸ್ಟೋನ್‌ ಬಿರುಸಿನ ಆಟವಾಡುವ ಮೂಲಕ ಸವಾಲಿನ ಮೊತ್ತ ಪೇರಿಸುವಲ್ಲಿ ಯಶಸ್ವಿಯಾದರು.

ಅಂತಿಮವಾಗಿ ಆರ್‌ಸಿಬಿ ಒಂಬತ್ತು ವಿಕೆಟ್‌ ನಷ್ಟಕ್ಕೆ 190ರನ್‌ ಗಳಿಸಿ ಪಂಜಾಬ್‌ಗೆ 191 ಗುರಿ ಒಡ್ಡಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

2 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

3 hours ago